Actor Darshan: Darshan's wife Vijayalakshmi burst into tears

Actor Darshan: ಗಳಗಳನೆ ಕಣ್ಣೀರಿಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

Actor Darshan: ಗಳಗಳನೆ ಕಣ್ಣೀರಿಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ನಟ ದರ್ಶನ್ (Actor Darshan) ಅವರನ್ನು ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಶನಿವಾರ ಬಳ್ಳಾರಿ ಜೈಲಿನಲ್ಲಿ ದರ್ಶನ್ (Actor Darshan) ರನ್ನು ಸಂದರ್ಶಕರ ಕೊಠಡಿಯಲ್ಲಿ ಭೇಟಿ ಯಾದ ವಿಜಯಲಕ್ಷ್ಮಿ, ತನ್ನ ಪತಿ ಕಿಂಧೆ ಯಂತಿರುವ ಪುಟ್ಟ ಸೆಲ್‌ನಲ್ಲಿ ಬಂಧಿಯಾಗಿರುವುದನ್ನು ತಿಳಿದು ಕಣ್ಣೀರಿಟ್ಟಿದ್ದಾರೆ.

ದರ್ಶನ್‌ರನ್ನು ನೋಡುತ್ತಿದ್ದಂತೆ ವಿಜಯ ಲಕ್ಷ್ಮಿ ಅವರ ಕಣ್ಣಾಲಿ ತುಂಬಿ ಬಂದಿದ್ದು, ಆರೋಗ್ಯ ಹೇಗಿದೆ? ನಿಮ್ಮನ್ನು ಈ ಸ್ಥಿತಿ ಯಲ್ಲಿ ನೋಡಲು ನನ್ನಿಂದಾಗುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಪತ್ನಿಯನ್ನು ಸಂತೈಸಿ ಧೈರ್ಯ ತುಂಬಿದ ದರ್ಶನ್, ಇದೊಂದು ಕೆಟ್ಟಘಳಿಗೆ ದೇವರಿದ್ದಾನೆ. ಎಲ್ಲವೂ ಸರಿಹೋಗುತ್ತದೆ ಎಂದು ಹೇಳಿದ್ದಾರೆ.

ಇಬ್ಬರೂ ಸುಮಾರು ಅರ್ಧಗಂಟೆ ಕಾಲ ಮಾತನಾಡಿದರು. ಇದೇ ವೇಳೆ, ವಕೀಲರ ಜತೆಗೂ ನಟ ದರ್ಶನ್ ಕೆಲ ಹೊತ್ತು ಮಾತುಕತೆ ನಡೆಸಿದರು.

ಇದನ್ನೂ ಓದಿ: Muda case: ನಾಳೆ ಸಿಎಂ ಸಿದ್ದರಾಮಯ್ಯ‌ ಹಣೆಬರಹ ನಿರ್ಧಾರ

ವಿಜಯಲಕ್ಷ್ಮಿ ಅವರು ಎರಡು ಬ್ಯಾಗ್ ಜತೆ ದರ್ಶನ್‌ರನ್ನು ಭೇಟಿಯಾಗಲು ಆಗಮಿಸಿದ್ದರು. ಅವರು ನೀಡಿದ ಬಟ್ಟೆ, ಡೈಫ್ರಟ್ಸ್ ಹೊಂದಿರುವ ಬ್ಯಾಗ್‌ನ್ನು ದರ್ಶನ್‌ಗೆ ಕೊಡಲಾಯಿತು. ಬೆಡ್‌ಶೀಟ್ ಅನ್ನು ವಾಪಸ್ ಕಳುಹಿಸಲಾಯಿತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ