CIA America's CIA ploy to topple Modi government

ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ..?! ಬಾಪಿಸ್ಟ್‌ ಚರ್ಚ್‌, ನಾಯ್ಡು, ರೆಡ್ಡಿ, ಓವೈಸಿಯೇ ದಾಳ..!

ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ..?! ಬಾಪಿಸ್ಟ್‌ ಚರ್ಚ್‌, ನಾಯ್ಡು, ರೆಡ್ಡಿ, ಓವೈಸಿಯೇ ದಾಳ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ನಾಯಕತ್ವದಲ್ಲಿ ಭಾರತ ಮುನ್ನುಗುತ್ತಿದೆ. ಕಳೆದ ಹಲವು ವರ್ಷಗಳಿಂದ ಪ್ರತಿ ಒಂದು ವಿಚಾರದಲ್ಲೂ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಮೂಲಕ ದಿಟ್ಟ ನೀತಿಯನ್ನು ಅನುಸುತ್ತಿದೆ. ಇಂತಹ ಪರಿಸ್ಥಿತಿ ಇರುವಾಗ ಇದೀಗ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ಉರುಳಿಸಲು ಅಮೆರಿಕದಲ್ಲಿ (CIA) ಕುತಂತ್ರ ನಡೆಯುತ್ತಿರುವ ಬಗ್ಗೆ ವರದಿಯೊಂದು ಆತಂಕಕ್ಕೆ ಕಾರಣವಾಗಿದೆ.

ಮತ್ತಷ್ಟು‌ ಸುದ್ದಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ಅಮೆರಿಕದ ಗುಪ್ತಚರ ಇಲಾಖೆ ಸಿಐಎ(CIA) ಭಾರತದ ಪ್ರತಿಪಕ್ಷ ಹಾಗೂ ಎನ್‌ಡಿಎ(NDA) ಮಿತ್ರಪಕ್ಷ ನಾಯಕರನ್ನು ಬಳಸಿಕೊಂಡು ಸರ್ಕಾರ ಕೆಡುವು ಪ್ರಯತ್ನ ನಡೆಸುತ್ತಿರುವ ಎಂಬ ವಿಚಾರ ಸ್ಫೋಟಗೊಂಡಿದೆ.

ಹೌದು, ರಷ್ಯಾದ ಸುದ್ದಿ ಮಾಧ್ಯಮ ಸ್ಪಟ್ನಿಕ್‌ ಈ ಶಾಕಿಂಗ್‌ ವರದಿಯನ್ನು ಬಿತ್ತರಿಸಿದೆ. ಈ ಬಾರಿ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತ್ತು ಬಿಹಾರದ ಸಿಎಂ ನಿತೀಶ್‌ ಕುಮಾರ್‌ ಅವರು ಪ್ರಮುಖ ಪಾತ್ರವಹಿಸಿದ್ದರು. ಇವರಿಬ್ಬರ ಸಹಾಯವಿಲ್ಲದೇ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಬಿಜೆಪಿಗೆ ಸುಲಭದ ಮಾತಾಗಿರಲಿಲ್ಲ. ಇದೀಗ ಇದೇ ವಿಚಾರವನ್ನು ಬಂಡವಾಳ ಮಾಡಿಕೊಂಡಿರುವ CIA ಆಂಧ್ರದ ಬಾಪಿಸ್ಟ್‌ ಚರ್ಚ್‌ ಮತ್ತು ಚಂದ್ರಬಾಬು ನಾಯ್ಡುವನ್ನು ಅವರನ್ನು ಬಳಿಸಿಕೊಂಡು ಮೋದಿ ಸರ್ಕಾರವನ್ನು ಕೆಡವಲು ಸಂಚು ರೂಪಿಸಿದೆ. ಆ ಮೂಲಕ ಭಾರತದಲ್ಲಿ ಅತಂತ್ರ ಸೃಷ್ಟಿಸಲು ಅಮೆರಿಕ ಯತ್ನಿಸುತ್ತಿದೆ ಎಂದು ಸ್ಪಟ್ನಿಕ್‌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ಉದ್ಯೋಗ ಸಿಗದ ಹತಾಶೆ; ಯುವಕ ಆತ್ಮಹತ್ಯೆ..! “I am a big failure” ಎಂದು ಡೆತ್ ನೋಟ್

ಇದಕ್ಕೆ ಪೂರಕ ಎಂಬಂತೆ ಯುಎಸ್ ಕೌನ್ಸುಲ್ ಜನರಲ್ ಜೆನ್ನಿಫರ್ ಲಾರ್ಸನ್ ಅವರು ಹೈದರಾಬಾದ್‌ನಲ್ಲಿ ಚಂದ್ರಬಾಬು ನಾಯ್ಡು, A.I.M.I.M ನಾಯಕ ಅಸಾದುದ್ದೀನ್‌ ಓವೈಸಿ, ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಭಾರತದ ಮೇಲೆ ಏನು ಪರಿಣಾಮ?
ಉಸಾನಾಸ್ ಫೌಂಡೇಶನ್‌ನ ಸಂಸ್ಥಾಪಕ ಮತ್ತು ನಿರ್ದೇಶಕ ಡಾ. ಅಭಿನವ್ ಪಾಂಡ್ಯ ಅವರು ಭಾರತದಲ್ಲಿ ಅಶಾಂತಿಯನ್ನು ಪ್ರಚೋದಿಸುವ ಗುಂಪುಗಳಿಗೆ ಯುಎಸ್ ಬೆಂಬಲ ನಿಗ್ರಹಿಸುವ ಬಗ್ಗೆ “ನಿಜವಾದ ಆತಂಕಗಳನ್ನು” ವ್ಯಕ್ತಪಡಿಸಿದ್ದಾರೆ.

ಮೋದಿಯವರ ವಿದೇಶಾಂಗ ನೀತಿ ಧೋರಣೆಯನ್ನು ಹಾಳುಮಾಡಲು ಲೋಕಸಭೆ ಚುನಾವಣೆಯಲ್ಲಿ ಯುಎಸ್ ಮಧ್ಯಪ್ರವೇಶಿಸಿರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು