S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ ವಿತರಣೆ ಮಾಡಲಾಗಿದೆ.69,622 ಮತದಾರರ ಗಣತಿ ನಮೂನೆಗಳನ್ನು ಡಿಜಿಟೈಜ್ ಮಾಡಲಾಗಿದೆ.ಆನಲೈನ್‌ದಲ್ಲಿ ಸಲ್ಲಿಸಿದ ಗಣತಿ 124,ಗೈರು ಹಾಜರಾದವರು 12,ಶಾಶ್ವತವಾಗಿ ಸ್ಥಳಾಂತರಗೊAಡವರು 299,ಮರಣ ಹೊಂದಿದವರು 407,120 ಮತದಾರರು ನೋಂದಾಯಿಸಿಕೊAಡಿದ್ದಾರೆ ಎಂದು ಅಧಿಕಾರಿ ಸೌದಾಗರ ಮಾಹಿತಿ ನೀಡಿದರು.

ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ ಅಧಿಕಾರಿಗಳು ರಜಾ ದಿನವಾಗಿದ್ದರೂ ಎರಡನೇ ಶನಿವಾರ,ಭಾನುವಾರವೂ ಈ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು. ತಹಶೀಲ್ದಾರ್ ಕೀರ್ತಿ ಚಾಲಕ್,ತಾಪಂ ಇಒ ಶರಣಗೌಡ ಆರ್,ಶಿರಸ್ತೇದಾರ ಶಕುಂತಲಾ ಸಜ್ಜನ,ಉಪ ತಹಶೀಲ್ದಾರ್ ನಿಂಗಣ್ಣ ದೊರೆ,ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ,ಕೃಷಿ ಅಧಿಕಾರಿ ಸೋಮನಗೌಡ ಬಿರಾದಾರ,ಪಿಡಿಒ ಭರಮಣ್ಣ ಯಾದಗಿರಿ,ಸೂಪರವೈಸರ್ ಎಲ್.ಎಚ್.ರಾಠೋಡ,ಗ್ರಾಮ ಆಡಳಿತ ಅಧಿಕಾರಿ ದಿನೇಶ ವಗ್ಗನ್ನವರ,ರಫೀಕ ಮುಲ್ಲಾ,ಹರ್ಷಿಗೌಡ,ಮಹಾಂತೇಶ ಬಸನಗೌಡರ ಮೊದಲಾದವರು ಇದ್ದರು.

ಶೇ.100ರಷ್ಟು ಸಾಧನೆ-ಇಬ್ಬರು ಬಿಎಲ್‌ಓಗಳಿಗೆ ಅಭಿನಂದನೆ:
ಮುದ್ದೇಬಿಹಾಳ ಮತಕ್ಷೇತ್ರದ ಮುದ್ನಾಳ ಮತಗಟ್ಟೆ ಸಂಖ್ಯೆ 168ರ ಬಿಎಲ್‌ಓ ಮಹಾಂತೇಶ ಪೂಜಾರ,ಚಿರ್ಚನಕಲ್ ಗ್ರಾಮದ ಭಾಗ ಸಂಖ್ಯೆ 120ರ ಬಿಎಲ್‌ಓ ಶೃತಿ ಭಾಟಿ ಅವರು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2026ರ ಕಾರ್ಯವನ್ನು ನಿಗದಿತ ಅವಧಿಗಿಂತ ಮುಂಚಿತವಾಗಿ ಶೇ.100ರಷ್ಟು ಸಾಧನೆ ಮಾಡಿದ್ದರಿಂದ ತಾಲ್ಲೂಕು ಆಡಳಿತದಿಂದ ಇಬ್ಬರು ಬಿಎಲ್‌ಓಗಳನ್ನು ಅಭಿನಂದಿಸಲಾಯಿತು.ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡ ಇಬ್ಬರು ಬಿಎಲ್‌ಓ ಅವರನ್ನು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ,ತಹಶೀಲ್ದಾರ್ ಕೀರ್ತಿ ಚಾಲಕ್ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ