ಬೆಂಗಳೂರು: ಕುಡಿದ ಮತ್ತಿನಲ್ಲಿ ಮಗನೋರ್ವ ಜನ್ಮ ಕೊಟ್ಟ ತಾಯಿಯನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮುದ್ದನಾಯಕನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada
ಮೃತ ದುರ್ದೈವಿಯನ್ನು 55 ವರ್ಷದ ರತ್ನಮ್ಮ ಎಂದು ಗುರುತಿಸಲಾಗಿದೆ.
ತಾಲೂಕಿನ ಮುದ್ದನಾಯಕನಹಳ್ಳಿ ಗ್ರಾಮದ ರಾಗರಾಳಗುಟ್ಟೆ ದಿಣ್ಣೆಯ ಮಂಟಪದಲ್ಲಿ ವಾಸವಾಗಿದ್ದ ಸುಮಾರು 55 ವರ್ಷ ವಯಸ್ಸಿನ ರತ್ನಮ್ಮ ಎನ್ನುವವರ ಆಕೆಯ ಮಗ ಗಂಗಾಧರ ಎನ್ನುವವ ಕುಡಿದ ಅಮಲಿನಲ್ಲಿ ಚಾಕುವಿನಿಂದ ಕುತ್ತಿಗೆಗೆ ಚುಚ್ಚಿ ಕೊಲೆ ಮಾಡಿರುತ್ತಾನೆ ಎಂಬ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ದಾರಿಹೋಕರು ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಗಂಗಾಧರ್ ರವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ತಿಳಿಸಿದ್ದಾರೆ.
ಇದನ್ನೂ ಓದಿ: ಶರೀಫ್ ಅಜ್ಜರ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆ
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.