ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಹುಚ್ಚು ನಾಯಿ ಓಡಾಟದಿಂದ ಗ್ರಾಮಸ್ಥರು ತೀವ್ರ ಆತಂಕದಲ್ಲಿ ಒಳಗಾಗಿದ್ದಾರೆ.ಶಾಲೆಗೆ ತೆರಳಲು ಮಕ್ಕಳು,ಹೊಲಗಳಿಗೆ ಹೋಗಲು ರೈತರು ತೀವ್ರ ಭಯಭೀತರಾಗಿದ್ದು ತಪ್ಪಿಸಿಕೊಂಡಿರುವ ಹುಚ್ಚು ನಾಯಿಯನ್ನು ಪತ್ತೆ ಹಚ್ಚಿ ಕೊಲ್ಲಬೇಕು ಎಂದು ಗ್ರಾಮಸ್ಥರು ಗ್ರಾಮ ಪಂಚಾಯಿತಿಯ ಆಡಳಿತ ಅಧಿಕಾರಿಗಳಿಗೆ,ಪಿಡಿಒಗೆ ಒತ್ತಾಯಿಸಿದ್ದಾರೆ.

Latest News

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ:              ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ: ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ವಿಜಯಪುರ : ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅ.13ರಿಂದ ನಿಡಗುಂದಿ-ಆಲಮಟ್ಟಿ ರಾಷ್ಟ್ರೀಯ

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಸಜ್ಜನ ಗಾಣಿಗ ಸಮಾಜದಿಂದ ಸನ್ಮಾನ :                                     ಗಾಣಿಗ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ-ದೇಸಾಯಿ

ಸಜ್ಜನ ಗಾಣಿಗ ಸಮಾಜದಿಂದ ಸನ್ಮಾನ : ಗಾಣಿಗ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ-ದೇಸಾಯಿ

ಮುದ್ದೇಬಿಹಾಳ : ಐದು ಸಾವಿರ ರೂ.ಕೊಡುವ ಮುನ್ನ ಪತ್ರಕರ್ತರನ್ನು ಕರೆದು ಎಲ್ಲರಿಗೂ ತೋರಿಸುವಂತೆ ಪ್ರಚಾರಗಿಟ್ಟಿಸಿಕೊಳ್ಳುವ ಜನರ ಮಧ್ಯೆ ಯಾವುದೇ ಸ್ವಾರ್ಥವಿಲ್ಲದೇ ಎಕರೆಗಟ್ಟಲೆ ಜಮೀನು ದಾನ ಮಾಡಿದರೂ ಅದನ್ನು ಹೇಳಿಕೊಳ್ಳುವ ಕಾರ್ಯ ಸಜ್ಜನ ಗಾಣಿಗ ಸಮಾಜದವರು ಮಾಡಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದ ಏಪಿಎಂಸಿ ಸಭಾಂಗಣದಲ್ಲಿ ತಾಲ್ಲೂಕು ವೀರಶೈವ ಸಜ್ಜನ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ