ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ ಸ್ಥಾಪಿಸುವ ಯತ್ನ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ,ಕಮೀಟಿಗೆ ಸ್ಪರ್ಧಿಸಿರುವ ಅಬ್ದುಲಗಫೂರ ಮಕಾನದಾರ ಹೇಳಿದರು.

ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1936ರಲ್ಲಿ ಇಲ್ಲಿನ ಅಂಜುಮನ್ ಸಂಸ್ಥೆಯನ್ನು ಹಿರಿಯರು ಹುಟ್ಟು ಹಾಕಿದ್ದಾರೆ.ಅಂಜುಮನ್ ಸಂಸ್ಥೆಯ ಬೆಳವಣಿಗೆಯಲ್ಲಿ ಹಿಂದೂ ಬಾಂಧವರ ಸಹಕಾರವೂ ಇತ್ತು.ಆದರೆ ಕಾರಣಾಂತರಗಳಿAದ ಸಂಸ್ಥೆಯ ಅಭಿವೃದ್ಧಿ ಕುಂಠಿತಗoಡಿದೆ. ಹೊಸಬರು,ಒಳ್ಳೆಯವರ ಆಯ್ಕೆಗೆ ಮತದಾರರು ಮುಂದಾಗಬೇಕು ಎಂದು ಮನವಿ ಮಾಡಿದರು.

ಇನ್ನೊರ್ವ ಅಭ್ಯರ್ಥಿ,ಜನರಕೂಗು ವಾಹಿನಿ ಸಂಸ್ಥಾಪಕ ಗುಲಾಮ್‌ಮೊಹ್ಮದ್ ವೈ.ದಫೇದಾರ ಮಾತನಾಡಿ, ಮುದ್ದೇಬಿಹಾಳದ ಅಂಜುಮನ್ ಸಂಸ್ಥೆಯ ಚುನಾವಣೆಯನ್ನು ಶಾಂತ ರೀತಿಯಲ್ಲಿ ಮಾದರಿಯಾಗಿ ಮಾಡುವ ಸಂಕಲ್ಪ ನಮ್ಮದಾಗಿದೆ.ಸಂಸ್ಥೆಯಡಿ ಆಸ್ಪತ್ರೆ,ಅಂಜುಮನ್ ಶಾಲೆ,ಮಳಿಗೆಗಳ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಸಮಾಜದ ಬಾಂಧವರಿಗಾಗಿ ಕಾರ್ಯಗತಗೊಳಿಸಬೇಕಾಗಿದೆ.ಸಮಾನ ಮನಸ್ಕರೆಲ್ಲ ಸೇರಿಕೊಂಡು ಸಂಸ್ಥೆಯ ಅಭಿವೃದ್ಧಿಗೆ ಆಸರೆಯಾಗುವವರನ್ನು ಆಯ್ಕೆ ಮಾಡುವಂತೆ ಮತದಾರರಲ್ಲಿ ವಿನಂತಿಸುವುದಾಗಿ ಹೇಳಿದರು. ಅಭ್ಯರ್ಥಿ ಅಲ್ಲಾಭಕ್ಷ ದೇಸಾಯಿ, ಮುಖಂಡರಾದ ಮಹೆಬೂಬ ಮುಲ್ಲಾ, ಬಾಪ್ ಢವಳಗಿ,ಮಹೆಬೂಬ ಹಡಲಗೇರಿ ಸಂಸ್ಥೆಯ ಕುರಿತು ಮಾತನಾಡಿದರು.ಈ ಸಂದರ್ಭದಲ್ಲಿ ಡಾ.ಯಾಸೀನ್ ಮುಲ್ಲಾ,ಅಬ್ದುಲಸಲಾಂ ಮುಲ್ಲಾ,ಹುಸೇನ್‌ಭಾಷಾ ಹುಣಚಗಿ,ಯಾಸೀನ ಸೋಠೆ,ಮುರ್ತುಜ ದಖನಿ, ಹೆಸ್ಕಾಂ ಸಲಹಾ ಸಮಿತಿ ನಾಮನಿರ್ದೇಶಿತ ಸದಸ್ಯ ಸಿಕಂದರ್ ಜಾನ್ವೇರ್,ಅಸ್ಲಾಂ ಕಿತ್ತೂರ,ಅಲ್ಲಾಭಕ್ಷö್ಯ ಮಕಾನದಾರ,ಅಬ್ದುಲಮಜೀದ ಮಕಾನದಾರ,ಮೈನೂದ್ದೀನ ಹವಾಲ್ದಾರ,ಆರೀಫ ಮುಲ್ಲಾ, ರಹೆಮಾನ ದಫೇದಾರ,ಅಕ್ಬರ ದೇಸಾಯಿ, ಮೋದಿನ ಕಾರಿಗನೂರ ಮೊದಲಾದವರು ಇದ್ದರು.

ಕಡೆಯ ದಿನ 62 ನಾಮಪತ್ರ ಸಲ್ಲಿಕೆ..! :
ಅಂಜುಮನ್ ಕಮೀಟಿಗೆ ನಾಮಪತ್ರ ಸಲ್ಲಿಕೆಗೆ ನೂಕುನುಗ್ಗಲು
ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಕಮೀಟಿ ಆಡಳಿತ ಮಂಡಳಿಗೆ ಆಯ್ಕೆ ಬಯಸಿ ಗುರುವಾರ ಒಂದೇ ದಿನ 62 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿವೆ.
ಪಟ್ಟಣದ ಹೊರಪೇಟೆ ಗಲ್ಲಿಯಲ್ಲಿರುವ ಅಂಜುಮನ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದ್ದ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಯುವಕರೇ ನೆರೆದಿದ್ದು ಕಂಡು ಬಂದಿತು.ಬೆಳಗ್ಗೆ 11 ರಿಂದ ಮದ್ಯಾಹ್ನ 3ಗಂಟೆಯವರೆಗೆ ಸಮಯ ಮೀರುತ್ತಿದ್ದಂತೆ ತಂಡೋಪತoಡವಾಗಿ ಆಗಮಿಸಿದ ಹಲವರು ತಮ್ಮ ಉಮೇದುವಾರಿಕೆ ಸಲ್ಲಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಚುನಾವಣಾಧಿಕಾರಿ ತಬಸ್ಸುಮ ಮುಲ್ಲಾ , ಚುನಾವಣೆ ಅಧಿಸೂಚನೆ ನಂತರ ನಾಮಪತ್ರ ಸಲ್ಲಿಕೆಯ ಕಡೆಯ ದಿನದವರೆಗೆ ಒಟ್ಟು 77 ಜನರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.ಜು.31 ರಂದು ನಾಮಪತ್ರಗಳ ಪರಿಶೀಲನೆ , ಆ.1 ರಂದು ನಾಮಪತ್ರಗಳನ್ನು ಹಿಂಪಡೆಯುವ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಯುವಕರು ಅಂಜುಮನ್ ಸಂಸ್ಥೆಗೆ ಹೊಸ ಆಡಳಿತ ತರುವ ಉತ್ಸಾಹದಲ್ಲಿ ಇರುವುದು ಕಂಡು ಬಂದಿತು.

Latest News

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಬರಗಾಲದ ಕುರಿತು ಕರೆದಿದ್ದ ನಾಲ್ಕು ದಿನಗಳ ವಿಶೇಷ ಅಧಿವೇಶನದಲ್ಲಿ ರಾಜ್ಯದ ರೈತರಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ:                                            ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ: ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಮುದ್ದೇಬಿಹಾಳ : ಸಕ್ಕರೆಗೆ ಕನಿಷ್ಠ ಮಾರಾಟ ಬೆಲೆಯನ್ನು 60 ರೂ.ಗಳಿಗೆ ಹೆಚ್ಚಿಸಬೇಕು.ಸಬ್ 2026-27ನೇ ಸಾಲಿನಲ್ಲಿ

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಮುದ್ದೇಬಿಹಾಳ : ಔಷಧಗಳ ಬಳಕೆ, ಪ್ರಮಾಣ ಹಾಗೂ ಅವುಗಳಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿಯ ಕೆಪಿಎಸ್ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಥ್ರೋಬಾಲ್ ಬಾಲಕರು,ಬಾಲಕಿಯರ ವಿಭಾಗದಲ್ಲಿ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರ ವೈಯಕ್ತಿಕ ಪ್ರತಿಭೆಯ ಜತೆಗೆ ಅವರು ಪ್ರತಿನಿಧಿಸುವ ಪ್ರದೇಶದ ಹೆಸರೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬೆಳೆಯುತ್ತದೆ ಎಂದು ಶಾಸಕ ಸಿ.ಎಸ್. ನಾಡಗೌಡ ಹೇಳಿದರು. ಪಟ್ಟಣದ ಓಸ್ವಾಲ್ ಹಾಲ್‌ನಲ್ಲಿ ರವಿವಾರ ನಡೆದ ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಏಕಲವ್ಯ ರೋಲರ್ ಸ್ಕೆಟಿಂಗ್ ಅಕಾಡೆಮಿಯ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಏಕಲವ್ಯ ರೋಲರ್

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ :                                      ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ : ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಮುದ್ದೇಬಿಹಾಳ : ಭೀಕರ ಬರಗಾಲದ ಸಮಯದಲ್ಲಿ ನೇಕಾರರಿಗೂ ಸಮರ್ಪಕ ಕಚ್ಚಾನೂಲು,ಬೀಮ್ ಪೂರೈಕೆ ಆಗುತ್ತಿಲ್ಲ.ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನಡೆಸುವ ನೇಕಾರರು ಗ್ರಾಮೀಣ ಭಾಗದಲ್ಲಿ ಸಂಕಷ್ಟದಲ್ಲಿದ್ದು ಅವರಿಗೆ ಸರ್ಕಾರ ಸೂಕ್ತ ನೆರವು ಒದಗಿಸಬೇಕು ಎಂದು ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಂಕರ ಈ.ಹೆಬ್ಬಾಳ ಹೇಳಿದರು. ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ 27ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅವರು ಮಾತನಾಡಿದರು.ನೇಕಾರರ ಬದುಕು