A grand welcome to Bigg Boss contestant Mallamma

ಬಿಗ್ ಬಾಸ್ ಸ್ಪರ್ಧಿ ಮಲ್ಲಮ್ಮಗೆ ಅದ್ದೂರಿ ಸ್ವಾಗತ

ಬಿಗ್ ಬಾಸ್ ಸ್ಪರ್ಧಿ ಮಲ್ಲಮ್ಮಗೆ ಅದ್ದೂರಿ ಸ್ವಾಗತ

ಸುರಪುರ : ಕಲರ್ಸ್ ಕನ್ನಡ ಚಾನಲ್ ನ ಬಿಗ್ ಬಾಸ್ ಸೀಜನ್ 12ರ ಸ್ಪರ್ಧಿ ಮಲ್ಲಮ್ಮ ಬಾವಿಯವರನ್ನು ಸುರಪುರ ತಾಲ್ಲೂಕಿನ ಸ್ವಗ್ರಾಮವಾದ ಕನ್ನೆಳ್ಳಿ ಗ್ರಾಮಸ್ಥರು ಎತ್ತಿನ ಬಂಡಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಿದರು.

ನಟ ಮನೋಜ್ ಕುಮಾರ್ ಹಾಗೂ ಸೆಲೆಬ್ರಿಟಿಸ್ ಪಲ್ಲವಿ ಲಕ್ಷ್ಮೀಕಾಂತಗೌಡ ಜೊತೆಗೆ ಮಲ್ಲಮ್ಮ ಬಾವಿಯವರನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಲಾ ಮಕ್ಕಳು ಲೇಜಿಮ್ ತಂಡದ ಜೊತೆಗೆ ಡೊಳ್ಳು ಕುಣಿತದ ತಂಡದೊಂದಿಗೆ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮಾಡಲಾಯಿತು.

ನಂತರ ಕನ್ನೆಳ್ಳಿ ಗ್ರಾಮಸ್ಥರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಆಕಾಶವಾಣಿ ಕಲಾವಿದರಾದ ವೀರೇಶ ಗವಾಯಿಗಳು ಹಾಗೂ ಮಹಾಂತೇಶ ಹೆಗ್ಗಣದೊಡ್ಡಿ ಯವರಿಂದ ಸಂಗೀತ ಕಾರ್ಯಕ್ರಮ ಜರುಗಿತು.

ಡೊಳ್ಳು ವಾಧ್ಯ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ದೇವದುರ್ಗದ ಮಲದಕಲ್ ಪೂಜ್ಯರು, ನಗನೂರು ಸೂಗೂರೇಶ್ವರ ಮಠದ ಪೂಜ್ಯರು, ಹೆಗ್ಗಣದೊಡ್ಡಿ ಧರ್ಮರ ಮಠದ ಪೂಜ್ಯರು, ಶಹಾಪುರ ಚರಬಸವೇಶ್ವರ ಗದ್ದುಗೆ ಸಂಸ್ಥಾನದ ಪೂಜ್ಯರಾದ ಶರಣು ಗದ್ದುಗೆ, ಬಂಡೆಪ್ಪನಹಳ್ಳಿ ಪೂಜ್ಯರು ಕನ್ನೆಳ್ಳಿ ಗ್ರಾಮದ ಮಲ್ಲಯ್ಯ ಮುತ್ಯಾ, ಪಂಚಯ್ಯ ಮುತ್ಯಾ, ಗೋವಿಂದ ರಾಜ ದೇವರು, ದೊಡ್ಡಪ್ಪಗೌಡ ಪೋಲಿಸ್ ಪಾಟೀಲ್, ಬಾಪುಗೌಡ ಮಾಲಿಪಾಟೀಲ್ ಸುರಪುರ ಪಿಎಸ್ಐ ಸಿದ್ದಣ್ಣ ಯಡ್ರಾಮಿ ಸೇರಿದಂತೆ ಇತರರು ವೇದಿಕೆ ಮೇಲಿದ್ದರು.

ಗ್ರಾಮದ ಪ್ರಮುಖರಾದ ನಿಂಗಣ್ಣ ಗೋಡಿಹಾಳ್ಕರ್, ಬಸವರಾಜ ನಾಯ್ಕೋಡಿ, ಮಡಿವಾಳಪ್ಪ ಕೊಂಡಗುಳಿ, ಚಂದಪ್ಪ ನಾಯ್ಕೋಡಿ, ನಾದಬ್ರಹ್ಮ ಹೆಬ್ಬಾಳ್ಕರ್, ಮಲ್ಲಣ್ಣ ಹಡಪದ, ಮಲ್ಲಿಕಾರ್ಜುನ ಕುಂಬಾರ ಸೇರಿದಂತೆ ಗ್ರಾಮದ ಹಿರಿಯರು, ಯುವಕರು, ಮಹಿಳೆಯರು ಮತ್ತು ಮಕ್ಕಳು ಇದ್ದರು.

ಸಗರನಾಡು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ಅಂಗಡಿ ನಿರೂಪಿಸಿದರು, ಮಲ್ಲು ಚಾನಕೋಟಿ ಸ್ವಾಗತಿಸಿದರು.

ವರದಿ : ಶಿವು ರಾಠೋಡ

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ