ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಕಾರ್ಯ ಮಾಡುತ್ತಿದೆ ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಎನ್.ಎಸ್.ಪೂಜಾರಿ ಕನ್ಸಟ್ರಕ್ಷನ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಬಡವರ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು ಎಂಬ ಗುರಿಯನ್ನಿಟ್ಟುಕೊಂಡು ನಾವು ಮುದ್ದೇಬಿಹಾಳ,ಕೋಳೂರು ಹಾಗೂ ಅಡವಿ ಹುಲಗಬಾಳದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ್ದೇವೆ. ನಮ್ಮ ಸಂಸ್ಥೆಯಲ್ಲಿ ಓದಿದ 10 ವಿದ್ಯಾರ್ಥಿಗಳು ಕೃಷಿ ವಿಜ್ಞಾನ ವಿಭಾಗಕ್ಕೆ ಆಯ್ಕೆಯಾಗಿದ್ದಾರೆ.8 ವಿದ್ಯಾರ್ಥಿಗಳು ಸೈನಿಕ ಶಾಲೆಗೆ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

2017ರಿಂದ ಬಿಪಿಎಲ್ ಕಾರ್ಡ ಹೊಂದಿದ ಮಕ್ಕಳಿಗೆ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಿAದ ಬಡವರು,ಕೂಲಿ ಕಾರ್ಮಿಕರ ಮಕ್ಕಳಿಗೆ ಗ್ರಾಮೀಣ ಮಟ್ಟದಲ್ಲಿ ಶಾಲೆಗಳನ್ನು ಆರಂಭಿಸಿ ಉಚಿತ ಶಿಕ್ಷಣ ಕೊಡುವ ಕಾರ್ಯ ಮಾಡುತ್ತಿದೆ.ತಂದೆ ತಾಯಿ ಇಲ್ಲದ ಮಕ್ಕಳಿದ್ದರೆ ಅವರಿಗೆ ಉಚಿತವಾಗಿ ಶಿಕ್ಷಣ ಕೊಡುವ ಕಾರ್ಯ ಮಾಡುತ್ತಿದ್ದೇವೆ. ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆಯಲ್ಲಿ ವಿಜೇತರಾಗುವ 15 ವಿದ್ಯಾರ್ಥಿಗಳನ್ನು ಎರಡು ವರ್ಷದವರೆಗೆ ಉಚಿತ ಊಟ,ವಸತಿ ಸಮೇತ ಶಿಕ್ಷಣ ನೀಡುವ ಕಾರ್ಯ ಮಾಡುತ್ತಾ ಬಂದಿದ್ದೇವೆ.ತಾಲ್ಲೂಕಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಡಾ.ಎಚ್.ಬಿ.ವಾಲೀಕಾರ ಅವರ ಮಾರ್ಗದರ್ಶನದಲ್ಲಿ ಸ್ಪರ್ಧಾತ್ಮಕ ಕೋರ್ಸ್ಗಳನ್ನು ಆರಂಭಿಸಲಾಗುತ್ತಿದೆ.ಪ್ರಸಕ್ತ ವರ್ಷದಿಂದಲೇ ಧಾರವಾಡದಲ್ಲಿ ಹೊಸದಾಗಿ ಕಟ್ಟಡ ನಿರ್ಮಿಸಿದ್ದು ನುರಿತ ಶಿಕ್ಷಣ ತಜ್ಞರನ್ನು ಕರೆಯಿಸಿ ಅವರಿಂದ ಆನಲೈನ್ ಕ್ಲಾಸ್‌ಗಳನ್ನು ಆರಂಭಿಸಲು ಸಿದ್ಧತೆ ಕೈಗೊಂಡಿದ್ದೇವೆ.10ನೇ ತರಗತಿ, ಪಿಯುಸಿ ತರಗತಿ ಓದುವ ವಿದ್ಯಾರ್ಥಿಗಳಿಗೆ ನೇರವಾಗಿ ಡಾ.ವಾಲೀಕಾರ ಅವರು ತರಗತಿಗಳನ್ನು ನಡೆಸಿಕೊಡಲಿದ್ದಾರೆ ಎಂದು ತಿಳಿಸಿದರು. ಪರೀಕ್ಷೆಯಲ್ಲಿ ಆಯ್ಕೆಯಾದವರಿಗಷ್ಟೇ ಪ್ರಶಸ್ತಿ ನೀಡುವುದಲ್ಲದೇ ಪರೀಕ್ಷೆಗೆ ಹಾಜರಾದವರಿಗೂ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆ. ಈ ಸಂದರ್ಭದಲ್ಲಿ ಸಂಸ್ಥೆಯ ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ, ಮಾರ್ಗದರ್ಶಕರಾದ ರವಿ ಜಗಲಿ, ಬಸವರಾಜ ಗೂಡಲಮನಿ ಇದ್ದರು.

ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಎಕ್ಸಾಂ: ಏ.5 ರಂದು ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯನ್ನು ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆದಿರುವ ರಾಜ್ಯ,ಸಿಬಿಎಸ್‌ಇ ಹಾಗೂ ಐಸಿಎಸ್‌ಇ ವಿದ್ಯಾರ್ಥಿಗಳು ಬರೆಯಬಹುದಾಗಿದ್ದು ಪ್ರಥಮ ಬಹುಮಾನ 10 ಸಾವಿರ ರೂ.ನಗದು ಸೇರಿ 1.60 ಲಕ್ಷ ರೂ.ಶಿಷ್ಯವೇತನ,ಎರಡನೇ ಬಹುಮಾನ 7 ಸಾವಿರ ನಗದು ಸೇರಿ 1.57 ಲಕ್ಷ ರೂ.ಶಿಷ್ಯವೇತನ ಹಾಗೂ ಮೂರನೇ ಬಹುಮಾನ ಐದು ಸಾವಿರ ರೂ.ನಗದು ಸೇರಿ 1.55 ಲಕ್ಷ ರೂ.ಶಿಷ್ಯವೇತನ ನೀಡಲಾಗುತ್ತದೆ.ಪ್ರತಿಭಾನ್ವಿತ 15 ವಿದ್ಯಾರ್ಥಿಗಳಿಗೆ ಎರಡು ವರ್ಷದ ಉಚಿತ ಶಿಕ್ಷಣ ನೀಡಲಾಗುವುದು.ಪರೀಕ್ಷೆ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜು ಮುದ್ದೇಬಿಹಾಳದಲ್ಲಿ ನಡೆಸಲಾಗುತ್ತದೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ತಿಳಿಸಿದರು.

ಪರೀಕ್ಷೆಗೆ ನೋಂದಣಿ: ವಿದ್ಯಾರ್ಥಿಯ ಹೆಸರು- ವರ್ಗ-ಶಾಲೆ ಹೆಸರು-ವಿಳಾಸ-ಮೊಬೈಲ್ ಸಂಖ್ಯೆ ಟೈಪ್ ಮಾಡಿ 8147576710ಗೆ ಎಸ್.ಎಂ.ಎಸ್ ಮಾಡಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ 9945994710,9901847211,7795121761 ಸಂಪರ್ಕಿಸಬಹುದಾಗಿದೆ.

Latest News

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಬರಗಾಲದ ಕುರಿತು ಕರೆದಿದ್ದ ನಾಲ್ಕು ದಿನಗಳ ವಿಶೇಷ ಅಧಿವೇಶನದಲ್ಲಿ ರಾಜ್ಯದ ರೈತರಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ:                                            ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ: ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಮುದ್ದೇಬಿಹಾಳ : ಸಕ್ಕರೆಗೆ ಕನಿಷ್ಠ ಮಾರಾಟ ಬೆಲೆಯನ್ನು 60 ರೂ.ಗಳಿಗೆ ಹೆಚ್ಚಿಸಬೇಕು.ಸಬ್ 2026-27ನೇ ಸಾಲಿನಲ್ಲಿ

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಮುದ್ದೇಬಿಹಾಳ : ಔಷಧಗಳ ಬಳಕೆ, ಪ್ರಮಾಣ ಹಾಗೂ ಅವುಗಳಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿಯ ಕೆಪಿಎಸ್ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಥ್ರೋಬಾಲ್ ಬಾಲಕರು,ಬಾಲಕಿಯರ ವಿಭಾಗದಲ್ಲಿ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರ ವೈಯಕ್ತಿಕ ಪ್ರತಿಭೆಯ ಜತೆಗೆ ಅವರು ಪ್ರತಿನಿಧಿಸುವ ಪ್ರದೇಶದ ಹೆಸರೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬೆಳೆಯುತ್ತದೆ ಎಂದು ಶಾಸಕ ಸಿ.ಎಸ್. ನಾಡಗೌಡ ಹೇಳಿದರು. ಪಟ್ಟಣದ ಓಸ್ವಾಲ್ ಹಾಲ್‌ನಲ್ಲಿ ರವಿವಾರ ನಡೆದ ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಏಕಲವ್ಯ ರೋಲರ್ ಸ್ಕೆಟಿಂಗ್ ಅಕಾಡೆಮಿಯ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಏಕಲವ್ಯ ರೋಲರ್

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ :                                      ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ : ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಮುದ್ದೇಬಿಹಾಳ : ಭೀಕರ ಬರಗಾಲದ ಸಮಯದಲ್ಲಿ ನೇಕಾರರಿಗೂ ಸಮರ್ಪಕ ಕಚ್ಚಾನೂಲು,ಬೀಮ್ ಪೂರೈಕೆ ಆಗುತ್ತಿಲ್ಲ.ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನಡೆಸುವ ನೇಕಾರರು ಗ್ರಾಮೀಣ ಭಾಗದಲ್ಲಿ ಸಂಕಷ್ಟದಲ್ಲಿದ್ದು ಅವರಿಗೆ ಸರ್ಕಾರ ಸೂಕ್ತ ನೆರವು ಒದಗಿಸಬೇಕು ಎಂದು ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಂಕರ ಈ.ಹೆಬ್ಬಾಳ ಹೇಳಿದರು. ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ 27ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅವರು ಮಾತನಾಡಿದರು.ನೇಕಾರರ ಬದುಕು