ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಅಂಜುಮನ್ ಕಮೀಟಿ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಆಗಿರುವ ಡಾ.ಔದ್ರಾಮ್ ಅವರು ಜು.23 ರಂದು ಅಧಿಸೂಚನೆ ಹೊರಡಿಸಿದ್ದು ಚುನಾವಣೆ ಪ್ರಕ್ರಿಯೆ ಆರಂಭಗೊoಡಿದೆ.
ಜು.24 ರಿಂದ 30ರವರೆಗೆ ಬೆಳಗ್ಗೆ 11 ರಿಂದ ಮದ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ,ಜು.31 ರಂದು ನಾಮಪತ್ರಗಳ ಪರಿಶೀಲನೆ,ಆ.1 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 3ರವರೆಗೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ ಪ್ರಕ್ರಿಯೆ ನಡೆಯಲಿದೆ.

ಅಂದೇ ಅಭ್ಯರ್ಥಿಗಳಿಗೆ ಚಿಹ್ನೆಗಳ ಹಂಚಿಕೆ,ಆ.17 ರಂದು ಬೆಳಗ್ಗೆ 8 ಗಂಟೆಯಿAದ ಮದ್ಯಾಹ್ನ 3ರವರೆಗೆ ಮತದಾನ ನಡೆಯಲಿದೆ.ಅಂದೇ ಮತದಾನ ಪ್ರಕ್ರಿಯೆ ಮುಗಿದ ಬಳಿಕ ಮತ ಎಣಿಕೆ ನಂತರ ಫಲಿತಾಂಶ ಘೋಷಿಸಲಾಗುತ್ತದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದೇ ಅಂಜುಮನ್ ಕಮೀಟಿ ಆಡಳಿತ ಮಂಡಳಿ ಇಲ್ಲದೇ ಆಡಳಿತಾಧಿಕಾರಿಗಳ ಕೈಯ್ಯಲ್ಲಿ ಅಧಿಕಾರ ಇತ್ತು.ಇದೀಗ ಚುನಾವಣೆ ಘೋಷಣೆಯಾಗಿರುವುದು ಕಮೀಟಿಯ ಆಡಳಿತ ರಚನೆಗೊಂಡು ಸಮುದಾಯದ ಏಳ್ಗೆಗೆ ಬಲ ದೊರೆಯಬಹುದು ಎಂಬ ಲೆಕ್ಕಾಚಾರ ಮುಸ್ಲಿಂ ಸಮಾಜದ ಚಿಂತಕರದ್ದಾಗಿದೆ.

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ