ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು 20.34 ಲಕ್ಷ ರೂ.ಲಾಭ ಮಾಡಿದೆ ಎಂದು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಮನೋಹರ ಎಸ್.ಮೇಟಿ(ಬಸರಕೋಡ) ಹೇಳಿದರು.

ಪಟ್ಟಣದ ಏಪಿಎಂಸಿಯಲ್ಲಿರುವ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಕಚೇರಿ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 69ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಸಂಘದ ಆರ್ಥಿಕ ವ್ಯವಹಾರವನ್ನು ಸಭೆಗೆ ತಿಳಿಸಿದರು.

ರೈತರು ಬೆಳೆದ ಒಕ್ಕಲುತನ ಹುಟ್ಟುವಳಿ ಮಾರಾಟ ಮಾಡಿಸುವಲ್ಲಿ ಹೆಚ್ಚಿಗೆ ಕಾಳಜಿ ವಹಿಸಿ ಕಾರ್ಯನಿರ್ವಹಿಸುತ್ತಿದೆ.ರೈತರಿಗೆ ಸುಧಾರಿಸಿದ ಬೀಜ,ಗೊಬ್ಬರ ತಂದು ಅನುಕೂಲ ಕಲ್ಪಿಸಿದೆ ಎಂದು ಹೇಳಿದರು.ಸಂಘವು ಮುದ್ದೇಬಿಹಾಳ,ನಾಲತವಾಡ,ತಾಳಿಕೋಟೆಯಲ್ಲಿ ಶಾಖೆಗಳನ್ನು ಹೊಂದಿದ್ದು ಮೂರು ಶಾಖೆಗಳು ಲಾಭದಲ್ಲಿ ನಡೆದಿದೆ ಎಂದು ತಿಳಿಸಿದರು.

ಸಂಘದ ಸಹಾಯಕ ವ್ಯವಸ್ಥಾಪಕ ಗುರುರಾಜ ಕೋನರೆಡ್ಡಿ ಮಾತನಾಡಿ, ಮುದ್ದೇಬಿಹಾಳದ ಶಾಖೆಯು ಸನ್ 2025-26ರಲ್ಲಿ 8.23 ಲಕ್ಷ ರೂ.ಗಳಷ್ಟು ಗೊಬ್ಬರ ಮಾರಾಟ ಮಾಡಿದೆ.ತಾಳಿಕೋಟಿ ಶಾಖೆಯು 29,800 ರೂ.ರಷ್ಟು ಮಾರಾಟ ಮಾಡಲಾಗಿದೆ.ಸನ್ 2026-27ರಲ್ಲಿ ಮುದ್ದೇಬಿಹಾಳ ಶಾಖೆಯು 10.50 ಲಕ್ಷ, ತಾಳಿಕೋಟಿ 10.80 ಲಕ್ಷ,ನಾಲತವಾಡ ಶಾಖೆ 3.50 ಲಕ್ಷ ರೂ.ಲಾಭಾಂಶ ಮಾಡಿದೆ ಎಂದು ತಿಳಿಸಿದರು.

ಸಂಘದ ನಿರ್ದೇಶಕ ಬಸವರಾಜ ಇಸ್ಲಾಂಪೂರ, ಹೊಸದಾಗಿ ನಾವು ಸಂಘಕ್ಕೆ ಸದಸ್ಯರಾದ ಬಳಿಕ ಸಂಘದ ಲಾಭಾಂಶದಲ್ಲಿ ಏರಿಕೆಯಾಗಿರುವುದು ಹರ್ಷವನ್ನುಂಟು ಮಾಡಿದೆ.ರೈತರ ಪ್ರಗತಿಗೆ ನಾವೆಲ್ಲರೂ ಒಗ್ಗೂಡಿ ಶ್ರಮಿಸುತ್ತೇವೆ ಎಂದರು.

ಇನ್ನೋರ್ವ ನಿರ್ದೇಶಕ ಸುರೇಶ ಹಳೇಮನಿ ಮಾತನಾಡಿ, ಬರಗಾಲದ ಸಮಯದಲ್ಲಿ ರೈತರು ಸಂಘದ ಸಾಮಾನ್ಯ ಸಭೆಗಳಿಗೂ ಬರಲು ಮನಸ್ಸು ಮಾಡದಿರುವುದು ಬೇಸರವೆನಿಸುತ್ತಿದೆ.ಸಂಘದಿದ ರೈತರ ಏಳ್ಗೆಗೆ ಶ್ರಮಿಸುತ್ತೇವೆ ಎಂದರು.ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ,ಸಂಘದ ಪ್ರಭಾರಿ ವ್ಯವಸ್ಥಾಪಕ ವಿ.ಎಸ್.ಉತ್ನಾಳ ಮಾತನಾಡಿದರು.

ಸಂಘದ ಉಪಾಧ್ಯಕ್ಷ ಚಿದಾನಂದ ಸೀತಿಮನಿ,ನಿರ್ದೇಶಕರಾದ ಮಲ್ಲನಗೌಡ ಬಿರಾದಾರ,ನೀಲಕಂಠಗೌಡ ಗೌಡರ,ಗುರುಲಿಂಗಪ್ಪ ಹಡ್ಲಗೇರಿ,ಮಲ್ಲಮ್ಮ ಪಾಟೀಲ,ವನಮಾಲಾ ಮೇಟಿ,ಮುತ್ತಣ್ಣ ಮುತ್ತಣ್ಣವರ,ಗುರಣ್ಣ ಹತ್ತೂರ,ಬಸವರಾಜ ಬಗಲಿ,ಅಶೋಕ ಇಲಕಲ್,ಸಿಬ್ಬಂದಿ ಎಂ.ಎo.ಪಾಟೀಲ,ಎಸ್.ಎo.ಚೌಧರಿ,ತಾಳಿಕೋಟಿ ಸಹಾಯಕ ವ್ಯವಸ್ಥಾಪಕ ಬಿ.ಎಂ.ಬಿರಾದಾರ,ಸಿಬ್ಬoದಿ ಎಸ್.ಜಿ.ಕೊಳ್ಳಿ,ಬಿ.ಆರ್.ಇಂಗಳೇಶ್ವರ ಮತ್ತಿತರರು ಇದ್ದರು.

Latest News

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು

ಪಾಲಕರು,ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅನ್ನದಾತರು-ಅಮೀತಗೌಡ ಪಾಟೀಲ್

ಪಾಲಕರು,ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅನ್ನದಾತರು-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಮೇಲಿನ ಪೈಪೋಟಿ ಹೆಚ್ಚಾಗಿದ್ದು, ಆಕ್ಸ್ಫರ್ಡ್ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೆಡಿಕಲ್ ಕನಸು ನನಸಾಗಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ನಿರಂತರ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ್ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಏರ್ಪಡಿಸಿದ್ದ ಸನ್ 2025-26ನೇ ಸಾಲಿನಲ್ಲಿ ಮೊದಲ ಸುತ್ತಿನಲ್ಲಿ ಎಂಬಿಬಿಎಸ್ ಸೀಟು ಪಡೆದುಕೊಂಡ 170ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸನ್ಮಾನ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಬರ ಘೋಷಣೆಗೆ ತಾಲೂಕನ್ನು ಕೈಬಿಟ್ಟಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರೇ ನೇರ ಕಾರಣ ಎಂದು ಶಾಸಕ ಸಿ.ಎಸ್.ನಾಡಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುದ್ದೇಬಿಹಾಳ ತಾಲೂಕಿಗೆ ಬರ ಘೋಷಣೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ಪ್ರಥಮ ಆದ್ಯತೆಯಲ್ಲಿ ಸೇರ್ಪಡೆಯಾಗಬೇಕಿತ್ತು. ಈ ಕುರಿತು ಕಂದಾಯ ಮಂತ್ರಿ ಜಿ.ಪರಮೇಶ್ವರ