A grand opening of the school

ಅದ್ದೂರಿಯಾಗಿ ಶಾಲಾ ಪ್ರಾರಂಭೋತ್ಸವ.

ಅದ್ದೂರಿಯಾಗಿ ಶಾಲಾ ಪ್ರಾರಂಭೋತ್ಸವ.

ನಾಗಬೇನಾಳ ತಾಂಡಾ: ಇಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಾಗಬೇನಾಳ ತಾಂಡಾದಲ್ಲಿ ಅದ್ದೂರಿಯಾಗಿ ಶಾಲಾ ಪ್ರಾರಂಭೋತ್ಸವ ಮಾಡಲಾಯಿತು.

ಮಕ್ಕಳಿಗೆ ಬೇಸಿಗೆ ರಜೆಗಳ ನಂತರ ಇಂದು ಶಾಲೆಗೆ ಬರುವ ಮುದ್ದು ಮಕ್ಕಳನ್ನು ಹೂಗುಚ್ಛ ಕೊಟ್ಟು ಬರಮಾಡಿಕೊಳ್ಳಲಾಯಿತು.

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ನಾಗಬೇನಾಳ ತಾಂಡಾದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿತು ದೇಶ ಸೇವೆ ಮಾಡುತ್ತಿರುವ ಸೈನಿಕರಾದ ವೆಂಕಟೇಶ ಸೇವಪ್ಪ ನಾಯಕ್, ರಾಜು ಕೀರಪ್ಪ. ಚವಾಣ್ ಇವರಿಗೆ ಗೌರವ ಸನ್ಮಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ ನಮ್ಮ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಪದ್ಮಾವತಿ ರವಿ ಲಮಾಣಿ, ನವೀನ ನಾಯಕ್ 2024 ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಂಕ ಪಡೆದಿದ್ದಕ್ಕಾಗಿ ಸನ್ಮಾನಿಸಲಾಯಿತು.ಜೊತೆಗೆ ವೈಷ್ಣವಿ ಮಹಾದೇವಪ್ಪ ನಾಯಕ, (ಮುರಾರ್ಜಿ ದೇಸಾಯಿ, ನವೋದಯ, ಕಿತ್ತೂರು, ಸೈನಿಕ ಶಾಲೆ,ಆರ್ ಎಂ ಎಸ್ ಎ)ಎಲ್ಲಾ ಪರೀಕ್ಷೆಗಳಲ್ಲಿ ಆಯ್ಕೆಗೊಂಡು ಕೊನೆಗೆ ನವೋದಯ ಶಾಲೆಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸನ್ಮಾನಿಸಲಾಯಿತು.

ಶಾಲೆಯ ಆದರ್ಶ ವಿದ್ಯಾರ್ಥಿ ರೋಷನ್ ಕುಮಾರ್ ಕೋಳೂರು ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಿವಾನಂದ ಕೃಷ್ಣಪ್ಪ ನಾಯಕ್ ಮತ್ತು ಗ್ರಾಮ ಪಂಚಾಯತಿಯ ಸದಸ್ಯರಾದ ರಘು ಪವಾರ್ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಗುರುಗಳು ಶಿವಲೀಲಾ ಗಂಗನಗೌಡರ, ಶಿಕ್ಷಕರು ಪಾಲಕರು ಶಿಕ್ಷಣ ಪ್ರೇಮಿಗಳಾದ ಮಹಾದೇವಪ್ಪ ನಾಯಕ, ಶಿಕ್ಷಕರು ಗೋವಿಂದ ನಾಯಕ್, ವೆಂಕಟೇಶ್ ನಾಯಕ್, ಜಗದೇವ ನಾಯಕ್ ಇತರರು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಪ್ರಿಯಾ ಯರನಾಳ ಗುರುಮಾತೆಯರು ಸ್ವಾಗತಿಸಿದರು. ವೀರೇಶ್ ನವಲಿ ಶಿಕ್ಷಕರು ನಿರೂಪಿಸಿದರು. ಅಕ್ಕಮಹಾದೇವಿ ಉಪನಾಳ ಗುರುಮಾತೆಯರು ವಂದಿಸಿದರು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಬಿಸಿಊಟ ಬಾಳೆಹಣ್ಣು ವಿತರಿಸಲಾಯಿತು.

ವರದಿಗಾರ : ಶಿವು ರಾಠೋಡ

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ