ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ ಎಂಬುದನ್ನು ಮನಗಾಣಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಮಾರುತಿ ನಗರದಲ್ಲಿ ಶುಕ್ರವಾರ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಸರ್ಕಾರಿ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರನ್ನು ನಿಯೋಜಿಸಲಾಗಿರುತ್ತದೆ.ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಸಾಗಿ ಬಂದವರು ಇರುತ್ತಾರೆ.ಆದರೆ ಸ್ಪರ್ಧಾತ್ಮಕ ಪರೀಕ್ಷೆ ಅನುತ್ತೀರ್ಣರಾಗಿ ಬಂದವರು ಖಾಸಗಿ ಶಾಲೆಗಳಲ್ಲಿರುತ್ತಾರೆ.ಅಂತಹವರು ಇರುವ ಶಾಲೆಗಳಲ್ಲಿ ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗುತ್ತದೆ ಎಂದು ನಂಬಿಕೊAಡಿರುವ ಪಾಲಕರ ಅಭಿಪ್ರಾಯ ಬದಲಾಗಬೇಕಿದೆ ಎಂದರು.

ಇತ್ತೀಚಿಗೆ ಹಾಸ್ಟೆಲ್‌ಗಳ ಮೇಲೆ ಒತ್ತಡ ಹೆಚ್ಚುತ್ತಿದೆ.ಮಕ್ಕಳು ಮನೆಯಲ್ಲಿದ್ದರೆ ಮೊಬೈಲ್,ಟಿವಿ ದಾಸರಾಗುತ್ತಾರೆ.ಗೆಳೆಯರ ಜೊತೆ ಹೊರಗಡೆ ಹರಟೆ ಹೊಡೆಯಲು ಹೋಗುತ್ತಾರೆ.ಚೆನ್ನಾಗಿ ಓದುವುದಿಲ್ಲ ಎಂಬ ಭಾವನೆಯಿಂದ ಮಕ್ಕಳನ್ನು ಹಾಸ್ಟೆಲ್‌ನಲ್ಲಿ ಸೇರಿಸುವುದಕ್ಕೆ ಮುಂದಾಗುತ್ತಿದ್ದಾರೆ.ವಿಶೇಷವಾಗಿ ಸರಕಾರಿ ಹಾಸ್ಟೆಲ್, ಶಾಲೆಗಳಲ್ಲಿ ಓದುವ ಮಕ್ಕಳು ಉನ್ನತ ಅಂಕ ಪಡೆದುಕೊಳ್ಳುತ್ತಾರೆ.ಮೂಲಸೌಕರ್ಯ ಹೆಚ್ಚಿರುತ್ತದೆ.ಬಡವರ ಮಕ್ಕಳಷ್ಟೇ ಅಲ್ಲಿ ಓದುತ್ತಾರೆ ಎನ್ನುವುದಕ್ಕಿಂತ ಇಂದು ಉಳ್ಳವರು ತಮ್ಮ ಮಕ್ಕಳನ್ನು ಹಾಸ್ಟೆಲ್‌ಗಳಿಗೆ ಸೇರಿಸುತ್ತಿದ್ದಾರೆ ಎಂದರು.

ಪಿಡಬ್ಲೂö್ಯಡಿ ಎಇಇ ಎ.ಬಿ.ರೆಡ್ಡಿ ಮಾತನಾಡಿ, ಎಸ್.ಸಿ.ಪಿ/ಟಿಎಸ್‌ಪಿ ಅನುದಾನದ ಅಡಿಯಲ್ಲಿ 6.50 ಕೋಟಿ ರೂ.ವೆಚ್ಚದಲ್ಲಿ ಕಾಲಮಿತಿಯಲ್ಲಿ ಈ ಕಾಮಗಾರಿ ಪೂರ್ಣಗೊಂಡಿದೆ.100ವಿದ್ಯಾರ್ಥಿಗಳ ಸಾಮರ್ಥ್ಯ ಹಾಸ್ಟೆಲ್‌ನಲ್ಲಿದ್ದು ಶುದ್ಧ ಕುಡಿವ ನೀರಿನ ಘಟಕ,ಪುಸ್ತಕ ಇಡಲು ಗ್ರಂಥಾಲಯ,ಇAಟರನೆಟ್ ಸೌಲಭ್ಯ,ಸಿಸಿಟಿವಿ ಅಳವಡಿಸಲಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಸಂತಿ ಮಠ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೆಣ್ಣು ಮಕ್ಕಳಿಗೆ 10ನೇ ತರಗತಿ ಮುಗಿದ ಕೂಡಲೇ ಶಾಲೆಯನ್ನು ಬಿಡಿಸುವ ಮನೋಭಾವ ಪಾಲಕರಲ್ಲಿದೆ.ಆದರೆ ಸರ್ಕಾರ ಇಂತಹ ವಸತಿ ನಿಲಯಗಳನ್ನು ಆರಂಭಿಸುವ ಮೂಲಕ ಹೆಣ್ಣು ಮಕ್ಕಳು ಉನ್ನತ ಶಿಕ್ಷಣಕ್ಕೆ ದಾರಿಯಾಗಲು ಅವಕಾಶ ದೊರೆಯುತ್ತದೆ.ಈ ವಸತಿ ನಿಲಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದರೆ ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗಿ ಸರಿಯಾದ ಸಮಯಕ್ಕೆ ನಿಲಯದಲ್ಲಿರಲು ಅನುಕೂಲವಾಗುತ್ತದೆ ಎಂದು ಹೇಳಿದರು. ತಾಪಂ ಪ್ರಭಾರ ಇಒ ಸಂಗನಗೌಡ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಗಣ್ಯರಾದ ಸತೀಶ ಓಸ್ವಾಲ್, ಶ್ರೀಕಾಂತ ಚಲವಾದಿ,ಪುರಸಭೆ ಮಾಜಿ ಸದಸ್ಯ ವೀರೇಶ ಹಡಲಗೇರಿ,ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಆನಂದಗೌಡ ಬಿರಾದಾರ,ಗುತ್ತಿಗೆದಾರ ಅರುಣ ಮಠ ಮತ್ತಿತರರು ಇದ್ದರು.ಟಿ.ಡಿ.ಲಮಾಣಿ ನಿರೂಪಿಸಿದರು.

ವಸತಿ ನಿಲಯದ ಕಟ್ಟಡದ ಬಗ್ಗೆ ಶಾಸಕರ ಅಸಮಾಧಾನ:
ವಸತಿ ನಿಲಯದ ಮುಂಭಾಗದಲ್ಲಿರುವ ಕಂಪೌAಡ್ ಅತ್ಯಂತ ಕೆಳಮಟ್ಟದಲ್ಲಿರುವುದಕ್ಕೆ ಶಾಸಕ ಸಿ.ಎಸ್.ನಾಡಗೌಡ ಆಕ್ಷೇಪ ವ್ಯಕ್ತಪಡಿಸಿದರು.ಹೆಣ್ಣುಮಕ್ಕಳಿರುವ ಹಾಸ್ಟೆಲ್ ಇದಾಗಿದ್ದು ಹೆಚ್ಚಿನ ಭದ್ರತೆ ಇರಬೇಕು.ಆದರೆ ಪುಂಡಪೋಕರಿಗಳು ತಡೆಗೋಡೆ ಜಿಗಿದು ಹೋಗಲು ಆಗುವಂತೆ ಕೆಳಮಟ್ಟದಲ್ಲಿ ತಡೆಗೋಡೆ ಇದೆ.ಇದನ್ನು ಎತ್ತರಿಸಿ ತಂತಿಬೇಲಿ ಅಳವಡಿಸಿ ಎಂದು ಹೇಳಿದರಲ್ಲದೇ ಇಂಜಿನಿಯರ್ ಕಟ್ಟಡ ಕಾಮಗಾರಿ ಮಾಡುವಾಗ ಗಮನಿಸಲಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.ಕಟ್ಟಡ ಇನ್ನುಳಿದ ಸುತ್ತಮುತ್ತಲಿನ ಕಟ್ಟಡಕ್ಕಿಂತ ಕೆಳಮಟ್ಟದಲ್ಲಿದ್ದು ಮಳೆಗಾಲದಲ್ಲಿ ನೀರು ಹಾಸ್ಟೆಲ್ ಆವರಣದಲ್ಲಿಯೇ ನಿಲ್ಲುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ