A young woman died after collapsing due to a heart attack.

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು.

ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಕೆ ಕುಸಿದು ಬಿದ್ದಿದ್ದಾಳೆ. ಪೋಷಕರು ತಕ್ಷಣ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಷ್ಟರಲ್ಲೇ ಕವನಾ ಮೃತಪಟ್ಟಿದ್ದಾಳೆ.

ಯುವಜನತೆಯಲ್ಲಿ, ಮಕ್ಕಳಲ್ಲಿ ಹೃದಯಾಘಾತ ಸಂಭವಿಸುವ ಪ್ರಕರಣ ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡಿದೆ.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ