A woman weighs 17 kg from the womb. ESIC hospital doctors who removed the tumor

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್ ಮತ್ತು ಎಂಹೆಚ್ ಆಸ್ಪತ್ರೆ ವೈದ್ಯರು 17 ಕೆ.ಜಿ. ಗೆಡ್ಡೆ ತೆಗೆದಿದ್ದಾರೆ. ರೋಗಿ ಇದೀಗ ಚೇತರಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.

ಇಎಸ್‌ಐಸಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ, ಅನಿತಾ. ಎ.ಎಂ ಮತ್ತು ಆಂಕೋಸರ್ಜನ್ ಡಾ. ಹೇಮಂತ್. ಎಸ್. ಗಾಲಿಗೆ ನೇತೃತ್ವದಲ್ಲಿ ಯಶಸ್ವಿಯಾಗಿ ಶಸ್ತ ಚಿಕಿತ್ಸೆ ನಡೆಸಲಾಗಿದೆ.
48 ವರ್ಷದ ಎರಡು ಮಕ್ಕಳ ತಾಯಿಯಾದ ಮಹಿಳೆ 8 ತಿಂಗಳಿಂದ ಹೊಟ್ಟೆಯಲ್ಲಿ ಕಾಣಿಸಿಕೊಂಡ ಉಬ್ಬರವನ್ನು ಗ್ಯಾಸ್ಟಿಕ್ ತೊಂದರೆ ಎಂದುಕೊಂಡು ಆಯುರ್ವೇದ ಔಷಧ ಸೇವಿಸುತ್ತಿದ್ದರು. ಕಳೆದ 4-5 ತಿಂಗಳಿಂದ ಹೊಟ್ಟೆ ಉಬ್ಬರ ಅಧಿಕವಾದರೂ ರೋಗಿಯು ಮಾತ್ರೆಯನ್ನೇ ಮುಂದುವರಿಸಿದ್ದರು.

ರೋಗಿಯ ಪ್ರಕಾರ ಕಳೆದ ಒಂದುವರೆ ವರ್ಷದಿಂದ ಸರಿಯಾಗಿ ಋತುಚಕ್ರ ಆಗುತ್ತಿರಲಿಲ್ಲ. ಹೊಟ್ಟೆ ಉಬ್ಬರದ ಒತ್ತಡ ಸಮಸ್ಯೆಗಳು, ಮಲಮೂತ್ರ, ಉಸಿರಾಟದ ತೊಂದರೆಗಳು ಕಾಣಿಸಿರುವುದಿಲ್ಲ. ಆದರೆ ಈಕೆ ಅಧಿಕ ರಕ್ತೊದೊತ್ತಡ ಹೊಂದಿದ್ದು, ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು.

ರೋಗಿಯನ್ನು ತಪಾಸಣೆ ಮಾಡುವಾಗ, ರೋಗಿಯ ಹೊಟ್ಟೆಯು (3 ಮಕ್ಕಳ ಗಾತ್ರದ) ಗರ್ಬಿಣಿ ಹೊಟ್ಟೆಯ ರೀತಿಯಲ್ಲಿದ್ದು, ನೀರು ತುಂಬಿದ ಗಡ್ಡೆಯ ಸ್ಥಿತಿಯಲ್ಲಿರುವುದು ಕಂಡು ಬಂತು. ಯೋನಿ ಹಾಗೂ ಗರ್ಭಕೋಶವನ್ನು ಪರೀಕ್ಷಿಸಿದಾಗ ಗರ್ಭಕೋಶದ ಕಂಠವು ಸಹಜರೀತಿಯಲ್ಲಿದ್ದು ಗಡ್ಡೆಯು ಗರ್ಭಕೋಶವನ್ನು ಎಳೆದಿರುವ ಲಕ್ಷಣಗಳು ಕಂಡು ಬಂತು. ಹೊಟ್ಟೆಯ ಅಲ್ಪಾಸೌಂಡ್ ಇಮೇಜಿಂಗ್ ಹಾಗೂ ಸಿಟಿ ಸ್ಕ್ಯಾನ್ ಪರೀಕ್ಷೆಗೆ ಒಳಪಡಿಸಿದಾಗ ಗರ್ಭಕೋಶದಲ್ಲಿ ಗಡ್ಡೆ ಇರುವುದು ಪತ್ತೆಯಾಯಿತು.

ಜೂನ್‌ 24 ರಂದು ರೋಗಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದಾಗ ದೊಡ್ಡಗಾತ್ರದ ನೀರು ತುಂಬಿದ ಗಡ್ಡೆ ಕಂಡು ಬಂತು. 17 ಕೆ.ಜಿ. ಗಡ್ಡೆಯು ಗರ್ಭಕೋಶದ ಮುಂದಿನ ಪದರದಲ್ಲಿತ್ತು. ರೋಗಿಯ ಎರಡು ಅಂಡಾಶಯಗಳು ಸಹಜ ಸ್ಥಿತಿಯಲ್ಲಿದ್ದವು. ಗಡ್ಡೆಯ ಸುತ್ತಮುತ್ತಲಿನ ಅಂಗಾಗಳು ಸಹಜ ಸ್ಥಿತಿಯಲ್ಲಿತ್ತು. ಗಡ್ಡೆಯನ್ನು ಹಿಸ್ಟೋಪಾಥಾಲಜಿಯ ಪರೀಕ್ಷೆಗೆ ಒಳಪಡಿಸಿದಾಗ ಗಡ್ಡೆಯು ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ಎಂದು ದೃಢೀಕರಿಸಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ರೋಗಿಯು ಸಹಜ ಸ್ಥಿತಿಯಲ್ಲಿದ್ದು ಚಿಕಿತ್ಸೆಗೆ ಸ್ವಂದಿಸುತ್ತಿದ್ಧಾರೆ. ಫೈಬ್ರಾಯ್ಡ್ ಗಡ್ಡೆಯು ಸಾಮಾನ್ಯ ವಾಗಿ 20-30% ಮಹಿಳೆಯರಲ್ಲಿ ಕಂಡು ಬರುತ್ತದೆ. 40 ರಿಂದ 80ರಷ್ಟು ಮಹಿಳೆಯರಲ್ಲಿ ಈ ಫೈಬ್ರಾಯ್ಡ್‌ ಗಡ್ಡೆಯ ಬೆಳವಣಿಗೆ ಸಾಮಾನ್ಯ. ಕೆಲವರು ಏನೂ ರೋಗ ಲಕ್ಷಣಗಳನ್ನು ಹೊಂದಿರುವುದೇ ಇಲ್ಲ. ಆದರೆ ಫೈಬ್ರಾಯ್ಡ್‌ ಗಡ್ಡೆ ದೊಡ್ಡದಾಗಿ ಬೆಳೆಯುತ್ತಿದ್ದರೆ ಕೆಲವೊಂದು ರೋಗ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ತೊಡಕು 4% ಮಹಿಳೆಯರಲ್ಲಿ ಕಂಡುಬರುತ್ತದೆ
ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೋನಿಯ, ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗ ಪಿಜಿ ವಿದ್ಯಾರ್ಥಿನಿ ಡಾ. ಅಹಲ್ಯಾ, ಅರವಳಿಕೆ ತಜ್ಞರಾದ ಡಾ. ಲಕ್ಷ್ಮಿ ಮತ್ತು ತಂಡ. ದಾದಿಯರಾದ ವಂದನಾ ಅವರು ಶಸ್ತ್ತ ಚಿಕಿತ್ಸೆಯಲ್ಲಿ ಭಾಗವಹಿಸಿದ್ದರು. ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಲತಾ ಮತ್ತು ಡಾ. ಅಶೋಕ್ ಕುಮಾರ್, ಡೀನ್: ಡಾ. ಸಂಧ್ಯಾ. ಆರ್ ಮತ್ತು ಚಿಕಿತ್ಸಾ ಅಧೀಕ್ಷಕರಾದ ಡಾ. ಪ್ರಸಾದ್ ಅವರ ಮೇಲ್ವಿಚಾರಣೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯಿತು.

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್