ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು.

ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಹಬ್ಬ ಹಿರಣ್ಯಕಶಿಪುವಿನ ಮೇಲೆ ವಿಷ್ಣುವಿನ ನರಸಿಂಹನ ವಿಜಯವನ್ನು ಸ್ಮರಿಸುತ್ತದೆ.ಕೆಟ್ಟ ಗುಣಗಳನ್ನು ತೊಡೆದು ಹಾಕಿ ಒಳ್ಳೆಯದ ಕಡೆಗೆ ಸಾಗುವುದೇ ಹೋಳಿ ಹಬ್ಬ ಆಚರಣೆಯ ವಿಶೇಷವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪುರಸಭೆ ಮಾಜಿ ಸದಸ್ಯ ಸುರೇಶ ತುಂಬಗಿ,ಪ್ರಭುಲಿoಗ ನಂದೆಪ್ಪನವರ,ಉದಯ ರಾಯಚೂರ,ಆನಂದ ತುಪ್ಪದ, ಬಸವರಾಜ ನಾಗೂರ, ರವಿ ತಾಳಿಕೋಟಿ, ಮಲ್ಲು ಕಡಿ. ಮಹಾಂತೇಶ ಬೂದಿಹಾಳಮಠ. ಕಿರಣ ಪಾಟೀಲ, ಮುತ್ತು ಕಂಠಿ,ಸುನೀಲ ಪತ್ತಾರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ವರ್ಣರಂಜಿತ ಕಾರಂಜಿಯ ವ್ಯವಸ್ಥೆ ಚಿಣ್ಣರ ಬಣ್ಣದೋಕುಳಿ ಸಡಗರವನ್ನು ಹೆಚ್ಚಿಸಿತು.ನೂರಾರು ಮಕ್ಕಳು ಬಣ್ಣದಾಟದಲ್ಲಿ ಮಿಂದೆದ್ದು ಸಂಭ್ರಮಿಸಿದರು

Latest News

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ

ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಬೆಂಗಳೂರಿನಲ್ಲಿ ಮಾ.6 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಗುತ್ತಿಗೆದಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಮಾ.1 ರಂದು ಸಾಯಂಕಾಲ 4.00ಕ್ಕೆ ಮುದ್ದೇಬಿಹಾಳ ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ಗುತ್ತಿಗೆದಾರರ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುರೇಶಗೌಡ ಪಾಟೀಲ(ಇಂಗಳಗೇರಿ) ತಿಳಿಸಿದ್ದಾರೆ. ಪ್ರಕಟಣೆ ನೀಡಿರುವ ಅವರು, ರಾಜ್ಯದ 30 ಸಾವಿರ ಗುತ್ತಿಗೆದಾರರು ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ಆರ್.ಮಂಜುನಾಥ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ಹಾಗೂ ಇನ್ನೀತರ

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ;                        ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ; ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿಕೊಂಡು ಮರಳಿ ತಮ್ಮೂರಿಗೆ ಬೈಕ್ ಮೇಲೆ ಹೊರಟಿದ್ದ ಇಬ್ಬರು ವಿದ್ಯಾರ್ಥಿಗಳಿದ್ದ ಬೈಕ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಅಸುನೀಗಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಿದರಕುಂದಿ ಗ್ರಾಮದ ಸಮೀಪದಲ್ಲಿ ಶನಿವಾರ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಮುದ್ದೇಬಿಹಾಳ ಪಟ್ಟಣದ ಶಾಂತಲಾ ಪ್ರೌಢಶಾಲೆಯ ವಿದ್ಯಾರ್ಥಿ, ತಾಲ್ಲೂಕಿನ ಗೋನಾಳ ಪಿ.ಎನ್. ಗ್ರಾಮದ ನಿವಾಸಿ ಮಹೇಶ ಬಸಪ್ಪ ಮಾದರ(16)ಎಂದು ಗುರುತಿಸಲಾಗಿದೆ.