ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಕಾರಿನ ಮೇಲೆ ಬ್ಯಾಗಿನಲ್ಲಿ ಇಟ್ಟಿದ್ದ 30 ಗ್ರಾಂ ಬಂಗಾರದ ಆಭರಣಗಳು ಜಾರಿ ಬಿದ್ದಿದ್ದು ಅದನ್ನು ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಮೂವರು ಯುವಕರು ಕಳೆದುಕೊಂಡಿದ್ದ ಮಹಿಳೆಗೆ ಮರಳಿ ಪ್ರಾಮಾಣಿಕತೆ ತೋರಿದ್ದಾರೆ.

ಮುದ್ದೇಬಿಹಾಳದಿಂದ ಹಿರೇಮುರಾಳ ಕಡೆಗೆ ಮದುವೆ ಕಾರ್ಯಕ್ಕೆ ತೆರಳುತ್ತಿದ್ದ ಮಂಜುಳಾ ಅಶೋಕ ಅರ್ಮನ ಎಂಬುವರ ಚಿನ್ನಾಭರಣ ರಸ್ತೆಯಲ್ಲಿ ಬಿದ್ದಿವೆ. ಮುದ್ದೇಬಿಹಾಳದಿಂದ ನಾಲತವಾಡ ಕಡೆಗೆ ತೆರಳುತ್ತಿದ್ದ ಯುವಕರಾದ ಅಣ್ಣಾಜಿ ನೇಮಪ್ಪ ರಾಥೋಡ, ದೇವರಾಜ್ ಭೀಮಪ್ಪ ಗಾಂಜಿ ಮತ್ತು ಪರಶುರಾಮ ಯಮನಪ್ಪ ಚಲವಾದಿ ಅವರು ತಮಗೆ ಚಿಕ್ಕ ಬಂಗಾರದ ಆಭರಣಗಳನ್ನು ನೇರವಾಗಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಬ್ಯಾಗನ್ನು ಪರಿಶೀಲಿಸಿ ಅದರಲ್ಲಿದ್ದ ವಾರಸುದಾರರ ದಾಖಲೆಗಳನ್ನು ಪರಿಶೀಲನೆ ಮಾಡಿ ಅವರನ್ನು ಸಂಪರ್ಕ ಮಾಡಿ ವಾಪಸ್ ಕಳೆದುಕೊಂಡಿದ್ದ ಬಂಗಾರದ ಸಾಮಾನುಗಳನ್ನು ಮಂಜುಳ ಅಶೋಕ ಆರ್ಮನ ಅವರಿಗೆ ವಾಪಸ್ ಮರಳಿಸಿದ್ದಾರೆ.

ಪಿಎಸ್‌ಐ ಸಂಜಯ ತಿಪರೆಡ್ಡಿ ಮಾತನಾಡಿ, ಇಂತಹ ದಿನಮಾನಗಳಲ್ಲೂ ಪ್ರಾಮಾಣಿಕತೆ ಇಂತಹ ಯುವಕರ ಮೂಲಕ ಜೀವಂತ ಇದೆ ಎಂಬುದು ಕಂಡಾಗ ಹೆಮ್ಮೆ ಎನ್ನಿಸುತ್ತದೆ.ಚಿನ್ನಾಭರಣ ಮರಳಿಸಿದ ಯುವಕರ ಪ್ರಾಮಾಣಿಕತೆಯನ್ನು ಇಲಾಖೆಯಿಂದ ಪ್ರಶಂಸಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಪರಾಧ ವಿಭಾಗದ ಪಿಎಸ್‌ಐ ಆರ್.ಎಸ್.ಭಂಗಿ,ಪೊಲೀಸ್ ಇಲಾಖೆ ಸಿಬ್ಬಂದಿ ಸಂಗಮೇಶ ಚಲವಾದಿ ಇದ್ದರು.ರಸ್ತೆಯಲ್ಲಿ ಹತ್ತು ರೂಪಾಯಿ ಬಿದ್ದರೂ ಅಕ್ಕಪಕ್ಕ ಯಾರಾದರೂ ಇದ್ದಾರೆಯೇ ಎಂದು ಜೇಬಿಗೆ ಇಳಿಸಿಕೊಂಡು ಹೋಗುವವರಿರುವ ಕಾಲದಲ್ಲಿ ಚಿನ್ನಾಭರಣ ಮರಳಿಸಿರುವ ಯುವಕರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ