ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ “ಪರಿಸರ ರಕ್ಷಕ” ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು, ಹಸಿರು ತೋರಣ ಗೆಳೆಯರ ಬಳಗ, 10ನೇ ಕ್ರಾಸ್, ಹುಡ್ಕೋ ಬಡಾವಣೆ, ಮುದ್ದೇಬಿಹಾಳ-586212 ಇಲ್ಲಿಗೆ ತಲುಪಿಸಬೇಕು.
ಪರಿಸರ ಕ್ಷೇತ್ರದಲ್ಲಿ ಎಲೆಮರೆಯಂತೆ ಕಾರ್ಯ ನಿರ್ವಹಿಸುತ್ತಿರುವ ಸಾಧಕರ ಹೆಸರುಗಳನ್ನು ಸಾರ್ವಜನಿಕರೂ ಮುಕ್ತವಾಗಿ ಶಿಫಾರಸು ಮಾಡಬಹುದು. ಪ್ರಶಸ್ತಿಗಳನ್ನು ಜೂನ 7 ರಂದು ಭಾನುವಾರ ಬೆಳಿಗ್ಗೆ 8 ಗಂಟೆಗೆ ನಡೆಯುವ “ವಿಶ್ವ ಪರಿಸರ ದಿನಾಚರಣೆ” ಕಾರ್ಯಕ್ರಮದಲ್ಲಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಮೊ. 9449431022, 9481081588, 6363020440, 9448442101 ಸಂಖ್ಯೆಗಳನ್ನು ಸಂಪರ್ಕಿಸಬೇಕು ಎಂದು ಬಳಗದ ಅಧ್ಯಕ್ಷ ಅಮರೇಶ ಗೂಳಿ, ಕಾರ್ಯದರ್ಶಿ ಬಸವರಾಜ ಬಿಜ್ಜೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







