ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ ತಾಲ್ಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಕೋಳೂರುಗೆ ಮತ್ತೆ ಎರಡು ಅಂಕಗಳು ಬಂದಿದ್ದು ಅದರೊಂದಿಗೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.
ತಾಳಿಕೋಟಿ ಪಟ್ಟಣದ ನಿವಾಸಿಯಾಗಿರುವ ಗಂಗಮ್ಮ ಅಶೋಕ ಕೋಳೂರ ಈ ಮೊದಲು ಫಲಿತಾಂಶ ಬಂದಾಗ 623 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಳು.ಆದರೆ ಶಾಲೆಯ ಆಡಳಿತ ಮಂಡಳಿಯವರು,ಪಾಲಕರು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಮತ್ತೆ ಎರಡು ಅಂಕಗಳು ದೊರೆತಿದ್ದು 625ಕ್ಕೆ ಪೂರ್ಣ ಅಂಕದೊOದಿಗೆ ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾಳೆ.
ಕನ್ನಡ 125,ಗಣಿತ 100,ಹಿಂದಿ 100, ಸಮಾಜ ವಿಜ್ಞಾನ 100,ಇಂಗ್ಲಿಷ್ ಹಾಗೂ ವಿಜ್ಞಾನಕ್ಕೆ ತಲಾ 99 ಅಂಕಗಳನ್ನು ಪಡೆದುಕೊಂಡಿದ್ದಳು.
ಮರು ಮೌಲ್ಯಮಾಪನದಲ್ಲಿ ಇಂಗ್ಲಿಷ್ ಹಾಗೂ ವಿಜ್ಞಾನಕ್ಕೆ ತಲಾ ಒಂದು ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾಳೆ.
ಮರುಮೌಲ್ಯಮಾಪನದಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿದ್ದಂತೆ ಶಾಲೆಯ ಅಧ್ಯಕ್ಷ ನಾನಾಗೌಡ ನಡುವಿನಮನಿ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಾಗ ನಮ್ಮ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಳ್ಳುತ್ತಾಳೆ ಎಂಬ ನಿರೀಕ್ಷೆ ಇತ್ತು.ಆದರೆ 623 ಅಂಕ ಪಡೆದುಕೊಂಡಿದ್ದು ಗಮನಕ್ಕೆ ಬಂದಾಗ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದೇವು.ಈಗ 625 ಅಂಕಗಳೊOದಿಗೆ ಗಂಗಮ್ಮ ಕೋಳೂರು ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದು ನಮ್ಮ ಶಾಲೆಯ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಬೆಳಗಿಸಿದ್ದಾಳೆ ಎಂದು ಸಂತಸ ವ್ಯಕ್ತಪಡಿಸಿದರು.
ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು,ಶಾಲೆಯ ಮುಖ್ಯಗುರುಗಳು ಅಭಿನಂದಿಸಿದ್ದಾರೆ.
SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್
SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್
Latest News
ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’
ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ
ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್
ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ
ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ
ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ
ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ
ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!
ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ
ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ
ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ







