650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ.

ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು, 450ಕ್ಕೂ ಅಧಿಕ 130 ವಿದ್ಯಾರ್ಥಿಗಳು ಅಂಕ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

720ರಲ್ಲಿ 650 ಅಂಕ ಪಡೆದಿರುವ ಮಾನಸಾ ಎಚ್. ಪ್ರಥಮ, 637 ಅಂಕ ಪಡೆದಿರುವ ಗಾಯತ್ರಿ ಎಸ್ ದ್ವಿತೀಯ,635 ಅಂಕ ಪಡೆದಿರುವ ವರ್ಷಾ ವಾಯ್. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.ಇನ್ನುಳಿದAತೆ 600ಕ್ಕೂ ಅಧಿಕ ಅಂಕ ಪಡೆದಿರುವ ಭಾಗ್ಯಾ ಎಚ್(634),ಶಿವಶಂಕರ ವೈ(632),ಪ್ರತೀಕ್ಷಾ ಕೆ(630),ಭಾಗ್ಯಶ್ರೀ ಬಿ(626),ಮಹ್ಮದ್‌ಇಬ್ರಾಹಿಂ ಡಬ್ಲೂö್ಯ(617),ಸುಮಿತ್ ಪಿ.(606),ಸಹನಾ ಎಚ್(604),ಅನ್ನಪೂರ್ಣ ಎನ್(601), ಪ್ರವೀಣ ಬಿ(600) ಅಂಕ ಪಡೆದುಕೊಂಡಿದ್ದಾರೆ.

ಮುದ್ದೇಬಿಹಾಳ,ನಾಗರಬೆಟ್ಟ ಹಾಗೂ ಬಾಗಲಕೋಟೆಯಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ನೀಟ್ ಅಕಾಡೆಮಿ ಶಾಖೆಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿ ವಿಜಯಕುಮಾರ ಪಾಟೀಲ,ಪ್ರಾಚಾರ್ಯರಾದ ಸಿ.ಬಿ.ದೇಸಾಯಿ,ಮಾರ್ಗದರ್ಶಕರಾದ ಎನ್.ಎ.ಬಿರಾಜದಾರ, ರೇವಣಸಿದ್ದ ಚಲವಾದಿ(ಮುರಾಳ),ರಾಜಶೇಖರ ಹಿರೇಮಠ,ಇಸ್ಮಾಯಿಲ್ ಮನಿಯಾರ್ ಮೊದಲಾದವರು ಅಭಿನಂದಿಸಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ