ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ ಮಾಡುವರು.

ಆ.12 ರಂದು ಬೆಳಗ್ಗೆ 10.30ಕ್ಕೆ ನಾಲತವಾಡ,ನಾಗರಬೆಟ್ಟ ಗ್ರಾಮಗಳಿಗೆ ಭೇಟಿ ಮತ್ತು ಸಾರ್ವಜನಿಕರ ಕುಂದುಕೊರತೆ ಆಲಿಸಲಾಗುತ್ತದೆ.ಮದ್ಯಾಹ್ನ 12ಕ್ಕೆ ಮತಕ್ಷೇತ್ರದ ತಾಳಿಕೋಟಿ,ಮೂಕಿಹಾಳ,ಬಾವೂರ,ಮಿಣಜಗಿ,ಲಿಂಗದಳ್ಳಿ,ಕೊಣ್ಣೂರ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ವೀಕ್ಷಣೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಅಂಜುಮನ್ ಕಮೀಟಿ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಆಗಿರುವ ಡಾ.ಔದ್ರಾಮ್ ಅವರು ಜು.23 ರಂದು ಅಧಿಸೂಚನೆ ಹೊರಡಿಸಿದ್ದು ಚುನಾವಣೆ ಪ್ರಕ್ರಿಯೆ ಆರಂಭಗೊoಡಿದೆ. ಜು.24 ರಿಂದ 30ರವರೆಗೆ ಬೆಳಗ್ಗೆ 11 ರಿಂದ ಮದ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ,ಜು.31 ರಂದು ನಾಮಪತ್ರಗಳ ಪರಿಶೀಲನೆ,ಆ.1 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 3ರವರೆಗೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ