ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಒಟ್ಟು ಶೇ.92.95ರಷ್ಟು ಮತದಾನ ಆಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಒಟ್ಟು 2625 ಮತದಾರರಲ್ಲಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಆರಂಭದಲ್ಲಿ ಚುರುಕುಗೊಂಡಿದ್ದ ಮತದಾನ ಪ್ರಕ್ರಿಯೆ ಮದ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ ಸಾಗಿತ್ತು.ಅಂತಿಮ ಸಮಯ ಮೀರುವ ಮುನ್ನವೇ ಬಹುತೇಕ ಮತದಾರರು ತಮ್ಮ ಹಕ್ಕು ಚಲಾಯಿಸಿದರು.

ಒಂದು ಮತಗಟ್ಟೆಯಲ್ಲಿ ಇಬ್ಬರು ಮತದಾರರು ನಕಲಿ ಮತದಾನಕ್ಕೆ ಯತ್ನಿಸಿ ಪೊಲೀಸರ ಕೈಗೆ ಸಿಕ್ಕು ಬಿದ್ದ ಘಟನೆ ನಡೆಯಿತು.ಆದರೆ ಎರಡೆರಡು ಸಲ ಮತ ಚಲಾಯಿಸಲು ಮತಗಟ್ಟೆ ಅಧಿಕಾರಿಗಳು,ಪೊಲೀಸರು ಅವಕಾಶ ನೀಡಲಿಲ್ಲ.ಸ್ವತಃ ಡಿವೈಎಸ್‌ಪಿ ಚಂದ್ರಕಾAತ ನಂದರೆಡ್ಡಿ ಅವರೇ ಇಬ್ಬರನ್ನು ವಶಕ್ಕೆ ಪಡೆದುಕೊಂಡು ನಂತರ ಬಿಡುಗಡೆಗೊಳಿಸಿದರು.

ಅಪರ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಔದ್ರಾಮ್,ಕೇರ್ ಟೇಕರ್ ತಬಸ್ಸುಮ್ ಮುಲ್ಲಾ, ಪ್ರಭಾರ ತಹಶೀಲ್ದಾರ್ ಆನಂದ ಕೋಲಾರ,ಸಿಪಿಐ ಮೊಹ್ಮದ ಫಸಿವುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ,ಅಪರಾಧ ವಿಭಾಗದ ಪಿಎಸೈ ಆರ್.ಎಸ್.ಭಂಗಿ, ತಾಳಿಕೋಟಿ,ಆಲಮಟ್ಟಿ ಪಿಎಸೈಗಳು ಬಿಗಿ ಬಂದೋಬಸ್ತ್ ವಹಿಸಿದ್ದರು.

ಮತ ಎಣಿಕೆಗೆ 10ಟೇಬಲ್ ವ್ಯವಸ್ಥೆ ಮಾಡಲಾಗಿದ್ದು ಕೋಣೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.ಕಂದಾಯ ಇಲಾಖೆ ಸಿಬ್ಬಂದಿ ಚುನಾವಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.ಫಲಿತಾಂಶ ರಾತ್ರಿ 8-9 ಗಂಟೆಯೊಳಗೆ ಲಭ್ಯವಾಗುವ ನಿರೀಕ್ಷೆ ಇದೆ.

Latest News

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಶನಿವಾರದಿಂದ ಕೈಗೊಂಡಿದ್ದು ಸಂಕಲ್ಪಪೂರ್ವ ಚಾತುರ್ಮಾಸ್ಯ ದೀಕ್ಷೆ ತನ್ನಿಮಿತ್ಯ ಶ್ರೀಗಳನ್ನು ಚಾತುರ್ಮಾಸ್ಯ ಮಹೋತ್ಸವ ಸಮೀತಿ ಹಾಗೂ ಸಮಸ್ತ ವಿಪ್ರ ಸಮಾಜದ ಬಾಂಧವರು ಭವ್ಯ ಮೆರವಣಿಗೆ ಮೂಲಕ ಶಿವ ಚಿದಂಬರ ದೇವಸ್ಥಾನಕ್ಕೆ ಕರೆದೊಯ್ಯರು. ಪಟ್ಟಣದ ರಾಘವೇಂದ್ರ ಮಠದಿಂದ ಪೂಜ್ಯರನ್ನು ಅಲಂಕೃತ ಸಾರೋಟಿನಲ್ಲಿ ಕೂರಿಸಿ ಸಕಲ ವಾದ್ಯವೈಭವಗಳೊಂದಿಗೆ ಮೆರವಣಿಗೆ ನಡೆಸಲಾಯಿತು.ಮೆರವಣಿಗೆಯಲ್ಲಿ