ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ ಟಿಸಿ ಒದಗಿಸುವಲ್ಲಿ ವಿಳಂಬ ಧೋರಣೆ ಖಂಡಿಸಿದ ರೈತರು ಸೋಮವಾರ ಇಲ್ಲಿನ ಹೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಅನೇಕ ಗ್ರಾಮಗಳಿಂದ ಬಂದಿದ್ದ ರೈತರು ತಮ್ಮೂರುಗಳಲ್ಲಿ ಎದುರಿಸುತ್ತಿರುವ ವಿದ್ಯುತ್ ಸಂಬoಧಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ತಾಲ್ಲೂಕಿನಲ್ಲಿ ವಿದ್ಯುತ್ ಸರಬರಾಜು ಅಸ್ತವ್ಯಸ್ತವಾಗಿದ್ದು, ರೈತರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರದ ನಿಯಮಾನುಸಾರ ರೈತರ ಪಂಪ್ ಸೆಟ್‌ಗಳಿಗೆ ದಿನಕ್ಕೆ 7 ಗಂಟೆಗಳ ವಿದ್ಯುತ್ ಪೂರೈಕೆ ಆಗಬೇಕು.ಆದರೆ ಅದು ಸಮರ್ಪಕವಾಗಿ ಆಗುತ್ತಿಲ್ಲ. ಇದರಿಂದ ಕುಡಿಯುವ ನೀರಿನ ಸಮಸ್ಯೆ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅಡಚಣೆ ಉಂಟಾಗಿದೆ ಎಂದು ದೂರಿದರು.

ಮಿಂಚು ಹಾಗೂ ಇತರ ಕಾರಣಗಳಿಂದ ಅನೇಕ ರೈತರ ಟ್ರಾನ್ಸ್ಫಾರ್ಮರ್‌ಗಳು (ಟಿಸಿ) ಸುಟ್ಟು ಹೋಗಿದ್ದು, ಈ ಕುರಿತು ಸಂಬoಧಪಟ್ಟ ಲೈನ್‌ಮನ್, ಸೆಕ್ಷನ್ ಅಧಿಕಾರಿಗಳು, ಜೆ.ಇ. ಹಾಗೂ ಎ.ಇ.ಇ. ಅವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ.ಸರ್ಕಾರವು ರೈತರಿಗೆ ಅನುಕೂಲವಾಗುವಂತೆ ಮುದ್ದೇಬಿಹಾಳದಲ್ಲಿ ಟ್ರಾನ್ಸ್ಫಾರ್ಮರ್ ದುರಸ್ತಿ ಕೇಂದ್ರವನ್ನು ಸ್ಥಾಪಿಸಿದ್ದರೂ, ಅದನ್ನು ಸಮರ್ಪಕವಾಗಿ ಬಳಸದೇ ರೈತರು ತಮ್ಮ ಸ್ವಂತ ವಾಹನಗಳಲ್ಲಿ ಟ್ರಾನ್ಸ್ಫಾರ್ಮರಗಳನ್ನು ಬೇರೆಡೆಗೆ ಸಾಗಿಸಿ ದುರಸ್ತಿ ಮಾಡಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರದ ನಿಯಮಾನುಸಾರ ಇಲಾಖೆಯೇ ಟ್ರಾನ್ಸ್ಫಾರ್ಮರ್‌ಗಳನ್ನು ಸಾಗಿಸಿ, ದುರಸ್ತಿ ಮಾಡಿ, ನಿಗದಿತ ಅವಧಿಯಲ್ಲಿ ಮರುಸ್ಥಾಪಿಸಬೇಕಾಗಿದ್ದರೂ ಅದನ್ನು ಪಾಲಿಸಲಾಗುತ್ತಿಲ್ಲ ಎಂದು ಹರಿಹಾಯ್ದರು.

ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ವಿದ್ಯುತ್ ಕಂಬಗಳು ಹಾನಿಗೊಂಡಿದ್ದು, ಲೈನಗಳು ಜೋತು ಬಿದ್ದಿವೆ. ಹಲವೆಡೆ ಇನ್ಸುಲೇಟರ್‌ಗಳು ಹಾಗೂ ಇತರೆ ಉಪಕರಣಗಳು ಹಾಳಾಗಿರುವುದರಿಂದ ಪದೇ ಪದೇ ಲೈನ್ ಫಾಲ್ಟ್ ಉಂಟಾಗಿ ರೈತರ ಜಮೀನುಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಇದರಿಂದ ಬೆಳೆಗಳಿಗೆ ನೀರು ಪೂರೈಸಲು ಸಾಧ್ಯವಾಗದೆ ರೈತರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೈತರ ಸಮಸ್ಯೆಗಳನ್ನು ಸಾವಧಾನವಾಗಿ ಆಲಿಸಿದ ಹೆಸ್ಕಾಂ ಇಇ ಎಸ್.ಎಂ.ಬಿರಾದಾರ ಅವರು, ರೈತರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ತಿಳಿಸಿದರಲ್ಲದೇ ಮುದ್ದೇಬಿಹಾಳದಲ್ಲಿಯೇ ಟಿಸಿ ದುರಸ್ತಿ ಕೇಂದ್ರ ಆರಂಭಗೊoಡಿದೆ ಎಂದು ರೈತರಿಗೆ ಮಾಹಿತಿ ನೀಡಿದರು.ಟಿಸಿ ನೀಡಲು,ಕೂಡಿಸಲು ಹಣ ಕೇಳಿದರೆ ನೇರವಾಗಿ ತಮ್ಮನ್ನು ಸಂಪರ್ಕಿಸಿ ದೂರು ನೀಡುವಂತೆ ಅವರು ರೈತರಿಗೆ ಮನವಿ ಮಾಡಿದರು.ಇದೇ ವೇಳೆ ರೈತರು ವಿವಿಧ ಬೇಡಿಕೆಯುಳ್ಳ ಮನವಿ ಪತ್ರವನ್ನು ಅಧಿಕಾರಿ ಬಿರಾದಾರ ಅವರಿಗೆ ಸಲ್ಲಿಸಿದರು.ಹೆಸ್ಕಾಮ್ ಎಇಇ ಆರ್.ಎನ್.ಹಾದಿಮನಿ, ಸೆಕ್ಷನ್ ಅಧಿಕಾರಿ ಬಿ.ಎಸ್.ಯಲಗೋಡ,ಸಂಘದ ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ, ಮುಖಂಡ ಹುಲಗಪ್ಪ ನಾಯಕಮಕ್ಕಳ,ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಬಂದಿದ್ದ ರೈತರು,ಬ.ಬಾಗೇವಾಡಿ.ನಿಡಗುಂದಿ ತಾಲ್ಲೂಕು ರೈತ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಲೈನಮನ್‌ಗಳು ಲೈನ್ ಬದಲಾಯಿಸಿಕೊಡಲು ಹಣಕ್ಕೆ ಬೇಡಿಕೆ ಇಡುತ್ತಾರೆ.ರೈತರು ಮೊದಲೇ ಬೇಸಿಗೆ ಸಮಯವಾಗಿ ಒಣಗುತ್ತಿರುವ ಬೆಳೆಗೆ ಹೇಗೋ ನೀರು ಹಾಯಿಸಿ ಬೆಳೆ ಉಳಿಸಿಕೊಳ್ಳಬೇಕೆಂದರೆ ಅಧಿಕಾರಿಗಳಿಗೆ ಒಂದಿಷ್ಟು,ಲೈನಮನ್‌ಗಳಿಗೆ ಒಂದಿಷ್ಟು ಲಂಚ ಕೊಡುವುದು ಅನಿವಾರ್ಯ ಎಂಬAತಾಗಿದೆ ಎಂದು ರೈತರು ದೂರಿದ್ದು ಕಂಡು ಬಂದಿತು.

Latest News

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಔಷಧ ವ್ಯಾಪಾರಸ್ಥರು ಮೇ.20 ರಂದು ಔಷಧಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದು ಈ ಕುರಿತಂತೆ ವಿಜಯಪುರ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದಿoದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಈಚೇಗೆ ಮನವಿ ಪತ್ರ ಸಲ್ಲಿಸಿರುವ ಸಂಘದ ಪದಾಧಿಕಾರಿಗಳು,ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಸರ್ಕಾರದ