ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊAಡಿರುವ ತಹಶೀಲ್ದಾರ್‌ರು, ಜು.4ರವರೆಗೆ ಮತಕ್ಷೇತ್ರದಲ್ಲಿ 1,56,657 ಜನರಿಗೆ ಮತದಾರರ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು 10,246 ಮತದಾರರ ಗಣತಿ ನಮೂನೆ ಗಣಕೀಕರಣಗೊಳಿಸಲಾಗಿದೆ.ಆನಲೈನ್ ಮೂಲಕ 39 ಜನ ಗಣತಿ ನಮೂನೆ ಸಲ್ಲಿಸಿದ್ದಾರೆ.93 ಮತದಾರರು ಮರಣ ಹೊಂದಿದ್ದು 39 ಜನ ಶಾಶ್ವತವಾಗಿ ಸ್ಥಳಾಂತರಗೊAಡಿದ್ದಾರೆ.ಈಗಾಗಲೇ 20 ಮತದಾರರು ನೋಂದಾಯಿಸಿಕೊAಡಿದ್ದಾರೆ ಎಂದು ಮಾಹಿತಿ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಆಗಿರುವ ತಹಶೀಲ್ದಾರ್ ಕೀರ್ತಿ ಚಾಲಕ್ ಮಾಹಿತಿ ನೀಡಿದ್ದಾರೆ. ಎಸ್.ಆಯ್.ಆರ್ ಪರಿಶೀಲನಾ ಕಾರ್ಯದಲ್ಲಿ ನಿರತರಾಗಿರುವ ಬಿಎಲ್‌ಒಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಚಾಚು ತಪ್ಪದೇ ನಿಭಾಯಿಸಬೇಕು.ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಕರ್ತವ್ಯ ನಿಭಾಯಿಸಬೇಕು ಎಂದು ಮತದಾರರ ನೋಂದಣಾಧಿಕಾರಿ,ವಿಜಯಪುರ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ತಿಳಿಸಿದ್ದಾರೆ.ಕಂದಾಯ ನಿರೀಕ್ಷಕ ಪವನ್ ತಳವಾರ, ತರಬೇತಿದಾರ ಜಿ.ಎಚ್.ಚವ್ಹಾಣ,ಶಿಕ್ಷಕ ಸಂಗಮೇಶ ಹೂಗಾರ, ಎ.ಡಿ.ಅಮರವಾಡಗಿ ಮೊದಲಾದವರು ಇದ್ದರು.

ಮನೆಗೆ ಬಾರದ ಬಿಎಲ್‌ಓ ಹೆಸರು,ಮೊಬೈಲ್ ನಂಬರ್ ಗಣತಿ ನಮೂನೆ ಮೇಲೆ..! :
ಮುದ್ದೇಬಿಹಾಳದ ಪಿಲೆಕೆಮ್ಮ ನಗರದ ವಾರ್ಡ ಸಂಖ್ಯೆ 10ರಲ್ಲಿ ಬರುವ 143ರ ಭಾಗ ಸಂಖ್ಯೆಯ ಬಿಎಲ್‌ಒ ಮನೆ ಮನೆಗೆ ಭೇಟಿ ನೀಡುತ್ತಿಲ್ಲ.ಇಲ್ಲಿ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಯೇ ಮನೆ ಮನೆಗೆ ಭೇಟಿ ಕೊಡುತ್ತಿದ್ದಾರೆ.ಗಣತಿ ನಮೂನೆ ಮೇಲೆ ಕೊಟ್ಟಿರುವ ಬಿಎಲ್‌ಒ ಮೊಬೈಲ್ ನಂಬರ್‌ಗೆ ಕರೆ ನನಗೆ ಯಾರೂ ತರಬೇತಿ ಕೊಟ್ಟಿಲ್ಲ.ನಾನು ಒಲ್ಲೆ ಎಂದರೂ ನನಗೆ ಕೆಲಸಕ್ಕೆ ನಿಯೋಜನೆ ಮಾಡಿದ್ದಾರೆ.ನನಗೆ ಸರ್ಕಾರಿ ಕೆಲಸ ಇಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ.ಇಂತವರನ್ನು ಯಾಕೆ ಮತದಾರರ ಪಟ್ಟಿ ಪರಿಷ್ಕರಣೆಗೆ ನಿಯೋಜಿಸಬೇಕಿತ್ತು ಎಂದು ಯುವ ಮುಖಂಡ ಅನಿಲ್ ನಾಯಕ ಪ್ರಶ್ನಿಸಿದ್ದಾರೆ.ಪಾರದರ್ಶಕವಾಗಿ ನಮ್ಮ ಭಾಗದಲ್ಲಿ ಎಸ್.ಐ.ಆರ್ ಪ್ರಕ್ರಿಯೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.ತಹಶಿಲ್ದಾರ್ ಕೀರ್ತಿ ಚಾಲಕ್ ಅವರನ್ನು ಸಂಪರ್ಕಿಸಿದಾಗ, ಸದರಿ ಬಿಎಲ್‌ಒ ಅವರನ್ನು ಬದಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ