ಮುದ್ದೇಬಿಹಾಳ : ದೇಶದಲ್ಲಿ ಬಡವ,ಬಲ್ಲಿದನಿಗೂ ಒಂದೇ ಮತಕ್ಕೆ ಅವಕಾಶ ಕಲ್ಪಿಸಿ ಮಹಿಳೆಯರಿಗೆ ಸಮಾನತೆಯ ಹಕ್ಕನ್ನು ನೀಡಿದ ಧೀಮಂತ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.
ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಹಶೀಲ್ದಾರ್ ಕೀರ್ತಿ ಚಾಲಕ್, ಸಿಪಿಐ ಮೊಹ್ಮದಫಸಿವುದ್ದೀನ,ಬಿಇಒ ಬಿ.ಎಸ್.ಸಾವಳಗಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಸಂತಿ ಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು,ದಲಿತಪರ,ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಪಾಲ್ಗೊಂಡಿದ್ದರು.
ತಹಶೀಲ್ದಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಸಂಜಯ ತಿಪರೆಡ್ಡಿ,ಬಿಜೆಪಿ ಕಾರ್ಯಾಲಯದಲ್ಲಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ನೇತೃತ್ವದಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಿಸಲಾಯಿತು.



