ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

ಕೊಪ್ಪಳ: ಅಂಗನವಾಡಿ ಯೊಂದರಲ್ಲಿ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ (Egg stolen) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಘಟನೆಗೆ ಕಾರಣರಾದ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ.

Join Our Telegram: https://t.me/dcgkannada

ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಅಮಾನತು ಮಾಡುವಂತೆ ಸೂಚಿಸಿದ್ದಾರೆ. ಅಲ್ಲದೆ ಇಡೀ ಪ್ರಕರಣದ ವರದಿ ನೀಡುವಂತೆ ಆದೇಶಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ದೇವರು ಕೊಟ್ಟರೂ ಪೂಜಾರಿ ಕೊಡಲ್ಲ ಎಂಬ ಮಾತಿದೆ. ಹಾಗೇ ಸರ್ಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲೆಂದು ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಕೊಡುತ್ತಿದೆ. ನಾನು ಕೂಡ ಅಂಗನವಾಡಿಗಳಲ್ಲಿ ಶಿಸ್ತನ್ನು ತರಲು, ಬದಲಾವಣೆ ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದೇವೆ.

ಇದನ್ನೂ ಓದಿ: Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

ಇದರ ನಡುವೆ, ಗುಂಡೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯೇ ಮಕ್ಕಳ ಪ್ಲೇಟ್​ನಲ್ಲಿದ್ದ ಮೊಟ್ಟೆ ಎತ್ತಿಕೊಂಡಿದ್ದಾರೆ. ಮಕ್ಕಳು ತಿನ್ನಲು ಮುಂದಾದಾಗ ಮೊಟ್ಟೆ ಕಸಿದು (Egg stolen) ಕೊಂಡಿದ್ದಾರೆ. ವಿಡಿಯೋ ನೋಡಿದರೆ ಕರುಳು ಚುರ್ ಎನ್ನುತ್ತದೆ.

ಈ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಇಬ್ಬರನ್ನೂ ಅಮಾನತುಗೊಳಿಸಲಾಗಿದೆ. ಇಬ್ಬರನ್ನೂ ಶಾಶ್ವತವಾಗಿ ಡಿಸ್​ಮಿಸ್ ಮಾಡಲು ಸೂಚಿಸಿದ್ದೇನೆ.

ಜೊತೆಗೆ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದ್ದೇನೆ. ಅಲ್ಲದೆ, ಸಂಬಂಧಿಸಿದ ಸಿಡಿಪಿಒ ವಿರುದ್ಧವೂ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ