A pub bouncer ran amok after a bike was hit by a car. The video tweeted by the police went viral

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

ಬೆಂಗಳೂರು: ರಸ್ತೆಯಲ್ಲಿ ದಿಢೀರನೇ ಬ್ರೇಕ್ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ನಿರ್ಲಕ್ಷಿಸಿದರು ಎಂದು ಸಿಟ್ಟಿಗೆದ್ದು ಸಾಫ್ಟ್‌ವೇರ್ ಉದ್ಯೋಗಿ ದಂಪತಿ ಕಾರನ್ನು ಅಡ್ಡಗಟ್ಟಿ ದುಂಡಾವರ್ತನೆ ತೋರಿದ ಆರೋಪದ ಮೇರೆಗೆ ಪಬ್ ಬೌನ್ಸರ್‌ನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬೆಳ್ಳಂದೂರು ನಿವಾಸಿ ನವೀನ್ ರೆಡ್ಡಿ ಬಂಧಿತನಾಗಿದ್ದು, ಸರ್ಜಾಪುರ ರಸ್ತೆಯ ಮೇಲ್ವೇತುವೆ ಬಳಿ ಸೋಮವಾರ ರಾತ್ರಿ ರೆಡ್ಡಿ ಮನೆಗೆ ಮರಳುವಾಗ ಮಾರ್ಗ ಮಧ್ಯೆ ಈ ಗಲಾಟೆ ನಡೆದಿದೆ.

Join Our Telegram: https://t.me/dcgkannada

ತಮ್ಮ ಕಾರಿನ ಮೇಲೆ ರೆಡ್ಡಿ ಹಲ್ಲೆ ನಡೆಸಿದ್ದ ವಿಡಿಯೋ ವನ್ನು ಟ್ವಿಟರ್ ನಲ್ಲಿ ಶೇರ್‌ ಮಾಡಿ ನಗರ ಪೊಲೀಸ್ ಆಯುಕ್ತರಿಗೆ ಸಾಫ್ಟ್‌ವೇ‌ರ್ ಉದ್ಯೋಗಿ ಜಿತಿನ್ ದೂರು ನೀಡಿದ್ದರು. ಈ ಗಲಾಟೆ ವಿಡಿಯೋ ವೈರಲ್ ಆಗಿ ತಪ್ಪಿತಸ್ಥನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ನೆಟ್ಟಿಗರು ಆಗ್ರಹಿಸಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ಘಟನೆಯ ವಿವರ:

ಸರ್ಜಾಪುರ ಮೇಲ್ಲೇತುವೆ ಇಳಿಯುವಾಗ ದಿಢೀರನೇ ತಮ್ಮ ಕಾರಿಗೆ ಜಿತಿನ್‌ ರಾಜ್ ಬ್ರೇಕ್ ಹಾಕಿದ್ದಾರೆ. ಆ ವೇಳೆ ಕಾರಿನ ಹಿಂದೆ ಬರುತ್ತಿದ್ದ ಕಂಗಾಲಾಗಿ ನವೀನ್ ರೆಡ್ಡಿ, ಟೆಕ್ಕಿ ಕಾರಿಗೆ ಬೈಕ್ ಗುದ್ದಿಸಿ ಕೆಳಗೆ ಬಿದ್ದಿದ್ದಾನೆ. ಆದರೆ ಕೆಳಗೆ ಬಿದ್ದರು ವಿಚಾರಿಸದೆ ಜಿತಿನ್ ಮುಂದು ವರೆದಿದ್ದಾರೆ.

ಈ ವೇಳೆ ಬೈಕ್ ಅನ್ನು ಓಡಿಸಿಕೊಂಡು ಕಾರಿನ ಮುಂದೆ ಬಂದ ನವೀನ್, ಕಾರು ನಿಲ್ಲಿಸುವಂತೆ ಸೂಚಿಸಿದ್ದಾನೆ. ಆದರೆ ಈ ಮಾತಿಗೆ ಕ್ಯಾರೇ ಎನ್ನದೆ ಕಾರು ಚಾಲಾಯಿ ಸಲು ಜಿತಿನ್ ಮುಂದಾಗಿದ್ದಾರೆ. ಈ ನಿರ್ಲಕ್ಷ್ಯತನ ವರ್ತನೆಯಿಂದ ಕೆರಳಿದ ನವೀನ್, ತಕ್ಷಣವೇ ಕಾರಿನ ವೈಫ‌ರ್ ಕಿತ್ತು ಹಾಕಿ ಗಲಾಟೆ ಮಾಡಿದ್ದಾನೆ.

ಈ ದುಂಡಾವರ್ತನೆಗೆ ಭಯ ಗೊಂಡ ಜಿತಿನ್ ರಾಜ್ ದಂಪತಿ, ಕಾರಿನಲ್ಲಿ ಮಗುವಿದೆ ಗಲಾಟೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಕೊನೆಗೆ ಸಾರ್ವಜನಿಕರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಈ ವಿಡಿಯೋವನ್ನು ‘ಎಕ್ಸ್’ನಲ್ಲಿ ಹಂಚಿಕೊಂಡು ನಗರ ಪೊಲೀಸ್ ಆಯುಕ್ತರಿಗೆ ಜಿತಿನ್ ದೂರು ಕೊಟ್ಟಿದ್ದರು. ಆರೋಪಿ ಕೋರಮಂಗಲದ ಪಬ್‌ನಲ್ಲಿ ಬೌನ್ಸರ್‌ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

Latest News

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. ಸಾಯಿ ಬಡಾವಣೆ ನಿವಾಸಿ ಮಹಿಬೂಬ ಕುಮಸಿ ಅವರ ಮನೆಯಲ್ಲಿದ್ದ ಫ್ರಿಜ್, ಫ್ಯಾನ್ ಸೇರಿದಂತೆ ಮನೆ ಬಳಕೆ ವಸ್ತುಗಳು ಹಾನಿಯಾಗಿವೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ನಾಗೇಶ ರಾಠೋಡ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು.