ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ ಟ್ರಸ್ಟ್ನ ಅಡಿಯಲ್ಲಿ ನಡೆಯುತ್ತಿರುವ ಎಸ್.ಡಿ.ಕೆ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಾ ಎಚ್.ಲಮಾಣಿ ಕೇವಲ ಒಂದೇ ಒಂದು ಅಂಕದಿAದ ರಾಜ್ಯಕ್ಕೆ ಮೊದಲ ಸ್ಥಾನ ಬರುವ ಅವಕಾಶ ಕೈ ತಪ್ಪಿದ್ದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾಳೆ.

ಈ ಸಂಸ್ಥೆಯಲ್ಲಿ ಪ್ರತಿವರ್ಷ ರಾಜ್ಯಮಟ್ಟದಲ್ಲಿ ಒಂದಿಲ್ಲೊOದು ಸ್ಥಾನ ಗಳಿಸುತ್ತಿದ್ದು ಈ ಬಾರಿಯೂ ಮತ್ತೊಮ್ಮೆ ರಾಜ್ಯದ ಗಮನ ಸೆಳೆಯುವಂತಹ ಫಲಿತಾಂಶವನ್ನು ಶಾಲೆಯ ವಿದ್ಯಾರ್ಥಿಗಳು ನೀಡಿದ್ದಾರೆ.ಪ್ರಸ್ತುತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪೂಜಾ ಎಚ್. ಲಮಾಣಿ 624 (99.84%) ಅಂಕ ಪಡೆದು ರಾಜ್ಯಕ್ಕೆ 2 ನೇ ರ‍್ಯಾಂಕ್, ಬಸಮ್ಮ ಪಾಟೀಲ 622 (99.52%) ಅಂಕ ಪಡೆದು ರಾಜ್ಯಕ್ಕೆ 4 ನೇ ರ‍್ಯಾಂಕ್, LAXMI HUGAR 620 (99.20%) ಅಂಕ ಪಡೆದು ರಾಜ್ಯಕ್ಕೆ 6 ನೇ ರ‍್ಯಾಂಕ್, ಅಕ್ಷತಾ ಮೆದಿಕಿನಾಳ 619 (99.04%) ಅಂಕ ಪಡೆದು ರಾಜ್ಯಕ್ಕೆ 7 ನೇ ರ‍್ಯಾಂಕ್ ಪಡೆದು ಸಂಸ್ಥೆಯ ಸಾಧನೆಯನ್ನು ರಾಜ್ಯಮಟ್ಟಕ್ಕೆ ಕೊಂಡೊಯ್ದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಟಾಪರ್ ಪೂಜಾ ಲಮಾಣಿ, ನನಗೆ ಪೂರ್ಣ ಅಂಕ ಬರುವ ವಿಶ್ವಾಸ ಇತ್ತು.ಒಂದೇ ಒಂದು ಅಂಕದಿAದ ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದುಕೊಳ್ಳುವಲ್ಲಿ ಸ್ವಲ್ಪ ಹಿನ್ನಡೆ ಆಯಿತು ಎಂದು ಭಾವುಕಳಾಗಿ ಕಣ್ಣೀರು ಹಾಕಿದಳು.ಆದರೂ ಅದೊಂದು ಅಂಕ ಎಲ್ಲಿ ಮಿಸ್ ಆಗಿದೆ ಎಂಬುದನ್ನು ತಿಳಿದುಕೊಳ್ಳಲು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುತ್ತೇನೆ.ಶಾಲೆಯ ಅಧ್ಯಕ್ಷರಾದ ಬಿ.ಜಿ.ಮಠ,ಆಡಳಿತಾಧಿಕಾರಿ ಪ್ರಜ್ವಲ ಮಠ,ಕಾರ್ಯದರ್ಶಿಗಳಾದ ಸಿದ್ದಯ್ಯ ಹಿರೇಮಠ,ತಂದೆ ತಾಯಿ,ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿದ್ದೇನೆ ಎಂದು ತಿಳಿಸಿದರು.

ಮನೆಯಲ್ಲಿ ಹೂವು ಕಟ್ಟುತ್ತಾ ವಿದ್ಯಾಭ್ಯಾಸ ಮಾಡಿರುವ LAXMI HUGAR ಮಾತನಾಡಿ, ಬಡತನದಲ್ಲಿ ಒಳ್ಳೆಯ ರೀತಿಯಲ್ಲಿ ಓದಿ ಹೆಚ್ಚಿನ ಅಂಕ ಪಡೆದುಕೊಳ್ಳಲು ಸಾಧ್ಯವಾಗಿದೆ.ಇದಕ್ಕೆ ಸಂಸ್ಥೆಯವರ ಪರಿಶ್ರಮ ಅಗಾಧವಾದದು.ಮುಂದೆ ನೀಟ್ ಓದುತ್ತೇನೆ ಎಂದು ಹೇಳಿದರು.

ಸಂಸ್ಥೆಯ ಆಡಳಿತಾಧಿಕಾರಿ ಪ್ರಜ್ವಲ ಮಠ ಮಾತನಾಡಿ, ಕೆಲವೊಂದಿಷ್ಟು ಪಾಲಕರಲ್ಲಿ ಇವರ ಶಾಲೆಯಲ್ಲಿ ನೀಟ್ ಆಗುವುದಿಲ್ಲ.ಮೆಡಿಕಲ್ ಆಗುವುದಿಲ್ಲ ಎಂದು ಮಾತನಾಡಿಕೊಳ್ಳುತ್ತಿರುತ್ತಾರೆ.ನಮ್ಮಲ್ಲಿ ಕಳೆದ ವರ್ಷವೇ 30 ಜನ ವಿದ್ಯಾರ್ಥಿಗಳು ಮೆಡಿಕಲ್,ಬಿಎಎಂಎಸ್ ಹಾಗೂ ಅಗ್ರಿ,ಇಂಜಿನಿಯರಿOಗ್ ಸೀಟುಗಳು ದೊರೆತಿವೆ.ಯಾರದ್ದೋ ಮಾತುಗಳಿಗೆ ಕಿವಿಯಾಗದೇ ಪಾಲಕರು ಸತ್ಯಾಸತ್ಯತೆ ಪರಾಮರ್ಶೆ ಮಾಡಿ ಮಕ್ಕಳ ಭವಿಷ್ಯ ರೂಪಿಸಲು ಮುಂದಾಗಬೇಕು ಎಂದು ಹೇಳಿದ ಅವರು, ಜನರಲ್ 400, ಎಸ್.ಸಿ.ಎಸ್ಟಿ ಜನಾಂಗದವರು 350 ಸಿಇಟಿ ಅಂಕ ಪಡೆದುಕೊಂಡಲ್ಲಿ ಅವರಿಗೆ ಲಾಂಗ್‌ಟರ್ಮ್ ನೀಟ್ ಉಚಿತ ತರಬೇತಿ ನಮ್ಮಲ್ಲಿ ನೀಡಲಾಗುವುದು ಎಂದರು.

ಶಾಲೆಯ ಫಲಿತಾಂಶ : ಒಟ್ಟು 229 ಕ್ಕೆ 229 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಯ ಫಲಿತಾಂಶ ಶೇಕಡ 100 ಕ್ಕೆ 100 ರಷ್ಟು ಪಡೆದಿರುತ್ತದೆ. 125 ವಿದ್ಯಾರ್ಥಿಗಳು ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.100 ಕ್ಕೆ 100 ರಷ್ಟು ಕನ್ನಡದಲ್ಲಿ 16, ಇಂಗ್ಲೀಷ್ 02, ಹಿಂದಿ 86, ಗಣಿತ 09, ವಿಜ್ಞಾನ 07, ಸಮಾಜ ವಿಜ್ಞಾನ 71 ರಷ್ಟು ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ. ಜಿ. ಮಠ,ಕಾರ್ಯದರ್ಶಿ ಸಿದ್ದಯ್ಯ ಮಠ,ಮುಖ್ಯ ಗುರುಗಳಾದ ಹೀರೂನಾಯಕ,ಶಿವಯ್ಯ ಮಠ, ಕಾಲೇಜಿನ ಪ್ರಾಚಾರ್ಯ ಇರ್ಫಾನ್ ಬಾಗವಾನ್, ಎಚ್.ಎಮ್.ನದಾಫ ಅಭಿನಂದಿಸಿದ್ದಾರೆ.


ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಾ ಲಮಾಣಿ 624 ಅಂಕ ಪಡೆದುಕೊಂಡು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿರುವುದು ಹೆಮ್ಮೆ ತಂದಿದೆ.ವಿದ್ಯಾರ್ಥಿಗಳಿಗೆ ಈ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದಕ್ಕೆ ಈ ಫಲಿತಾಂಶ ಸಾಕ್ಷಿಯಾಗಿದೆ.ಶಿಕ್ಷಣ ಇಲಾಖೆಯ ಪರವಾಗಿ ವಿದ್ಯಾರ್ಥಿನಿಗೆ,ಸಂಸ್ಥೆಯವರನ್ನು ಅಭಿನಂದಿಸುವೆ. —-ಬಿ.ಎಸ್.ಸಾವಳಗಿ, ಬಿಇಒ

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ