ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಗಳಖೋಡ ಮಠದ ಸಭಾಭವನ ನಿರ್ಮಿಸಲು ಉದಾರವಾಗಿ ಭಕ್ತರು ದೇಣಿಕೆ ನೀಡಬೇಕು.ದಾನ, ದಾಸೋಹ ಅಂದರೆ ನಾಲ್ಕು ಜನರಿಗೆ ಕರೆದು ಊಟ ಹಾಕಿಸುವುದಲ್ಲ.ಅದು ದಾನದ ಒಂದು ಭಾಗ.ನಮ್ಮ ತಾಲ್ಲೂಕಿನಲ್ಲಿ ಗುತ್ತಿಗೆದಾರರ ಕಾಟ ಬಹಳವಾಗಿದೆ.ಕೆಲವು ಗುತ್ತಿಗೆದಾರರು ಸರ್ಕಾರಿ ಕೆಲಸ ಮಾಡಿದರೆ 20 ವರ್ಷದಲ್ಲಿಯೇ ಬಿದ್ದು ಹೋಗುವಂಗೆ ಮಾಡುತ್ತಾರೆ.ಅದೇ ತಮ್ಮ ಸ್ವಂತ ಕೆಲಸ ಮಾಡಿದರೆ 200 ವರ್ಷ ಬಾಳಿಕೆ ಬರುವಂತೆ ಕೆಲಸ ಮಾಡುತ್ತಾರೆ.ಧರ್ಮದ ಕೆಲಸಕ್ಕಾಗಿ ಹಣ ಉಳ್ಳವರು ದಾನ,ದಾಸೋಹ ಮಾಡಬೇಕು.ಇದರ ಕೊರತೆ ನಮ್ಮಲ್ಲಿ ತುಂಬಾ ಇದೆ.ಇನ್ನೊಬ್ಬರನ್ನು ಟೀಕೆ ಮಾಡುವ ಬದಲಾಗಿ ನಮ್ಮ ಧರ್ಮದ ನ್ಯೂನ್ಯತೆಯನ್ನು ಸರಿಪಡಿಸಿಕೊಳ್ಳುವ ಕೆಲಸ ಮಾಡಬೇಕು.ಕೊಟ್ಟಿದ್ದನ್ನು ಕೊಟ್ಟಿದ್ದಾಗಿ ಡಂಗೂರ ಸಾರಿಸುವುದಲ್ಲ ಎಂದು ಹೇಳಿದರು.

ಸಿದ್ಧನಕೊಳ್ಳದ ಶಿವಕುಮಾರ ಸ್ವಾಮೀಜಿ, ಏಪಿಎಂಸಿ ಮಾಜಿ ಉಪಾಧ್ಯಕ್ಷ ವಾಯ್.ಎಚ್.ವಿಜಯಕರ್ ಮಾತನಾಡಿದರು. ಗೋವಾ ಕಸಾಪ ಅಧ್ಯಕ್ಷ ಸಿದ್ದಣ್ಣ ಮೇಟಿ,ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ,ಕಸಾಪ ತಾಲ್ಲೂಕು ಅಧ್ಯಕ್ಷ ಕಾಮರಾಜ ಬಿರಾದಾರ, ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಸರ್ಕಾರಿ ಆಸ್ಪತ್ರೆಯ ನಾಮನಿರ್ದೇಶಿತ ಸದಸ್ಯ ಸದು ಮಠ,ಮಹ್ಮದರಫೀಕ ಶಿರೋಳ,ಮುಖಂಡರಾದ ಹುಸೇನ್ ಮುಲ್ಲಾ, ಪುರಸಭೆ ಮಾಜಿ ಸದಸ್ಯ ಸದಾಶಿವ ಮಾಗಿ,ಯಲ್ಲಾಲಿಂಗ ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಎಸ್.ಹುನಗುಂದ ಇದ್ದರು.ಎಸ್.ಕೆ.ಹರನಾಳ ನಿರೂಪಿಸಿದರು.ಯಲ್ಲಾಲಿಂಗ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ