ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ ಚಂದ್ರಶೇಖರ ರಾಮೋಡಗಿ ಉಪಸ್ಥಿತರರಲಿದ್ದು ಮುಖ್ಯ ಅತಿಥಿಗಳಾಗಿ ವಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಎಸ್.ಪಾಟೀಲ ಯಾಳಗಿ,ಮಾಜಿ ಉಪಾಧ್ಯಕ್ಷ ಎಂ.ಎಸ್.ಪಾಟೀಲ,ಮುಖAಡರಾದ ಪ್ರಸನ್ನಕುಮಾರ ಜಹಗೀರದಾರ,ಸುನೀಲಕುಮಾರ ಜಹಗೀರದಾರ,ಸಹಕಾರ ಸಂಘಗಳ ಉಪ ನಿಬಂಧಕಿ ಎಸ್.ಕೆ.ಭಾಗ್ಯಶ್ರೀ,ನಬಾರ್ಡ್ ಜಿಲ್ಲಾ ಪ್ರಬಂಧಕ ವಿಕಾಸ ರಾಠೋಡ,ವಿಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎ.ಢವಳಗಿ,ಸಹಾಯಕ ನಿಬಂಧಕ ಚೇತನ ಭಾವಿಕಟ್ಟಿ,ಡಿಸಿಸಿ ಬ್ಯಾಂಕ್ ಉಪ ಪ್ರಧಾನ ವ್ಯವಸ್ಥಾಪಕ ಆರ್.ಎಂ.ಪಾಟೀಲ,ತರಬೇತಿ ಸಂಯೋಜಕ ಆರ್.ಎಂ.ಬಣಗಾರ,ಸಹಕಾರ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ ಉತ್ನಾಳ,ನೋಡಲ್ ಅಧಿಕಾರಿ ಎಸ್.ಎಸ್.ಉಣ್ಣಿಭಾವಿ,ಶಾಖಾ ವ್ಯವಸ್ಥಾಪಕ ಜಿ.ಎನ್.ರಾರಡ್ಡಿ ಆಗಮಿಸುವರು.
ಕಾರ್ಯಕ್ರಮದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರ ಎನ್.ಎಸ್.ಪೂಜಾರಿ(ಮದರಿ),ಜಿ.ಸಿ.ನಾಗೂರ,ಮಲ್ಲನಗೌಡ ಬಿರಾದಾರ,ಶ್ರವಣಕುಮಾರ ಹಿರೇಮಠ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಬಾಗೇವಾಡಿ ತಿಳಿಸಿದ್ದಾರೆ.







