ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ.
ಟಾಸ್ಕಫರ್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಮುದ್ದೇಬಿಹಾಳದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ದಿನಗಳಿಂದ ನಡೆದಿರುವ ಹೋರಾಟದ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದಿದೆ.







