ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ ಮಾಡಲಾಗಿದೆ.ಅಧ್ಯಕ್ಷ,ಕಾರ್ಯದರ್ಶಿ ಹಾಗೂ ಖಜಾಂಚಿ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದರೆ ಉಪಾಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಸಲಾಯಿತು.

ನೂತನ ಅಧ್ಯಕ್ಷರಾಗಿ ಅಲ್ಲಾಭಕ್ಷö್ಯ ದೇಸಾಯಿ, ಕಾರ್ಯದರ್ಶಿಯಾಗಿ ನೂರೇಹುಸೇನ್ ನದಾಫ,ಖಜಾಂಚಿಯಾಗಿ ಲಾಲಸಾಬ ಮೋಮಿನ ಅವಿರೋಧವಾಗಿ ಆಯ್ಕೆಯಾದರೆ ಉಪಾಧ್ಯಕ್ಷ ಸ್ಥಾನಕ್ಕೆ ಸುಲೇಮಾನ ಮಮದಾಪೂರ ಹಾಗೂ ಇರ್ಫಾನ್ ಕೂಡಗಿ ಮಧ್ಯೆ ಪೈಪೋಟಿ ನಡೆಯಿತು.ಇದರಲ್ಲಿ ಕೈ ಎತ್ತುವ ಮೂಲಕ ಮತದಾನ ಮಾಡಲಾಯಿತು.16 ಮತಗಳ ಬಹುಮತದೊಂದಿಗೆ ಇರ್ಫಾನ್ ಕೂಡಗಿ ಉಪಾಧ್ಯಕ್ಷರಾಗಿ ಚುನಾಯಿತರಾದರೆ ಅವರ ಪ್ರತಿಸ್ಪರ್ಧಿ ಸುಲೇಮಾನಗೆ 9 ಮತಗಳು ಲಭಿಸಿ ಚುನಾವಣೆಯಲ್ಲಿ ಪರಾಭವಗೊಂಡರು.

ಆಯ್ಕೆ ಪ್ರಕ್ರಿಯೆ ನಡೆಸಿದ ಅಂಜುಮನ್ ಆಡಳಿತಾಧಿಕಾರಿ ಹಾಗೂ ವಕ್ಭ್ ಬೋರ್ಡ್ ಜಿಲ್ಲಾ ಅಧಿಕಾರಿ ತಬಸ್ಸುಮ್ ಮಹೇಶವಾಡಗಿ(ಮುಲ್ಲಾ), ಕಮೀಟಿಯ ನಿಯಮಾವಳಿಯಂತೆ ಚುನಾವಣೆ ನಡೆಸಲಾಗಿದೆ.ನೋಟಿಸ್ ಕೊಡುವ ವಿಚಾರದಲ್ಲಿ ಉಂಟಾಗಿದ್ದ ಗೊಂದಲದ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ವ ಸದಸ್ಯರು ಪದಾಧಿಕಾರಿಗಳ ಆಯ್ಕೆಗೆ ನಮ್ಮ ಸಹಮತ ಇದೆ ಎಂದು ತಿಳಿಸಿದ್ದರಿಂದ ತ್ವರಿತವಾಗಿ ಪದಾಧಿಕಾರಿಗಳ ಆಯ್ಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ಕೊಡುವುದರಲ್ಲಿ ವಿಳಂಬಗೊoಡಿರುವ ಕುರಿತು ಸುದ್ದಿಗಾರರು ಪ್ರಶ್ನೆ ಮಾಡಿದಾಗ ಉತ್ತರಿಸಿದ ವಕ್ಭ್ ಅಧಿಕಾರಿ ಮುಲ್ಲಾ, ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿ ಚುನಾಯಿತ ಸದಸ್ಯರಿಗೆ ಪ್ರಮಾಣ ಪತ್ರ ವಿತರಿಸಲಾಗಿದೆ.ವಿಳಂಬವಾಗಿರುವುದು ನಿಜ.ಸೋಮವಾರದಂದೇ ಎಲ್ಲ ಸದಸ್ಯರಿಗೂ ಪ್ರಮಾಣ ಪತ್ರ ನೀಡಲಾಗಿದೆ ಎಂದು ಉತ್ತರಿಸಿದರು.
ಚುನಾವಣಾ ಪ್ರಕ್ರಿಯೆಯಲ್ಲಿ ಚುನಾಯಿತರಾದ 25 ಸದಸ್ಯರು ಆಯ್ಕೆ ಪ್ರಕ್ರಿಯೆಯಲ್ಲಿ ಹಾಜರಾಗಿದ್ದರು. ಚುನಾವಣೆ ಪ್ರಕ್ರಿಯೆಯಲ್ಲಿ ಹಾಜರಿದ್ದ ಸದಸ್ಯರು: ಅಬ್ದುಲಮಜೀದ ಮಕಾನದಾರ,ಡೋಂಗ್ರಿಸಾಬ ಢವಳಗಿ,ಅಲ್ಲಾಭಕ್ಷö್ಯ ದೇಸಾಯಿ,ಇರ್ಫಾನಅಲಿ ಕೂಡಗಿ,ರಂಜಾನ್ ನದಾಫ,ನೂರೇಹುಸೇನ್ ನದಾಫ, ಅಬ್ದುಲಗಫೂರ ಮಕಾನದಾರ,ಲಾಲಸಾಬ ಮೋಮಿನ,ಅಬ್ದುಲಅಜೀಜ ನಾಯ್ಕೋಡಿ,ಇಸಾಕಶಾ ಮಕಾನದಾರ,ಮಹ್ಮದರಫೀಕ ನಾಗರಾಳ,ಹುಸೇನಬಾದಶಾ ಸಾಲಿಮನಿ, ಯಾಸೀನ ಸೋಠೆ,ಅತಾವುಲ್ಲಾಷಾ ಮಕಾನದಾರ,ಇಸ್ಮಾಯಿಲ್ ಗೊಳಸಂಗಿ,ಅಸ್ಲo ನಾಗೂರ,ಶಬ್ಬೀರ ಕಲ್ಮನಿ,ಇಸ್ಮಾಯಿಲ ಗೋಲಂದಾಜ,ಮಹೆಬೂಬ ಮುಲ್ಲಾ,ಉಮರಫಾರೂಕ ಚೌಧರಿ,ಸುಲೇಮಾನ ನದಾಫ,ಗುಲಾಮಮೊಹ್ಮದ ದಫೇದಾರ,ಅಬ್ದುಲಜಬ್ಬಾರ ಗೋಲಂದಾಜ,ಅಮೀರಸೊಹೆಲ್ ದಖನಿ ಹಾಜರಿದ್ದರು.

ದೊರೆಯದ ಸಹಮತ ಅರ್ಧದಲ್ಲೇ ಎದ್ದು ಹೋದ ಸದಸ್ಯರು:ಉಪಾಧ್ಯಕ್ಷ ಸ್ಥಾನಕ್ಕೆ ಹಾಗೂ ಹಿರಿಯ ಸದಸ್ಯರಿಗೆ ಆದ್ಯತೆ ದೊರೆಯದ ಕಾರಣ ಕೆಲವು ಸದಸ್ಯರು ಚುನಾವಣಾ ಪ್ರಕ್ರಿಯೆಯ ಮಧ್ಯದಲ್ಲಿಯೇ ಎದ್ದು ಹೋದ ಘಟನೆಯೂ ನಡೆಯಿತು.

Latest News

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ಮುದ್ದೇಬಿಹಾಳ : ರೈತರಿಗೆ ಸಾಲ ನೀಡುವುದು ಅವರನ್ನು ಸಾಲಗಾರರನ್ನಾಗಿ ಮಾಡುವ ಉದ್ದೇಶದಿಂದಲ್ಲ, ಬದಲಾಗಿ ಕೃಷಿ ಚಟುವಟಿಕೆಗಳನ್ನು ಬಲಪಡಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಎಂದು ವಿಜಯಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದರು. ತಾಲ್ಲೂಕಿನ ಹಿರೇಮುರಾಳದ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡವನ್ನು ಅಂಕಲಿಮಠದ ವೀರಭದ್ರ ಸ್ವಾಮೀಜಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ರೈತರು ತಮ್ಮ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು.

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ