Action to restore the big lake of Muddebihal- T. Bhubalan

ಮುದ್ದೇಬಿಹಾಳದ ದೊಡ್ಡ ಕೆರೆ ಪುನಃಶ್ಚೇತನಕ್ಕೆ ಕ್ರಮ- ಟಿ. ಭೂಬಾಲನ್

ಮುದ್ದೇಬಿಹಾಳದ ದೊಡ್ಡ ಕೆರೆ ಪುನಃಶ್ಚೇತನಕ್ಕೆ ಕ್ರಮ- ಟಿ. ಭೂಬಾಲನ್

ಮುದ್ದೇಬಿಹಾಳ : ಪಟ್ಟಣದಲ್ಲಿರುವ ದೊಡ್ಡ ಕೆರೆಯನ್ನು ಪುನಃಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.

ಪಟ್ಟಣದಲ್ಲಿರುವ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಬಳಿಕ ತಹಶೀಲ್ದಾರ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೆರೆ ಮುಂಚೆ ಗಲೀಜಾಗಿತ್ತು. ಸದ್ಯಕ್ಕೆ ಸ್ವಲ್ಪ ಶುಚಿಯಾಗಿದೆ. ಆದರೆ ಕೊಳಚೆ ನೀರು ನೇರವಾಗಿ ಕೆರೆಗೆ ಹರಿಸದಂತೆ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಎರಡು ತಿಂಗಳ ಅವಧಿಯಲ್ಲಿ ಕೆರೆಯನ್ನು ಪುನಃಶ್ಚೇತನಗೊಳಿಸಲಾಗುವುದು. ಕೆರೆಯ ಶುಚಿತ್ವಕ್ಕೆ ಆದ್ಯತೆ ನೀಡಿ ಸಾರ್ವಜನಿಕರ ಬಳಕೆಗೆ ಅನುಕೂಲ ಒದಗಿಸಲಾಗುವುದು ಎಂದರು.

ಕಂದಾಯ ದಾಖಲೆಗಳ ಗಣಕೀಕರಣದಲ್ಲಿ ಮುದ್ದೇಬಿಹಾಳ ತಾಲ್ಲೂಕಿಗೆ 10 ಸಾವಿರ ಗುರಿ ನೀಡಲಾಗಿದ್ದು 6-7 ಸಾವಿರ ಗುರಿ ತಲುಪುತ್ತಿದ್ದಾರೆ. ಇನ್ನಷ್ಟು ವೇಗವಾಗಿ ದಾಖಲೆಗಳ ಗಣಕೀಕರಣ ಮಾಡಲು ಕ್ರಮ ಜರುಗಿಸಬೇಕು ಎಂದು ತಿಳಿಸಿದ್ದೇವೆ ಎಂದರು.

ಕೆಲವೆಡೆ ಎ ಖಾತಾ ಬಿ ಖಾತಾ ನೀಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ. ಎಲ್ಲ ದಾಖಲೆಗಳು ಇದ್ದಾಗ್ಯೂ ಉತಾರೆ ಕೊಡುವುದಕ್ಕೆ ವಿಳಂಬ ಮಾಡಲಾಗುತ್ತದೆ ಎಂದು ಸುದ್ದಿಗಾರರರು ಪ್ರಶ್ನಿಸಿದಾಗ ಅಂತಹ ವಿಳಂಬ ಕ್ರಮಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಕಲು ನಡೆದರೂ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿಲ್ಲ. ಎಂದು ಪ್ರಶ್ನಿಸಿದಾಗ, ಉತ್ತರಿಸಿದ ಡಿಸಿ ಜಿಲ್ಲೆಯಲ್ಲಿ ಪರೀಕ್ಷಾ ನ್ಯೂನ್ಯತೆಗೆ ಸಂಬಂಧಿಸಿದಂತೆ ನಾಲ್ವರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಮುದ್ದೇಬಿಹಾಳದಲ್ಲೂ ಅಂತಹ ತಪ್ಪುಗಳು ನಡೆದಿದ್ದರೆ ದಾಖಲೆಗಳನ್ನು ನೀಡಿದರೆ ಕ್ರಮ ಜರುಗಿಸುತ್ತೇವೆ ಎಂದು ಡಿಸಿ ತಿಳಿಸಿದರು.

ಪುರಸಭೆ ವ್ಯಾಪ್ತಿಯಲ್ಲಿ ಮೆಗಾ ಮಾರುಕಟ್ಟೆ ನಿರ್ಮಾಣಕ್ಕೆ ಎರಡು ವಾರದಲ್ಲಿ ಚಾಲನೆ ನೀಡಲಾಗುತ್ತದೆ. ಇಂದಿರಾ ಕ್ಯಾಂಟೀನ್ ಕೆಲಸವೂ ಪೂರ್ಣಗೊಂಡಿದ್ದು ಸರ್ಕಾರದ ನಿರ್ದೇಶನದಂತೆ ಕ್ಯಾಂಟೀನ್ ಆರಂಭಿಸಲಾಗುವುದು ಎಂದು ಹೇಳಿದರು. ಎಸಿ ಗುರುನಾಥ ದಡ್ಡೆ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ತಹಶೀಲ್ದಾರ್ ಬಲರಾಮ ಕಟ್ಟೀಮನಿ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಪುರಸಭೆ ಸದಸ್ಯ ವೀರೇಶ ಹಡಲಗೇರಿ, ಶಿವು ಶಿವಪೂರ ಮೊದಲಾದವರು ಇದ್ದರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ