ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಹೆಸ್ಕಾಂ ಸಲಹಾ ಸಮಿತಿ ನಾಮನಿರ್ದೇಶಿತ ಸದಸ್ಯ ಸಿಕಂದರ್ ಜಾನ್ವೇಕರ,ರಾಜು ಕರಡ್ಡಿ,ಗುರುಲಿಂಗಪ್ಪಗೌಡ ಪಾಟೀಲ,ರಾಜು ರಾಯಗೊಂಡ,ಸಿ.ಎಲ್.ಬಿರಾದಾರ,ಪರಶುರಾಮ ನಾಲತವಾಡ ಸೇರಿದಂತೆ ಹಲವರು ಇದ್ದರು.
ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಲಾಯಿತು.







