ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು



ನಾಲತವಾಡ : ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಾಲತವಾಡ ಪಟ್ಟಣದ ಪೆಟ್ರೋಲ್ ಪಂಪ್ ಹತ್ತಿರ ಗುರುವಾರ ಸಂಭವಿಸಿದೆ.


ಮೃತಪಟ್ಟ ವ್ಯಕ್ತಿಯನ್ನು ಲಿಂಗಸಗೂರು ತಾಲ್ಲೂಕಿನ ನಾಗರಾಳದ ಶಿವಪುತ್ರಪ್ಪ ಸಿದ್ದಪ್ಪ ಭಜಂತ್ರಿ(50)ಎAದು ಗುರುತಿಸಲಾಗಿದೆ.ಬಿಹಾರ ಮೂಲದ ಚಂಪಾರಣ ಈಸ್ಟ್ ಮೋತಿಹರಿ ಹರದಿಯಾ ನಿವಾಸಿ ಜಲ್ಫೆಕರಲಿ ಹಫೀಜುಲ್ಲಾ ಮಿಯಾ ತಾನು ಚಲಾಯಿಸುತ್ತಿದ್ದ ಕ್ರೇನ್ ವಾಹನವನ್ನು ಅತೀ ವೇಗದಿಂದ ಅಜಾಗರೂಕತೆಯಿಂದ ಚಲಾಯಿಸಿಕೊಂಡು ನಾಲತವಾಡದಿಂದ ನಾರಾಯಣಪೂರ ಕಡೆಗೆ ತೆರಳುತ್ತಿದ್ದ ಈ ವೇಳೆ ರಸ್ತೆ ಬದಿ ನಿಂತಿದ್ದ ಶಿವಪುತ್ರಪ್ಪ ಭಜಂತ್ರಿ ಮೇಲೆ ಹಾಯಿಸಿ ಸ್ಥಳದಲ್ಲೇ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನ ಪತ್ನಿ ಶಂಕ್ರಮ್ಮ ಭಜಂತ್ರಿ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು