ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ ಸಂಸ್ಥೆಯಾಗಿದೆ.ಆಯ್ಕೆಯಾಗಿರುವ ಎಲ್ಲ ಸದಸ್ಯರು ಸಮಾಜದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಉದ್ಯಮಿ ಅಯೂಬ್ ಮನಿಯಾರ್ ಹೇಳಿದರು.

ಪಟ್ಟಣದ ಬೆಂಗಳೂರು ಬೇಕರಿ ಹಾಲ್‌ನಲ್ಲಿ ಮಂಗಳವಾರ ಅಂಜುಮನ್ ಹಿತರಕ್ಷಣಾ ವೇದಿಕೆಯಿಂದ ಹಮ್ಮಿಕೊಂಡಿದ್ದ ಅಂಜುಮನ್ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಪದಾಧಿಕಾರಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಸ್ಥೆಗೆ ಯುವ ಉತ್ಸಾಹಿ ಸದಸ್ಯರು ಆಯ್ಕೆಯಾಗಿದ್ದೀರಿ.ಅಂಜುಮನ್ ಸಂಸ್ಥೆಗೆ ಇದ್ದ ಘನತೆಯನ್ನು ಮರುಕಳಿಸುವ ಕೆಲಸ ನಿಮ್ಮಿಂದಾಗಬೇಕು.ಪ್ರಾಮಾಣಿಕ ಸೇವೆಯಿಂದ ಸಂಸ್ಥೆಯ ಕೀರ್ತಿಯನ್ನು ಉನ್ನತಿಗೇರಿಸಬೇಕು ಎಂದರು.

ಮೌಲಾನಾ ಅಯೂಬ್ ಮುಲ್ಲಾ ಮಾತನಾಡಿ, ಅಂಜುಮನ್ ಸಂಸ್ಥೆಯಿoದ ಅಗತ್ಯವಿರುವವರಿಗೆ ನೆರವು ನೀಡುವುದರ ಜತೆಗೆ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ಸಹಾಯ ನೀಡುವ ಕೆಲಸ ಮಾಡಬೇಕು.ಅವರನ್ನು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಕ್ಕೇರಿಸುವ ಕಾರ್ಯಕ್ಕೆ ಆದ್ಯತೆ ನೀಡಬೇಕು.ಅಂಜುಮನ್ ಸಂಸ್ಥೆ ಯಾವುದೇ ವ್ಯಕ್ತಿಯ ಸ್ವತ್ತಲ್ಲ.ಇದು ಇಡೀ ಸಮುದಾಯದ ಆಸ್ತಿ ಮತ್ತು ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಅಂಜುಮನ್ ಹಿತರಕ್ಷಣಾ ವೇದಿಕೆ ಸದಸ್ಯ ಮಹೆಬೂಬ ಹಡಲಗೇರಿ ಮಾತನಾಡಿ, ನಮ್ಮದು ಅಂಜುಮನ್ ಸಂಸ್ಥೆಗೆ ಚುನಾವಣೆ ನಡೆಸಬೇಕೆಂಬುದು ನಿರಂತರ ಹೋರಾಟವಾಗಿತ್ತು.ನೂತನವಾಗಿ ಆಯ್ಕೆಯಾಗಿರುವ ಸದಸ್ಯರಿಗೆ ಹೊಸ ಸವಾಲುಗಳು ಬಂದೇ ಬರುತ್ತವೆ.ಅವುಗಳನ್ನು ಸಮಾಧಾನವಾಗಿ ಎದುರಿಸುವಂತೆ ತಿಳಿಸಿದರಲ್ಲದೇ ಸರ್ಕಾರದಿಂದ ದೊರೆಯುವ ಸೌಲಭ್ಯ ಹಾಗೂ ಅನುದಾನಗಳನ್ನು ಪಡೆಯಲು ಪ್ರಯತ್ನಿಸಬೇಕು. ಶಿಕ್ಷಣ ಸಂಸ್ಥೆಗಳು, ಕಾಲೇಜುಗಳು ಹಾಗೂ ಸಾಮಾಜಿಕ ಅಭಿವೃದ್ಧಿ ಕಾರ್ಯಗಳಿಗೆ ದೀರ್ಘಕಾಲೀನ ಯೋಜನೆ ರೂಪಿಸಿ ಶಾಂತಿ, ಸಹೋದರತ್ವ ಹಾಗೂ ಸೌಹಾರ್ದತೆಯಿಂದ ಸಮಾಜ ಏಳ್ಗೆಗೆ ಶ್ರಮಿಸಬೇಕು ಎಂದು ಹೇಳಿದರು.

ಜಮಾತೆ ಇಸ್ಲಾಮೀ ಹಿಂದ ಸಂಚಾಲಕ ನೂರೇನಬಿ ನದಾಫ ಮಾತನಾಡಿ,ನೂತನ ಸಮಿತಿಯ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ವಕೀಲರಾದ ಎಂ.ಎ.ಲಿoಗಸೂರು ಮಾತನಾಡಿದರು.ಮುಖಂಡರಾದ ಹಾಜಿ ಹಸನಸಾಬ ಮಕಾನದಾರ,ಅಬ್ದುಲಕರೀಮ ಮೂಲಿಮನಿ,ರಜಾಕಸಾಬ ಮುಲ್ಲಾ ಇದ್ದರು. ನಜೀರ್‌ಅಹ್ಮದ್ ಮಮದಾಪುರ ನಿರೂಪಿಸಿದರು.ವಕೀಲರಾದ ಶಬ್ಬೀರ ಬಾಗಲಕೋಟ ಸ್ವಾಗತಿಸಿದರು.
ಅಂಜುಮನ್ ಕಮೀಟಿ ಅಧ್ಯಕ್ಷ ಅಲ್ಲಾಭಕ್ಷ ದೇಸಾಯಿ,ಉಪಾಧ್ಯಕ್ಷ ಇರ್ಫಾನ ಕೂಡಗಿ,ಕಾರ್ಯದರ್ಶಿ ನೂರೇಹುಸೇನ ನದಾಫ,ಖಜಾಂಚಿ ಲಾಲಸಾಬ ಮೋಮಿನ, ಸದಸ್ಯರಾದ ಗುಲಾಮೊಹ್ಮದ ದಫೇದಾರ,ಯಾಸೀನ ಸೋಠೆ,ಇಸ್ಮಾಯಿಲ್ ಗೋಲಂದಾಜ ಸೇರಿದಂತೆ ಕಮೀಟಿಯ ಸರ್ವ ಸದಸ್ಯರನ್ನು ಸನ್ಮಾನಿಸಲಾಯಿತು. ಅಂಜುಮನ್ ಹಿತರಕ್ಷಣಾ ವೇದಿಕೆಯ ಮುಖಂಡರಾದ ಎಂ.ಆರ್.ಮುಲ್ಲಾ,ವಕೀಲರಾದ ಶಬ್ಬೀರ ಬಾಗಲಕೋಟ,ಎ.ಎ.ಹಳ್ಳೂರ,ಎನ್.ಬಿ.ಮುದ್ನಾಳ,ಎನ್.ಆರ್.ಮೊಕಾಶಿ, ಯೂಸೂಫ ಸಾತಿಹಾಳ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Latest News

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ:              ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ: ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ವಿಜಯಪುರ : ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅ.13ರಿಂದ ನಿಡಗುಂದಿ-ಆಲಮಟ್ಟಿ ರಾಷ್ಟ್ರೀಯ

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಸಜ್ಜನ ಗಾಣಿಗ ಸಮಾಜದಿಂದ ಸನ್ಮಾನ :                                     ಗಾಣಿಗ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ-ದೇಸಾಯಿ

ಸಜ್ಜನ ಗಾಣಿಗ ಸಮಾಜದಿಂದ ಸನ್ಮಾನ : ಗಾಣಿಗ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ-ದೇಸಾಯಿ

ಮುದ್ದೇಬಿಹಾಳ : ಐದು ಸಾವಿರ ರೂ.ಕೊಡುವ ಮುನ್ನ ಪತ್ರಕರ್ತರನ್ನು ಕರೆದು ಎಲ್ಲರಿಗೂ ತೋರಿಸುವಂತೆ ಪ್ರಚಾರಗಿಟ್ಟಿಸಿಕೊಳ್ಳುವ ಜನರ ಮಧ್ಯೆ ಯಾವುದೇ ಸ್ವಾರ್ಥವಿಲ್ಲದೇ ಎಕರೆಗಟ್ಟಲೆ ಜಮೀನು ದಾನ ಮಾಡಿದರೂ ಅದನ್ನು ಹೇಳಿಕೊಳ್ಳುವ ಕಾರ್ಯ ಸಜ್ಜನ ಗಾಣಿಗ ಸಮಾಜದವರು ಮಾಡಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದ ಏಪಿಎಂಸಿ ಸಭಾಂಗಣದಲ್ಲಿ ತಾಲ್ಲೂಕು ವೀರಶೈವ ಸಜ್ಜನ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ