ಸಕಲೇಶಪುರ: ಎತ್ತಿನಹೊಳೆ ಯೋಜನೆಯ ಮೊದಲನೇ ಹಂತದ ಲೋಕಾರ್ಪಣೆ ಕಾರ್ಯಕ್ಕೆ ಇಂದು ಸಿಎಂ, ಡಿಸಿಎಂ ಚಾಲನೆ ನೀಡಿದ್ದು, ಈ ವೇಳೆ ಅವಘಡವೊಂದು ಸಂಭವಿಸಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರ ಗ್ರಾಮದಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಮೀಡಿಯಾ ವರದಿಗಾರರ ಕರೆದೊಯ್ಯಲು ವಾರ್ತಾ ಇಲಾಖೆ ಕಳುಹಿಸಿದ್ದ ವಾಹನ ಬ್ರೇಕ್ ಫೇಲ್ ಆಗಿದೆ.
ಕಾರ್ಯಕ್ರಮಕ್ಕೆ ವರದಿಗಾರರು ತೆರಳುತ್ತಿದ್ದ ವಾಹನ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬಾಳುಪೇಟೆ ಬಳಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಬ್ರೇಕ್ ಫೇಲ್ಯೂರ್ ಕಾರಣ ವಾಹನ ಲಾರಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.
ಸದ್ಯ, ಅಪಘಾತದಲ್ಲಿ ಏಳು ಮಂದಿ ವರದಿಗಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇದನ್ನೂ ಓದಿ: ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಯಡಿ ಅರ್ಜಿ ಸಲ್ಲಿಸಿ: ಕಾಶಪ್ಪನವರ ಕರೆ (ವಿಡಿಯೋ ನೋಡಿ)
ಈ ಘಟನೆಗೆ ಸರ್ಕಾರವೇ ಕಾರಣ. ರಾಜಕೀಯ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗುತ್ತಾರೆ. ಆದರೆ ಪ್ರತ್ಯೇಕ ವಾಹನ ವ್ಯವಸ್ಥೆ ಕಲ್ಪಿಸಲು ಹಿಂದೆ ಮುಂದೆ ನೋಡುತ್ತಾರೆ ಎಂದು ವರದಿಗಾರರು ಕಿಡಿಕಾರಿದ್ದಾರೆ.