A daughter who escaped house theft by sitting in America

ಅಮೆರಿಕದಲ್ಲಿ ಕುಳಿತು ಮನೆ ಕಳ್ಳತನ ತಪ್ಪಿಸಿದ ಪುತ್ರಿ

ಅಮೆರಿಕದಲ್ಲಿ ಕುಳಿತು ಮನೆ ಕಳ್ಳತನ ತಪ್ಪಿಸಿದ ಪುತ್ರಿ

ಮುಧೋಳ: ಟೆಕ್ಕಿ ಯುವತಿಯೊಬ್ಬರು ಅಮೆರಿಕದಲ್ಲಿ ಕುಳಿತೇ ತನ್ನ ಮನೆಯಲ್ಲಿ ನಡೆಯಬಹುದಾದ ಕಳ್ಳತನವನ್ನು ತಪ್ಪಿಸಿ ಸುದ್ದಿಯಾಗಿದ್ದಾರೆ.

ಮುಧೋಳ ನಗರದ ಸಿದ್ರಾಮೇಶ್ವರ ಕಾಲೋನಿಯಲ್ಲಿ ನೆಲೆಸಿರುವ ನಿವೃತ್ತ ಎಂಜಿನಿಯರ್‌ ಹನಮಂತಗೌಡ ಅವರ ಪುತ್ರಿ ಶೃತಿ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ. ವಿದೇಶದಲ್ಲಿದ್ದರೂ ಸಮಯಪ್ರಜ್ಞೆ ಮೆರೆಯುವ ಮೂಲಕ ಮನೆಗೆ ನುಗ್ಗಿದ್ದ ಕಳ್ಳರನ್ನು ಓಡಿಸುವಲ್ಲಿ ಶೃತಿ ಯಶಸ್ವಿಯಾಗಿದ್ದಾರೆ.

ಘಟನೆಯ ವಿವರ : ಕೆಲ ವರ್ಷಗಳ ಹಿಂದೆ ಸ್ವದೇಶಕ್ಕೆ ಆಗಮಿಸಿದ್ದಾಗ ಶೃತಿ ಮನೆಗೆ ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಅಳವಡಿಸಿದ್ದು ಮಾತ್ರವಲ್ಲ ಅದರ ದೃಶ್ಯ ತನ್ನ ಮೊಬೈಲಿಗೆ ಬರುವಂತೆ ಸಿಂಕ್‌ ಮಾಡಿದ್ದರು.

ಮಂಗಳವಾರ ತಡರಾತ್ರಿ ಒಂದರಿಂದ ಎರಡು ಗಂಟೆಯ ಮಧ್ಯೆ ಕಳ್ಳ ಗ್ಯಾಂಗ್ ಇಬ್ಬರು ಹನಮಂತಗೌಡ ಸಂಕಪ್ಪನವರ ಮನೆಗೆ ನುಗ್ಗಿದ್ದಾರೆ. ಮುಧೋಳದಲ್ಲಿ ಮಧ್ಯರಾತ್ರಿ ಆಗಿದ್ದರೆ ಅಮೆರಿಕದಲ್ಲಿ ಮಧಾಹ್ನದ 3:30ರ ಸಮಯವದು. ಹೀಗೆ ಮೊಬೈಲ್‌ ನೋಡುತ್ತಿದ್ದಾಗ ಮನೆಗೆ ಕಳ್ಳರು ನುಗ್ಗಿದ ದೃಶ್ಯವನ್ನು ನೋಡಿ ಕೂಡಲೇ ಶೃತಿ ಪೋಷಕರಿಗೆ ಕರೆ ಮಾಡಿದ್ದಾರೆ.

ತಕ್ಷಣ ಎಚ್ಚೆತ್ತ ಪೋಷಕರು ಬಾಗಿಲು ತೆರೆಯದೇ ಮನೆಯ ಎಲ್ಲಾ ದೀಪ ಆನ್‌ ಮಾಡಿ ಕೂಗಾಡಿದ್ದಾರೆ. ದಿಢೀರ್‌ ಮನೆಯ ಲೈಟ್‌ ಆನ್‌ ಆಗಿದ್ದನ್ನು ಕಂಡು ಕಳ್ಳರು ಶಾಕ್‌ಗೆ ಒಳಗಾಗಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಮುಧೋಳ ನಗರದಲ್ಲಿ ಈ ರೀತಿಯ ಗ್ಯಾಂಗ್ ಕಳ್ಳರ ಹಾವಳಿ ಜೋರಾಗಿದೆ. ಕಳ್ಳರನ್ನ ಹುಡುಕಿ ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ.

ವೆಂಕಟೇಶ ಗುಡೆಪ್ಪನವರ

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ