ಮುಧೋಳ: ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಿಂದ ಕೆಳಗೆ ಬಿದ್ದ ಬಾಲಕಿ ಮೇಲೆ ಹಿಂದಿನಿಂದ ಟ್ರ್ಯಾಕ್ಟರ್ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಮಂಡಬಸಪ್ಪನ ಗುಡಿ ಹತ್ತಿರ ಗುರುವಾರ ರಾತ್ರಿ ಸಂಭವಿಸಿದೆ.
ಮೃತ ಬಾಲಕಿಯನ್ನು ಏಳು ವರ್ಷದ ಅಂಜಲಿ ಎಂದು ಗುರುತಿಸಲಾಗಿದೆ. ತಂದೆ ಉಮೇಶನೊಂದಿಗೆ ಮುಧೋಳದಿಂದ ಬೈಕ್‌ನಲ್ಲಿ ಬರಗಿ ಗ್ರಾಮಕ್ಕೆ ತೆರಳುವ ವೇಳೆ ಎದುರಿನಿಂದ ಮತ್ತೊಂದು ಬೈಕ್ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆ ಬಿದ್ದ ಅಂಜಲಿ ಮೇಲೆ ಟ್ರ್ಯಾಕ್ಟರ್ ಹರಿದು ಅವಘಡ ಸಂಭವಿಸಿದೆ.
ಘಟನೆಯಲ್ಲಿ ಬಾಲಕಿ ತಂದೆ ಉಮೇಶನಿಗೂ ಗಂಭೀರ ಗಾಯಗಳಾಗಿವೆ. ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.