ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು..!

ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು..!

ಮುದ್ದೇಬಿಹಾಳ : ಅಂಗನವಾಡಿಯಲ್ಲಿಯೇ ಕಾರ್ಯಕರ್ತೆಯರಿಬ್ಬರು ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ಪಟ್ಟಣದ ಪಿಲೇಕೆಮ್ಮನಗರದ ಅಂಗನವಾಡಿ ಕೇಂದ್ರ ನಂ.1 ರಲ್ಲಿ ಶುಕ್ರವಾರ ನಡೆದಿದೆ.

ಕಾರ್ಯಕರ್ತೆಯರಾದ ಶಾಂತಾ ಮಾಮನಿ ಹಾಗೂ ರೇಣುಕಾ ರಾಮಕೋಟಿ ಎಂಬುವರು ಪರಸ್ಪರ ಬಡಿದಾಡಿಕೊಂಡಿದ್ದಾರೆ.ಮೊದಲು ಅದೇ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿದ್ದ ಶಾಂತಾ ಮಾಮನಿ ಅವರು ಸೇವೆ ಸಲ್ಲಿಸುತ್ತಿದ್ದರು. ಅವರನ್ನು ಸಿಡಿಪಿಒ ವರದಿ ಆಧರಿಸಿ ಸಂಗಮೇಶ್ವರ ನಗರದ 1ನೇ ಅಂಗನವಾಡಿ ಕೇಂದ್ರಕ್ಕೆ ಸ್ಥಳ ಬದಲಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ ಆದೇಶ ಹೊರಡಿಸಿದ್ದರು.ಅವರ ಸ್ಥಾನಕ್ಕೆ ರೇಣುಕಾ ಅವರನ್ನು ಪ್ರಭಾರಿಯಾಗಿ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ ನಿಯೋಜಿಸಲಾಗಿತ್ತು ಎನ್ನಲಾಗಿದೆ.

ರೇಣುಕಾ ಅವರನ್ನು ಕೇಂದ್ರದ ಮೇಲ್ವಿಚಾರಕರು ಗುರುವಾರ ಕರ್ತವ್ಯಕ್ಕೆ ಹಾಜರು ಮಾಡಿಸಿದ್ದರು. ಶುಕ್ರವಾರ ಬೆಳಗ್ಗೆ ಕೇಂದ್ರಕ್ಕೆ ಬಂದಿದ್ದ ಶಾಂತಾ ಮತ್ತು ರೇಣುಕಾ ನಡುವೆ ಮಕ್ಕಳ ಎದುರೇ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊAಡಿದ್ದು ಏಕಾಏಕಿ ಇಬ್ಬರೂ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡಿದ್ದಾರೆ.ಈ ಗದ್ದಲ ಕೇಳಿದ ಅಕ್ಕಪಕ್ಕದವರು ಕೇಂದ್ರಕ್ಕೆ ಬಂದು ಜಗಳ ಬಿಡಿಸಿ ಬುದ್ಧಿವಾದ ಹೇಳಿದ್ದಾರೆ.

ವಿಷಯ ತಿಳಿದು ಪೊಲೀಸರು ಆಸ್ಪತ್ರೆಗೆ ತೆರಳಿ ರೇಣುಕಾ ಅವರಿಂದ ಹೇಳಿಕೆ ಪಡೆದುಕೊಂಡಿದ್ದಾರೆ.ಇವರಿಬ್ಬರ ಮಧ್ಯೆ ಮೊದಲಿನಿಂದಲೂ ಹಗೆತನ ಇದ್ದು ಇಬ್ಬರ ಪರವಾಗಿ ತಾಲ್ಲೂಕಿನ ಎರಡು ಅಂಗನವಾಡಿ ಸಂಘಟನೆಗಳ ಮಧ್ಯೆಯೂ ಹೋರಾಟಗಳು ಪ್ರತಿ ಹೋರಾಟಗಳು ನಡೆದಿದ್ದವು.ಇದೀಗ ಈ ಹಂತಕ್ಕೆ ಕಾರ್ಯಕರ್ತೆಯರು ಹೊಡೆದಾಡುವ ಪರಿಸ್ಥಿತಿಗೆ ಬಂದು ನಿಂತಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ಈ ಕುರಿತು ಸಿಡಿಪಿಒ ಶಿವಮೂರ್ತಿ ಕುಂಬಾರ ಅವರನ್ನು ಸಂಪರ್ಕಿಸಿದಾಗ ಘಟನೆಯ ಕುರಿತು ಮಾಹಿತಿ ಬಂದಿದ್ದು ಶನಿವಾರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದಿದ್ದಾರೆ.ಪಿಲೇಕೆಮ್ಮ ನಗರದ ಒಂದನೇ ಅಂಗನವಾಡಿ ಕೇಂದ್ರದಲ್ಲಿ ಕಳೆದ 30 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆಯಲ್ಲಿರುವ ಶಾಂತಾ ಅವರನ್ನು ವರ್ಗಾವಣೆ ಮಾಡಿರುವುದೇ ಈ ಅವಾಂತರಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ