ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ಬಾಗಲಕೋಟ ಉಪಚುನಾವಣೆಯಲ್ಲಿ ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯಿAದ ಬಿಜೆಪಿಗೆ ಲೀಡ್ ತಂದುಕೊಡದಿದ್ದರೆ ತಮ್ಮ ರೈತಮೋರ್ಚಾ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ದ,ಮುದ್ದೇಬಿಹಾಳ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ತಾವು ಹೇಳಿದಂತೆ ನಡೆದುಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ,ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಾಗಲಕೋಟ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಉಮೇಶ ಮೇಟಿ ಅವರ ಗೆಲುವಿಗೆ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿ.ಕೆ.ಶಿವಕುಮಾರ,ಉಸ್ತುವಾರಿ ವಹಿಸಿಕೊಂಡಿದ್ದ ಬಿ.ಕೆ.ಹರಿಪ್ರಸಾದ್,ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ ಸೇರಿದಂತೆ ಸಚಿವರು,ಶಾಸಕರು,ಪಕ್ಷದ ಕಾರ್ಯಕರ್ತರು ಹಗಲಿರಳು ಶ್ರಮಿಸಿ ಮೇಟಿ ಅವರ ಗೆಲುವು ತಂದುಕೊಟ್ಟಿದ್ದಾರೆ ಎಂದು ತಿಳಿಸಿದರು.

ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯ ಉಸ್ತುವಾರಿಯನ್ನು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ವಹಿಸಲಾಗಿತ್ತು.ಕಳೆದ ಬಾರಿ ಚುನಾವಣೆಗಿಂತ ಈ ಬಾರಿಯ ಚುನಾವಣೆಯಲ್ಲಿ ಎಂಟು ಸಾವಿರ ಮತಗಳ ಅಂತರದ ಲೀಡ್‌ನ್ನು ತಂದುಕೊಡಲು ನಮ್ಮ ನಾಯಕರು ಶ್ರಮಿಸಿದ್ದಾರೆ.ಅದೇ ಜಿಪಂ ಕ್ಷೇತ್ರಕ್ಕೆ ಇಲ್ಲಿನ ಮಾಜಿ ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ ಅವರು ಉಸ್ತುವಾರಿಗಳಾಗಿದ್ದರು.ಚುನಾವಣೆ ಪ್ರಚಾರದ ಸಮಯದಲ್ಲಿ ಬಿಜೆಪಿ ಅಭ್ಯರ್ಥಿಗೆ 20 ಸಾವಿರ ಲೀಡ್ ತಂದುಕೊಡುವುದಾಗಿ ಭಾಷಣ ಮಾಡಿದ್ದರು.ಒಂದು ವೇಳೆ ಲೀಡ್ ತಂದುಕೊಡದಿದ್ದರೆ ನನ್ನ ರೈತಮೋರ್ಚಾ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು.ಅದರಂತೆ ನಡಹಳ್ಳಿಯವರು ಮಾತುಕೊಟ್ಟಂತೆ ತಮ್ಮ ರೈತಮೋರ್ಚಾ ರಾಜ್ಯ ಘಟಕದ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕುಂಟೋಜಿ ಸಲಹೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಗ್ಯಾರಂಟಿ ಸಮೀತಿ ತಾಲ್ಲೂಕು ಉಪಾಧ್ಯಕ್ಷ ಲಕ್ಷö್ಮಣ ಲಮಾಣಿ, ಮಹಿಳಾ ಘಟಕದ ಅಧ್ಯಕ್ಷೆ ಅಕ್ಷತಾ ಚಲವಾದಿ, ಸರ್ಕಾರಿ ಆಸ್ಪತ್ರೆ ನಾಮನಿರ್ದೇಶಿತ ಸದಸ್ಯ ಮಹ್ಮದರಫೀಕ ಶಿರೋಳ,ಪಕ್ಷದ ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಭಜಂತ್ರಿ ಮಾತನಾಡಿದರು.ಪಕ್ಷದ ಪದಾಧಿಕಾರಿಗಳಾದ ಸರಸ್ವತಿ ಪೀರಾಪೂರ,ಮಾಬುಬಿ ಬಾಗವಾನ,ಸುಜಾತಾ ಸಿಂಧೆ,ಹೀನಾ ಕೌಸರ,ಸುಚೀತ ಚಳಗೇರಿ,ಸಮೀರ ದ್ರಾಕ್ಷಿ ಮತ್ತಿತರರು ಇದ್ದರು.

ಕಾಂಗ್ರೆಸ್ ಗೆಲುವು : ಕಾರ್ಯಕರ್ತರ ವಿಜಯೋತ್ಸವ:
ಬಾಗಲಕೋಟ ಹಾಗೂ ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಎನ್.ಎಸ್.ಯೂ.ಐ,ಯುವ ಕಾಂಗ್ರೆಸ್,ಮಹಿಳಾ ಕಾಂಗ್ರೆಸ್ ಘಟಕದವರು ಬಸವೇಶ್ವರ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳೇ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಿವೆ ಎಂದು ಮುಖಂಡ ಸದ್ದಾಂ ಕುಂಟೋಜಿ,ಮಹ್ಮದರಫೀಕ ಶಿರೋಳ ಹೇಳಿದರು.ಪಕ್ಷದ ಮೂರು ಘಟಕದ ಪದಾಧಿಕಾರಿಗಳು ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ