13 ಅಂಗನವಾಡಿಗಳ ಅಕ್ರಮ ಪ್ರಶ್ನಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ ಆರೋಪ: ಸಿಡಿಪಿಒ ಕುಂಬಾರ (ವಿಡಿಯೋ ನೋಡಿ)

13 ಅಂಗನವಾಡಿಗಳ ಅಕ್ರಮ ಪ್ರಶ್ನಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ ಆರೋಪ: ಸಿಡಿಪಿಒ ಕುಂಬಾರ (ವಿಡಿಯೋ ನೋಡಿ)



ಮುದ್ದೇಬಿಹಾಳ : ಅಂಗನವಾಡಿ ನೌಕರರ ಸಂಘಟನೆಯವರು ತಮ್ಮ ವಿರುದ್ಧ ಮಂಗಳವಾರ ಮಾಡಿದ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರು, ಅಂಗನವಾಡಿ ನೌಕರರ ಸಂಘದ ಹೆಸರಿನಲ್ಲಿ ಮಂಗಳವಾರ ನಡೆದ ಪ್ರತಿಭಟನೆಗೆ ಇಲಾಖೆಯ ಅನುಮತಿ ಕೊಟ್ಟಿಲ್ಲ.ಮೇಲಾಗಿ ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲ ಆಧಾರ ರಹಿತವಾಗಿವೆ ಎಂದು ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕಳೆದ ಆರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ.ನನ್ನ ಮೇಲೆ ಎಲ್ಲೂ ಕಪ್ಪುಚುಕ್ಕೆ ಇಲ್ಲ. ತಾಳಿಕೋಟಿ ಭಾಗದಲ್ಲಿ 13 ಅಂಗನವಾಡಿಗಳನ್ನು ಅವರು (ನೀಲಮ್ಮ ಬೋರಾವತ್) ನೋಡಿಕೊಳ್ಳುತ್ತಿದ್ದರು. ಆ ಕೇಂದ್ರಗಳಿಗೆ ಸಂಬಂಧಿಸಿದ 13 ಮೊಬೈಲ್ ಅವರ ಬಳಿಯೇ ಇರುತ್ತಿದ್ದವು. ಆ 13 ಅಂಗನವಾಡಿಯ ಆಹಾರವನ್ನು ಅವರೇ ಇಳಿಸಿಕೊಳ್ಳುತ್ತಿದ್ದರು.

ಈ ಬಗ್ಗೆ ತನಿಖೆ ನಡೆಸಲು ಮುಂದಾಗಿರುವುದು ಹಾಗೂ ಮುದ್ದೇಬಿಹಾಳದ ಅಂಗನವಾಡಿ ಕಾರ್ಯಕರ್ತೆಯ ವರ್ಗಾವಣೆ ವಿಷಯದಲ್ಲಿ ಮೂರು ಲಕ್ಷ ರೂ.ಬೇಡಿಕೆ ಇಟ್ಟಿದ್ದು ಅದರಲ್ಲಿ 1.12 ಲಕ್ಷ ರೂ. ಅಡ್ವಾನ್ಸ್ ಪಡೆದುಕೊಂಡಿದ್ದಾಗಿ ನಮಗೆ ಲಿಖಿತ ಪತ್ರವನ್ನು ಕಾರ್ಯಕರ್ತೆ ರೇಣುಕಾ ಲಮಾಣಿ ಕೊಟ್ಟಿದ್ದಾರೆ ಇದರ ಬಗ್ಗೆ ತನಿಖೆಗೆ ಮುಂದಾದಾಗ ಅವರು ಕಾರ್ಯಕರ್ತೆಯರನ್ನು ಎತ್ತಿ ಕಟ್ಟಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.

ಇಲಾಖೆಯ ನಿಯಮಗಳಂತೆ ಕೇಂದ್ರಗಳಿಗೆ ಭೇಟಿ ನೀಡಿದ್ದೇನೆ.ನನಗೆ ಹಣದ ಆಮಿಷವನ್ನೂ ಒಡ್ಡಿದ್ದರು.ಅದಕ್ಕೆ ಬಗ್ಗದಿದ್ದಾಗ ಈ ರೀತಿ ಆಧಾರ ರಹಿತ ಆರೋಪಗಳನ್ನು ಮಾಡಿದ್ದಾರೆ. ನನಗೆ 22 ವರ್ಷದ ಮಗಳಿದ್ದಾಳೆ. ಅಂತಹ ಸ್ವಭಾವ ನನ್ನದಲ್ಲ. ನಾನು ದೇಶದ ಗಡಿಯಲ್ಲಿ 22 ವರ್ಷ ಸೇವೆ ಸಲ್ಲಿಸಿ ಬಂದಿದ್ದೇನೆ. ಅಂಗನವಾಡಿ ಸಂಘಟನೆಯವರು ಕೊಟ್ಟಿರುವ ಮನವಿಯ ಅಂಶಗಳಲ್ಲಿ ಸತ್ಯವಾಗಿದ್ದರೆ ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಕುಂಬಾರ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು