Allegation of percentage for payment of wages: Notice issued to three employees asking the reason

ಕೂಲಿ ಪಾವತಿಗೆ ಪರ್ಸೆಂಟೇಜ್ ಆರೋಪ : ಮೂವರು ನೌಕರರಿಗೆ ಕಾರಣ ಕೇಳಿ ನೋಟಿಸ್ ಜಾರಿ

ಕೂಲಿ ಪಾವತಿಗೆ ಪರ್ಸೆಂಟೇಜ್ ಆರೋಪ : ಮೂವರು ನೌಕರರಿಗೆ ಕಾರಣ ಕೇಳಿ ನೋಟಿಸ್ ಜಾರಿ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರರಿಗೆ ವೇತನ ಪಾವತಿಸಲು ಪರ್ಸೆಂಟೇಜ್‌ಗೆ ಬೇಡಿಕೆ ಇರಿಸಿರುವ ಆರೋಪದ ಮೇರೆಗೆ ಮೂವರು ನೌಕರರಿಗೆ ತಾಪಂ ಇಓ ಕಾರಣ ಕೇಳುವ ನೋಟಿಸ್ ಜಾರಿ ಮಾಡಿದ್ದಾರೆ.

ಏತನ್ಮಧ್ಯೆ ಶುಕ್ರವಾರವೂ ತಾಪಂ ಕಚೇರಿ ಮುಂದೆ ಧರಣಿ ನಡೆಸಿದ ಗ್ರಾಪಂ ಸದಸ್ಯ ಶಿವಾನಂದ ಲಮಾಣಿ ಅವರನ್ನು ಭೇಟಿಯಾದ ತಾಪಂ ಇಒ ನಿಂಗಪ್ಪ ಮಸಳಿ, ಸದರಿ ಕೂಲಿಕಾರರ ಹಣವನ್ನು ಮುಂದಿನ ಹಂತದ ಕೂಲಿ ಪಾವತಿ ಸಮಯದಲ್ಲಿ ಮಾಡುವಂತೆ ಎನ್.ಆರ್.ಇ.ಜಿ ತಾಂತ್ರಿಕ ಸಹಾಯಕರಿಗೆ ಸೂಚಿಸಲಾಗಿದೆ. ಗ್ರಾಪಂ ಸದಸ್ಯರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಲು ತಿಳಿಸಲಾಗಿದೆ ಎಂದು ಹೇಳಿದರು.

ಧರಣಿ ನಿರತ ಗ್ರಾಪಂ ಸದಸ್ಯ ಶಿವಾನಂದ ಲಮಾಣಿ ಮಾತನಾಡಿ, ತಾಪಂ ಇಒ ಅವರು ಕೊಟ್ಟ ಭರವಸೆ ಮೇರೆಗೆ ಧರಣಿ ಹಿಂದಕ್ಕೆ ಪಡೆದುಕೊಳ್ಳುತ್ತಿದ್ದು ಬಾಕಿ ಕೂಲಿ ಹಣ ಪಾವತಿಸದೇ ಇದ್ದರೆ ಮತ್ತೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದರು. ಗ್ರಾಪಂ ಸದಸ್ಯನ ಹೋರಾಟಕ್ಕೆ ಗ್ರಾಪಂ ಅಧ್ಯಕ್ಷೆ ನೈನಾ ಚವ್ಹಾಣ ಅವರು ಬೆಂಬಲಿಸಿದರು. ಎನ್.ಆರ್.ಇ.ಜಿ ತಾಂತ್ರಿಕ ಸಹಾಯಕ ಶಂಕರಗೌಡ ಯಾಳವಾರ, ಟಿಐಇ ಉಮೇಶ ಕನ್ನಿ ಹಾಗೂ ಹುಲ್ಲೂರು ಗ್ರಾಪಂ ಪಿಡಿಒ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಸೇವೆಯಲ್ಲಿರುವ ತಾಂತ್ರಿಕ ಸಹಾಯಕರು, ಎನ್.ಆರ್.ಇ.ಜಿ ಸಿಬ್ಬಂದಿ ಜನಪ್ರತಿನಿಧಿಗಳು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವ್ಯವಹರಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು.

ಎನ್.ಆರ್.ಇ.ಜಿ ಕೂಲಿಕಾರರ ವೇತನ ಪಾವತಿಗೆ ಪರ್ಸೇಂಟೇಜ್‌ಗೆ ಬೇಡಿಕೆ ಇಟ್ಟ ವಿಷಯಕ್ಕೆ ಸಂಬಂಧಿಸಿದಂತೆ ಎನ್.ಆರ್.ಇ.ಜಿ ತಾಂತ್ರಿಕ ಸಹಾಯಕ ಶಂಕರಗೌಡ ಯಾಳವಾರ, ಟಿಐಇ ಉಮೇಶ ಕನ್ನಿ ಅವರನ್ನು ತಾಪಂ ಇಒ ನಿಂಗಪ್ಪ ಮಸಳಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಲಿಕಾರರ ಹಣ ಪಾವತಿ ಮಾಡಲು ಕೇಳಿದರೆ ಹೀಗೆ ಬೇಜವಾಬ್ದಾರಿಯಿಂದ ವರ್ತಿಸಿದ್ದು ಮರುಕಳಿಸಿದರೆ ಮೇಲಧಿಕಾರಿಗಳಿಗೆ ಕಠಿಣ ಕ್ರಮ ಕೈಗೊಳ್ಳಲು ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ