ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







