ಚಿಕ್ಕಬಳ್ಳಾಪುರ; ಲಾರಿ ಮತ್ತು ಟಾಟಾ ಸುಮೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ತಾಲೂಕಿನ ಸೆಟ್ ದಿನ್ನೇ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada
ಮೃತರನ್ನು ಕೋಲಾರ ಮೂಲದ ಅತ್ತೆ ರಾಜೀಯಾ ಶಾಹಿನ್ (50 ವರ್ಷ), ಅಳಿಯ ಮೇಹಿಮುದುಲ್ (43 ವರ್ಷ) ಹಾಗೂ ಮ್ಲೋಲ್ಲಾನಾ ಶಾಹನ್ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಇನ್ನೂ ಕೋಲಾರದಿಂದ ಟಾಟಾ ಸುಮೋ ಕಾರಿನಲ್ಲಿ ಇಂದು ಪೆನುಗೊಂಡ ದರ್ಗಾಗೆ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಟಾಟಾ ಸುಮೋ ಹಾಗೂ ಲಾರಿ ನಡುವೆ ಈ ಅಪಘಾತ ನಡೆದಿದೆ ಎನ್ನಲಾಗಿದೆ.
ಕಾರು ಚಾಲಕನ ಅಜಾಗರುಕತೆಯ ಚಾಲನೆಯಿಂದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿಯಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಡಿಕ್ಕಿಯ ತೀವ್ರತೆಯಿಂದಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಒಬ್ಬನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಇನ್ನುಳಿದ ನಾಲ್ಕು ಜನರು ಕೂಡ ಗಾಯಗೊಂಡಿದ್ದಾರೆ ಮತ್ತು ಅವರನ್ನು ಕೂಡ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದ ಇಬ್ಬರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರ ಆರೋಗ್ಯದ ಮೇಲೆ ಹೆಚ್ಚಿನ ಕಳವಳ ಇಲ್ಲ ಎಂದು ತಿಳಿದು ಬಂದಿದೆ.
ಅಪಘಾತಕ್ಕೀಡಾದವರು ಬಿಹಾರ ಮೂಲದವರಾಗಿದ್ದು, ಕೋಲಾರದ ದರ್ಗಾದಲ್ಲಿ ಕೆಲಸ ಮಾಡುತ್ತಿದ್ದರು. ಇವರು ಕುಟುಂಬ ಸಮೇತರಾಗಿ ಕೋಲಾರದಿಂದ ಪೆನುಗೊಂಡ ಕಡೆಗೆ ಪ್ರಯಾಣಿಸುತ್ತಿದ್ದರು.
ಇದನ್ನೂ ಓದಿ: KS Eshwarappa: ರಾಜ್ಯ ಬಿಜೆಪಿ ಶುದ್ಧೀಕರಣ ಆಗಬೇಕು: ಕೆ.ಎಸ್.ಈಶ್ವರಪ್ಪ
ಇನ್ನೂ ದುರ್ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಸ್ಥಳೀಯ ಹಾಗೂ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆಯನ್ನು ಕೈಗೊಂಡಿದ್ದಾರೆ.