ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಹಾಗೂ ಬಂಜಾರಾ ಸಮಾಜದ ಮುಖಂಡರು ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಾನಂದ ಲಮಾಣಿ ಮಾತನಾಡಿ, ರುದ್ರಪ್ಪ ಲಮಾಣಿ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಉಪಸಭಾಪತಿಯಾಗಿ ಹಾಗೂ ಜವಳಿ ಮತ್ತು ಮುಜರಾಯಿ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿದರು.

ಕರ್ನಾಟಕದಲ್ಲಿ ಸುಮಾರು 45 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಬಂಜಾರ ಸಮುದಾಯಕ್ಕೆ ಈ ಬಾರಿ ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ಸಿಗಬೇಕು. ಹಾವೇರಿ ಕ್ಷೇತ್ರದ ಹಿರಿಯ ನಾಯಕರಾದ ರುದ್ರಪ್ಪ ಲಮಾಣಿ ಅವರು ಈ ಹಿಂದೆ ಸಚಿವರಾಗಿ, ಪ್ರಸ್ತುತ ಉಪಸಭಾಪತಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಸಮುದಾಯದ ಏಕೈಕ ಪ್ರಭಾವಿ ಹಿರಿಯ ನಾಯಕರಾಗಿರುವ ಕಾರಣ ಇವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ವರಿಷ್ಠರಿಗೆ ಒತ್ತಾಯಿಸುವುದಾಗಿ ಹೇಳಿದರು.

ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ತಾಲ್ಲೂಕು ಅಧ್ಯಕ್ಷ ಬಹಾದ್ದೂರ ರಾಠೋಡ, ಪಂಚ ಗ್ಯಾರಂಟಿ ಸಮೀತಿ ತಾಲ್ಲೂಕು ಉಪಾಧ್ಯಕ್ಷ ಲಕ್ಷö್ಮಣ ಲಮಾಣಿ ಮಾತನಾಡಿ, ಬ್ಯಾಡಗಿ ಕ್ಷೇತ್ರದಿಂದ ಒಂದು ಬಾರಿ ಹಾಗೂ ಹಾವೇರಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಜನಸೇವೆ ಸಲ್ಲಿಸಿರುವ ಲಮಾಣಿ ಅವರಿಗೆ ಈ ಬಾರಿ ಸಚಿವ ಸ್ಥಾನ ದೊರೆಯದಿರುವುದು ಸಮಾಜದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರವು ಅವರ ಅನುಭವ ಮತ್ತು ಸೇವೆಯನ್ನು ಗುರುತಿಸಿ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಗ್ರಾಪಂ ಮಾಜಿ ಸದಸ್ಯ ಥಾವರಪ್ಪ ಜಾಧವ ಮಾತನಾಡಿ,ರುದ್ರಪ್ಪ ಲಮಾಣಿ ಅವರ ರಾಜಕೀಯ ಅನುಭವವನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ,ರಾಹುಲ್ ಗಾಂಧಿ,ಮಾಜಿ ಸಿಎಂ ಸಿದ್ಧರಾಮಯ್ಯನವರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಪಕ್ಷದ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಸಮಾಜದ ಮುಖಂಡರಾದ ಚಂದ್ರನಾಥ ಮೇಲ್ಮನಿ,ಗುತ್ತಿಗೆದಾರ ಚಂದ್ರಶೇಖರ ರಾಠೋಡ,ಮಾನಸಿಂಗ ಜಾಧವ, ಲಕ್ಷ್ಮಣ ರಾಠೋಡ, ನಾಮದೇವ ರಾಠೋಡ ಸೇರಿದಂತೆ ಹಲವರು ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ