ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಾಸಕ ಸಿ.ಎಸ್.ನಾಡಗೌಡರು ವಿಶೇಷ ಮುತುವರ್ಜಿ ವಹಿಸಿ ನಗರದಲ್ಲಿ ಕೃತಕ ಬುದ್ಧಿಮತ್ತೆ(ಎಐ) ಚಾಲಿತ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಅಳವಡಿಸುವ ಕಾರ್ಯ ಆರಂಭಿಸಲಾಗಿದೆ ಎಂದು ಡಿವೈಎಸ್ಪಿ ಚಂದ್ರಕಾAತ ನಂದರೆಡ್ಡಿ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಸುವ ಕಾರ್ಯದ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಮುದ್ದೇಬಿಹಾಳ ಪಟ್ಟಣದ ಬೆಳೆದಿದ್ದು ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲೂ ಹೆಚ್ಚಿನ ಜನಸಂದಣಿ ಇದ್ದು ಅಪರಾಧ ಮಾಡಿದವರು ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ.ಅಲ್ಲದೇ ಟ್ರಾಫಿಕ್ ರೂಲ್ಸ್ಗಳನ್ನು ಪಾಲನೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಪಟ್ಟಣದಲ್ಲಿ ಅಳವಡಿಸಲಾಗುತ್ತಿದೆ.ನಗರ ಸುಂದರವಾಗಿ ಕಾಣಲು ಹಾಗೂ ಜನರು ಕಾನೂನು ಸುವ್ಯವಸ್ಥೆಯನ್ನು ಪಾಲಿಸುವುದಕ್ಕಾಗಿ ಈ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ.ಇದು ಪೊಲೀಸ್ ಇಲಾಖೆಗೆ ಹೆಚ್ಚಿನ ಬಲ ತಂದುಕೊಡಲಿದೆ ಎಂದು ತಿಳಿಸಿದರು.

ಸಿಪಿಐ ಮೊಹ್ಮದ ಫಸಿವುದ್ದೀನ,ಪಿಎಸೈ ವಿಜಯಕುಮಾರ ತಳವಾರ,ತಾಳಿಕೋಟಿ ಪಿಎಸೈ ಜ್ಯೋತಿ ಖೋತ,ಮುಖಂಡರಾದ ವಾಯ್.ಎಚ್.ವಿಜಯಕರ್,ಬಾಲಾಜಿ ಶುರ‍್ಸ್ನ ನಿರ್ದೇಶಕ ರಾಹುಲಗೌಡ ಪಾಟೀಲ,ಬಿಎಎಸ್ ಇಂಟರನ್ಯಾಶನಲ್ ಶಾಲೆಯ ಮಾರ್ಗದರ್ಶಕ ಶಿವನಗೌಡ ಬಿರಾದಾರ, ಕೆಆರ್‌ಡಿಎಲ್ ಇಲಾಖೆ ಎಇಇ ಅನುರಾಗ್, ಅಂಜುಮನ್ ಕಮೀಟಿ ಸದಸ್ಯ ಅಬ್ದುಲಗಫೂರ ಮಕಾನದಾರ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ,ಮೊಹ್ಮದರಫೀಕ ಶಿರೋಳ, ಸೇರಿದಂತೆ ಹಲವರು ಇದ್ದರು.

ಸಮಾಜದಲ್ಲಿ ಪೊಲೀಸರನ್ನು ಯಾವತ್ತಿಗೂ ಬಳಸಿಕೊಳ್ಳಬಾರದು.ಅವರನ್ನು ಬಳಸಿಕೊಂಡವರಿಗೆ ತಕ್ಕ ಉತ್ತರ ಜನರು ಕೊಟ್ಟಿದ್ದಾರೆ.ಪೊಲೀಸರಿಗೆ ಸ್ವತಂತ್ರö್ಯವಾಗಿ ಕಾರ್ಯನಿರ್ವಹಿಸಲು ಬಿಡಬೇಕು.ಅಂದಾಗ ಕಾನೂನು ಸುವ್ಯವಸ್ಥೆ ಸರಿಯಾಗಿರುತ್ತದೆ ಎಂದು ಶಾಸಕ ನಾಡಗೌಡರು ಹೇಳಿದರು.
ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಪೊಲೀಸ ಠಾಣೆಯ ನವೀಕರಣ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪೊಲೀಸ್ ಇಲಾಖೆಯ ಅಧಿಕಾರಿಗಳು,ಜನಪ್ರತಿನಿಧಿಗಳು ಇದ್ದರು.

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ