ಚಾಮರಾಜನಗರ: ವಾಂತಿಯ ಕಾರಣ ಕಾರು ನಿಲ್ಲಿಸಿ ಕೆಳಕಿಳಿದಿದ್ದ ವೇಳೆ ಟ್ಯಾಂಕ್ ಕಾರಿನ ಮೇಲೆ ಉರುಳಿ (Accident news) ಅಪ್ಪಚ್ಚಿಯಾದ ವೇಳೆ ಐದು ಮಂದಿ ಪಾರಾಗಿದ್ದ ಬೆನ್ನಲ್ಲೇ, ಮೂತ್ರ ವಿಸರ್ಜನೆ ಕಾರಣ ದ್ವಿಚಕ್ರ ವಾಹನ ನಿಲ್ಲಿಸಿ, ತೆರಳಿದ್ದ ವೇಳೆ ಓರ್ವನ ಜೀವ ಉಳಿದಿರುವ ಘಟನೆ ಗುಂಡ್ಲುಪೇಟೆಯ ಹಂಗಳ ರಸ್ತೆಯಲ್ಲಿ ಘಟನೆ ನಡೆದಿದೆ.
Join Our Telegram: https://t.me/dcgkannada
ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಓರ್ವ (Accident news) ಮೃತಪಟ್ಟಿದ್ದಾನೆ.
ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ 23 ವರ್ಷದ ಗಣೇಶ್ ಎಂಬಾತ ಮೃತಪಟ್ಟ ಬೈಕ್ ಸವಾರ. ಈತನ ಸ್ನೇಹಿತ ಅಪಘಾತದಿಂದ ಪಾರಾಗಿದ್ದಾನೆ. ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಹಿಂಬದಿ ಸವಾರ ಮೂತ್ರ ವಿಸರ್ಜನೆಗೆಂದು ರಸ್ತೆ ಪಕ್ಕಕ್ಕೆ ತೆರಳಿದ್ದ. ಇದೇ ವೇಳೆ ಎದುರಿನಿಂದ ಬಂದ ಕೇರಳ ಮೂಲದ ಕಾರು ನಿಂತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: Raiachuru: ಶಿಕ್ಷಕಿಯನ್ನು ಮಂಚಕ್ಕೆ ಕರೆದ ಹೆಡ್ ಮಾಸ್ಟರ್! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು
ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಬೈಕ್ನಲ್ಲಿ ಕುಳಿತಿದ್ದ ಸವಾರ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೂತ್ರ ವಿಸರ್ಜನೆಗೆ ತೆರಳಿದ್ದ ಈತನ ಸ್ನೇಹಿತ ಅವಘಡದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಗುಂಡ್ಲುಪೇಟೆ ಠಾಣೆ ಪೊಲೀಸರು ಕಾರು, ಬೈಕ್ ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದುರಂತ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ದುರ್ಘಟನೆಯು ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ಬೆಳಕಿಗೆ ಬಂದಿದೆ.
ಭುವನೇಶ್ವರಿ (52), ಭುವನೇಶ್ವರಿ ಸಹೋದರ ಮಾರುತಿ (28), ಭುವನೇಶ್ವರಿ ಮಗ ದರ್ಶನ್ (22) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಭುವನೇಶ್ವರಿ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಅವರ ಸಹೋದರ ಮಾರುತಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಎಂದಿನಂತೆ ಎಲ್ಲರೂ ಮನೆಗೆ ಬಂದಿದ್ದರು. ಆದ್ರೆ, ರಾತ್ರಿ ವೇಳೆ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ.
ಕುಟುಂಬಸ್ಥರು ಇವರಿಗೆ ಕರೆ ಮಾಡಿದಾಗ ಯಾರೂ ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ, ಬೆಳಗ್ಗೆ ಭುವನೇಶ್ವರಿ ಅವರ ಇನ್ನೊಬ್ಬ ಸಹೋದರ ಬಂದು ಬಾಗಿಲು ತೆರೆದು ನೋಡಿದಾಗ ಮೂವರೂ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.
ಸಾವಿಗೆ ಶರಣಾಗಿರುವುದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.