ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ ವಕ್ಭ್ ನಿಯಮಗಳು 2017ರ ನಿಯಮ 25ರ ಅನ್ವಯ ವಿಜಯಪುರ ಜಿಲ್ಲಾ ವಕ್ಭ್ ಅಧಿಕಾರಿಗಳು ಅಂಜುಮನ್ ಕಮೀಟಿಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು,ಕಾರ್ಯದರ್ಶಿಗಳು ಹಾಗೂ ಖಜಾಂಚಿಯ ಆಯ್ಕೆಗೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ.

ಆಯ್ಕೆಯಾದ ಸದಸ್ಯರಿಗೆ ಅದ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ನಡೆಸುವ ಸಭೆಯನ್ನು ನಡೆಸಲು ನೋಟಿಸ್‌ನ್ನು ನೋಂದಾಯಿತ ಅಂಚೆ ಮೂಲಕ ಒಂದು ವಾರದ ಕಾಲಾವಕಾಶದಲ್ಲಿ ಕಳಿಸಬೇಕು ಎಂದು ವಕ್ಭ್ ಬೋರ್ಡ್ನ 2017ರ ನಿಯಮ 24ರಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ.

ಆದರೆ ಇಲ್ಲಿನ ಜಿಲ್ಲಾ ವಕ್ಭ್ ಅಧಿಕಾರಿ ಸದಸ್ಯರಿಗೆ ಆ.28 ರಂದು ನೋಟಿಸ್ ನೀಡಿದ್ದು 31ರಂದು ಚುನಾವಣೆ ನಡೆಸುವುದಾಗಿ ತಿಳಿಸಿದ್ದಾರೆ.ಇದು ಅಂಜುಮನ್ ಕಮೀಟಿಯ ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು,ಕಾರ್ಯದರ್ಶಿಗಳು,ಖಜಾಂಚಿ ಆಯ್ಕೆಯ ನಿಯಮ ಉಲ್ಲಂ|ಘನೆ ಮಾಡಿದಂತಾಗಿದೆ ಎಂಬ ದೂರುಗಳು ಕೇಳಿ ಬಂದಿವೆ.

ಆಡಳಿತ ಅಧಿಕಾರಿಯೂ ಆಗಿರುವ ಜಿಲ್ಲಾ ವಕ್ಭ್ ಬೋರ್ಡ್ ಅಧಿಕಾರಿ ತಬಸ್ಸುಮ್ ಮುಲ್ಲಾ ಅವರು, ಮುದ್ದೇಬಿಹಾಳ ಅಂಜುಮನ್ ಇಸ್ಲಾಂ ಸಂಸ್ಥೆ ನೂತನವಾಗಿ ಚುನಾಯಿತರಾದ ವ್ಯವಸ್ಥಾಪಕ ಸಮಿತಿ ಸದಸ್ಯರುಗಳ ಪ್ರಥಮ ಶಾಸನಬದ್ಧ ಅಧಿಕೃತ ಸಭೆಯನ್ನು ಆ.31 ರಂದು ಮದ್ಯಾಹ್ನ 12ಕ್ಕೆ ಅಂಜುಮನ್ ಇಸ್ಲಾಂ ಕಮೀಟಿ ಕಚೇರಿಯಲ್ಲಿ ಕರೆಯಲಾಗಿದೆ ಎಂದು ತಮ್ಮದೇ ಸಹಿಯುಳ್ಳ ನೋಟಿಸ್‌ನ್ನು ಚುನಾಯಿತ ಸದಸ್ಯರುಗಳಿಗೆ ನೇರವಾಗಿ ಸಿಬ್ಬಂದಿ ಮೂಲಕ ಕಳಿಸಿದ್ದಾರೆ ಎನ್ನಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಅಂಜುಮನ್ ಇಸ್ಲಾಂ ಕಮೀಟಿ ಆಡಳಿತಾಧಿಕಾರಿಗಳು ಮತ್ತು ವಕ್ಭ್ ಬೋರ್ಡ್ ಜಿಲ್ಲಾ ಅಧಿಕಾರಿಗಳು ವಹಿಸಲಿದ್ದು ಒಂದು ವಾರ ಸಮಯ ಕೊಡದೇ ಎರಡೇ ದಿನದಲ್ಲಿ ಆಡಳಿತ ಮಂಡಳಿ ಪದಾಧಿಕಾರಿಗಳ ಮುಂದಾಗಿರುವುದು ತೀವ್ರ ಅಚ್ಚರಿಗೆ ಕಾರಣವಾಗಿದೆ.

ಅಂಜುಮನ್ ಕಮೀಟಿಗೆ ಚುನಾವಣೆ ನಡೆದ ಬಳಿಕ ಈವರೆಗೂ ಚುನಾಯಿತ ಸದಸ್ಯರಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕೆಲಸ ಚುನಾವಣಾಧಿಕಾರಿಗಳಾದ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ್ ಅವರಿಂದ ಆಗಿಲ್ಲ.ಕೇರ್‌ಟೇಕರ್ ಹಾಗೂ ಜಿಲ್ಲಾ ವಕ್ಭ್ ಬೋರ್ಡ್ ಅಧಿಕಾರಿಗೆ ಕರೆ ಮಾಡಿದರೂ ಅವರು ದೂರವಾಣಿ ಕರೆ ಸ್ವೀಕರಿಸುತ್ತಿಲ್ಲ.ಒಟ್ಟಾರೆ ಅಂಜುಮನ್ ಸಂಸ್ಥೆಯ ಚುನಾವಣೆ ಪ್ರಜಾಪ್ರಭುತ್ವದ ಆಧಾರದ ಮೇಲೆ ನಡೆದಿದೆಯೋ ಅಥವಾ ಏಕಚಕ್ರಾಧಿಪತ್ಯದ ಆಧಾರದಲ್ಲಿ ನಡೆದಿದೆಯೋ ಗೊತ್ತಾಗುತ್ತಿಲ್ಲ ಎಂದು ಮುಸ್ಲಿಂ ಸಮಾಜದ ಪ್ರಗತಿಪರರು ಪ್ರಶ್ನಿಸುತ್ತಿದ್ದಾರೆ.

Latest News

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು ಯಾರ ಹೆಸರು ಬಂದಿಲ್ಲವೋ ಅವರಿಗೆ ನೋಟಿಸ್ ಕೊಡುವ ಕಾರ್ಯ ಆರಂಭಗೊಳ್ಳಲಿದೆ ಎಂದು ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ತಿಳಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತು ಮಾಹಿತಿ ನೀಡಿದರು. ಜೂ.29,2026ರಲ್ಲಿ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ 246 ಇದ್ದು ಪರಿಷ್ಕರಣೆಯ