ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಮುದ್ದೇಬಿಹಾಳ : ಪತ್ನಿ ತವರು ಮನೆಯಲ್ಲಿದ್ದಿರುವುದನ್ನು ಸಹಿಸದೇ ಆಕೆಗೆ ಮೇಲೆ ಹೊಲಿಗೆ ಮಷಿನ್ ಎತ್ತಿ ಹಾಕಿ ಕೊಲೆಗೈದಿದ್ದ ಆರೋಪಿಗೆ ಇಲ್ಲಿನ ಐದನೇ ಹೆಚ್ಚುವರಿ ಜಿಲ್ಲಾ ವ ಸತ್ರ ನ್ಯಾಯಾಧೀಶ ಸಚೀನ ಕೌಶಿಕ್ ಅವರು ಜೀವಾವಧಿ ಶಿಕ್ಷೆಯೊಂದಿಗೆ 1.50 ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣ ಏನು : ಮುದ್ದೇಬಿಹಾಳ ತಾಲ್ಲೂಕಿನ ಅಬ್ಬಿಹಾಳ ಗ್ರಾಮದ ಲಕ್ಷö್ಮಣ ಬಲವಂತಪ್ಪ ಕಾರಕೂರ ಎಂಬಾತ ಶಿವಮ್ಮ ಎಂಬುವಳನ್ನು ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ.ಮದುವೆಯ ಬಳಿಕ ಗಂಡ ಹೆಂಡಿರಲ್ಲಿ ವೈಮನಸ್ಸು ಮೂಡಿ ಶಿವಮ್ಮ ತವರು ಮನೆಯಲ್ಲಿದ್ದಳು.ಇದನ್ನು ಸಹಿಸದೇ ಆಕೆಯ ಮೇಲೆ ಸಿಟ್ಟಾಗಿದ್ದ ಪತಿ ಲಕ್ಷö್ಮಣ ಅ.13,2024 ರಂದು ಹೆಂಡತಿಯ ತವರು ಮನೆಗೆ ಬಂದು ಆಕೆಗೆ ಹೊಲಿಗೆ ಯಂತ್ರದಿAದ ತಲೆಗೆ ಎತ್ತಿ ಒಗೆದು ಕೊಲೆ ಮಾಡಿದ್ದ.ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಬಿಎನ್‌ಎಸ್ ಕಾಯ್ದೆ 103(1)ರಡಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಐದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಸಚಿನ ಕೌಶಿಕ್ ಅವರು ಸಾಕ್ಷಿ ಪುರಾವೆಗಳನ್ನು ಅವಲೋಕಿಸಿ ಆರೋಪಿಗೆ ಜೀವಾವಧಿ ಶಿಕ್ಷೆಯೊಂದಿಗೆ 1.50 ಲಕ್ಷ ರೂ.ದಂಡ ವಿಧಿಸಿ ಫೆ.16,2026 ರಂದು ತೀರ್ಪು ಪ್ರಕಟಿಸಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿ.ಜಿ.ಮಾಮನಿ ವಾದ ಮಂಡಿಸಿದ್ದರು.ಪ್ರಕರಣದ ತನಿಖೆಯನ್ನು ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಬ.ಬಾಗೇವಾಡಿ ಪಿಎಸ್‌ಐ ಗುರುಶಾಂತ ದಾಶ್ಯಾಳ,ಪಿಎಸ್‌ಐ ಸಂಜಯ ತಿಪರೆಡ್ಡಿ,ಪೊಲೀಸ್ ಸಿಬ್ಬಂದಿ ಎಸ್.ಎಸ್.ಕೌಲಗಿ, ಸಂಗಮೇಶ ಚಲವಾದಿ ಆರೋಪಿಗೆ ಶಿಕ್ಷೆಯಾಗಲು ಶ್ರಮಿಸಿದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ