ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್ ಸೇರಿದಂತೆ ಹಲವು ಮುಖಂಡರು, ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಕಳೆದ 40 ವರ್ಷದ ರಾಜಕಾರಣದಲ್ಲಿ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಉತ್ತರ ಕರ್ನಾಟಕ ಭಾಗದ ಶಾಸಕರಲ್ಲಿ ಅತ್ಯಂತ ಹಿರಿಯ ಶಾಸಕರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ದಾಂತಗಳಿಗೆ ಬದ್ದರಾಗಿ ಪಕ್ಷ ಸಂಘಟನೆಯಲ್ಲಿ ಮೊದಲಿಗರಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಕ್ಯಾಬಿನೇಟ್ ದರ್ಜೆಯ ಸಚಿವ ಸ್ಥಾನಮಾನ ನೀಡಬೇಕೆಂದು ಖರ್ಗೆ ಅವರಿಗೆ ಮನವಿ ಮಾಡಿದರು.

ಖರ್ಗೆ ಕಾಲಿಗೆರಗಿ ಬೇಡಿಕೊಂಡ ವಿಜಯಕರ; ನಿಯೋಗದೊಂದಿಗೆ ತೆರಳಿದ ಏಪಿಎಂಸಿ ಮಾಜಿ ಉಪಾಧ್ಯಕ್ಷ ವಾಯ್.ಎಚ್.ವಿಜಯಕರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಾಲಿಗೆರಗಿ ಈ ಬಾರಿ ಶಾಸಕ ನಾಡಗೌಡರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಿ ಲಕ್ಷಾಂತರ ಅಭಿಮಾನಿ ಕಾರ್ಯಕರ್ತರ ಆಸೆಯನ್ನು ಈಡೇರಿಸಬೇಕೆಂದು ವಿನಂತಿಸಿಕೊAಡರು.ಈ ಸನ್ನಿವೇಶಕ್ಕೆ ಕರಗಿದ ಖರ್ಗೆ ಅವರು ಮೌನಮುರಿದು ಕಾರ್ಯಕರ್ತರೊಂದಿಗೆ ಎರಡು ಮಾತನಾಡಿದರು.

ಗಮನ ಸೆಳೆದ ಗಾಂಧಿ ಟೋಪಿ:
ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಬೆಂಗಳೂರಿಗೆ ತೆರಳಿದ್ದ ನಿಯೋಗದ ನೂರಾರು ಕಾರ್ಯಕರ್ತರು ಗಾಂಧಿ ಟೋಪಿಗಳು ಗಮನ ಸೆಳೆದವು.ವಿಶೇಷವಾಗಿ ಮುದ್ದೇಬಿಹಾಳ ಕ್ಷೇತ್ರದ ಕಾರ್ಯಕರ್ತರ ಶಿಸ್ತಿಗೆ ಸಿಎಂ ಕಚೇರಿಯಿಂದಲೂ ವಿಶೇಷ ಗೌರವ ಸಿಕ್ಕಿತು ಎಂದು ಮೂಲಗಳು ತಿಳಿಸಿವೆ.

Latest News

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ:              ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ: ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ವಿಜಯಪುರ : ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅ.13ರಿಂದ ನಿಡಗುಂದಿ-ಆಲಮಟ್ಟಿ ರಾಷ್ಟ್ರೀಯ

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಸಜ್ಜನ ಗಾಣಿಗ ಸಮಾಜದಿಂದ ಸನ್ಮಾನ :                                     ಗಾಣಿಗ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ-ದೇಸಾಯಿ

ಸಜ್ಜನ ಗಾಣಿಗ ಸಮಾಜದಿಂದ ಸನ್ಮಾನ : ಗಾಣಿಗ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ-ದೇಸಾಯಿ

ಮುದ್ದೇಬಿಹಾಳ : ಐದು ಸಾವಿರ ರೂ.ಕೊಡುವ ಮುನ್ನ ಪತ್ರಕರ್ತರನ್ನು ಕರೆದು ಎಲ್ಲರಿಗೂ ತೋರಿಸುವಂತೆ ಪ್ರಚಾರಗಿಟ್ಟಿಸಿಕೊಳ್ಳುವ ಜನರ ಮಧ್ಯೆ ಯಾವುದೇ ಸ್ವಾರ್ಥವಿಲ್ಲದೇ ಎಕರೆಗಟ್ಟಲೆ ಜಮೀನು ದಾನ ಮಾಡಿದರೂ ಅದನ್ನು ಹೇಳಿಕೊಳ್ಳುವ ಕಾರ್ಯ ಸಜ್ಜನ ಗಾಣಿಗ ಸಮಾಜದವರು ಮಾಡಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದ ಏಪಿಎಂಸಿ ಸಭಾಂಗಣದಲ್ಲಿ ತಾಲ್ಲೂಕು ವೀರಶೈವ ಸಜ್ಜನ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ